PM Modi Isro Visit: ಚಂದ್ರಯಾನ 3 ಲ್ಯಾಂಡಿಂಗ್‌ ಸೈಟ್‌ನ ಹೆಸರು ಘೋಷಿಸಲಿದ್ದಾರೆಯೇ ಪ್ರಧಾನಿ ಮೋದಿ?

Published : Aug 26, 2023, 06:43 AM IST
PM Modi Isro Visit: ಚಂದ್ರಯಾನ 3 ಲ್ಯಾಂಡಿಂಗ್‌ ಸೈಟ್‌ನ ಹೆಸರು ಘೋಷಿಸಲಿದ್ದಾರೆಯೇ ಪ್ರಧಾನಿ ಮೋದಿ?

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಗ್ರೀಸ್‌ನ ಅಥೇನ್ಸ್‌ನಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದು, ಇಸ್ರೋ ವಿಜ್ಞಾನಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಅವರು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.  

ಬೆಂಗಳೂರು (ಆ.26): ದಕ್ಷಿಣ ಆಫ್ರಿಕಾ ಹಾಗೂ ಗ್ರೀಸ್‌ ಪ್ರವಾಸ ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ನೇರವಾಗಿ ಬೆಂಗಳೂರಿಗೆ ಆಗಮಿಸಿದರು. ಪ್ರಧಾನಮಂತ್ರಿಯವರ ನಿಗದಿತ ವೇಳಾಪಟ್‌ಟಿಯಲ್ಲಿ ಈ ಕಾರ್ಯಕ್ರಮವಿದ್ದಿರಲಿಲ್ಲ. ಆದರೆ, ಚಂದ್ರಯಾನ-3 ದೊಡ್ಡ ಮಟ್ಟದ ಯಶಸ್ಸು ಕಂಡ ಬಳಿಕ, ದಕ್ಷಿಣ ಆಫ್ರಿಕಾದಿಂದಲೇ ಇಸ್ರೋ ಅಭಿಮಾನಿಗಳನ್ನು ಮೋದಿ ಅಭಿನಂದಿಸಿದ್ದರು. ಈ ವೇಳೆ ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌ ಅವರಿಗೆ ನೇರವಾಗಿ ದೂರವಾಣಿ ಕರೆ ಮಾಡಿದ್ದ ಪ್ರಧಾನಿ ಮೋದಿ ಇಸ್ರೋಗೆ ಸ್ವತಃ ಬಂದು ತಮ್ಮೊಂದಿಗೆ ಮಾತನಾಡುವುದಾಗಿ ತಿಳಿಸಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್‌ ಶೃಂಗಸಭೆ ಮುಗಿಸಿ ಶುಕ್ರವಾರ ಅಥೇನ್ಸ್‌ಗೆ ತೆರಳಿದ್ದ ಪ್ರಧಾನಿ ಮೋದಿ, ಅಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅದಲ್ಲದೆ, ಗ್ರೀಸ್‌ ಸರ್ಕಾರದ 2ನೇ ಅತಿದೊಡ್ಡ ಗೌರವವನ್ನೂ ಪಡೆದುಕೊಂಡಿದ್ದರು. ತಡರಾತ್ರಿ ಗ್ರೀಸ್‌ನ ಅಥೇನ್ಸ್‌ನಿಂದಲೇ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಅವರು ಬೆಳಗ್ಗೆ 5.30ರ ವೇಳೆಗೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಅವರನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ ವಂದಿತಾ ಶರ್ಮ ಸ್ವಾಗತ ಮಾಡಿದ್ದರು.

ಇನ್ನು ಪ್ರಧಾನಿ ಮೋದಿ ಇಸ್ರೋಗೆ ಭೇಟಿ ನೀಡಿ ವಿಜ್ಞಾನಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎನ್ನುವುದನ್ನು ಇಸ್ರೋ ಕೂಡ ಟ್ವೀಟ್‌ ಮಾಡಿ ಖಚಿತ ಪಡಿಸಿದೆ. ಇದರ ನಡುವೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಚಂದ್ರಯಾನ-3 ಲ್ಯಾಂಡಿಂಗ್‌ ಸೈಟ್‌ಗೆ ಹೆಸರನ್ನು ಘೋಷಣೆ ಮಾಡಬಹುದು ಎನ್ನಲಾಗಿದೆ. ಚಂದ್ರಯಾನ-1 ವೇಳೆ ಮೂನ್‌ ಇಂಪ್ಯಾಕ್ಟ್‌ ಪ್ರೋಬ್‌ ಬಿದ್ದ ಸ್ಥಳವನ್ನು 2008ರಲ್ಲಿ ಅಂದು ಇದ್ದ ಕೇಂದ್ರ ಸರ್ಕಾರ ಜವಾಹರ್‌ ಪಾಯಿಂಟ್‌ ಎಂದು ಹೆಸರು ನೀಡಿತ್ತು. ಈ ಬಾರಿ ಪ್ರಧಾನಿ ಮೋದಿ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಇಳಿದ ಸ್ಥಳಕ್ಕೆ ಯಾವ ಹೆಸರು ನೀಡಲಿದ್ದಾರೆ ಎನ್ನುವ ಕುತೂಹಲವಿದೆ.

Nehru Point in Moon: ಭೂಮಿಯ ಮೇಲೆ ಇಂದಿರಾ ಪಾಯಿಂಟ್‌, ಚಂದ್ರನ ಮೇಲಿದೆ ನೆಹರು ಪಾಯಿಂಟ್‌!

ಚಂದ್ರಯಾನ-3 ಆಯ್ತು.. ಚಂದ್ರಯಾನ-4ಗೆ ರೆಡಿಯಾದ ಇಸ್ರೋ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್