ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ

Kannadaprabha News   | Kannada Prabha
Published : Aug 05, 2025, 05:38 AM IST
PM Modi

ಸಾರಾಂಶ

ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸುಮಾರು ಅರ್ಧ ಕಿ.ಮೀ.ನಷ್ಟು ರೋಡ್‌ ಶೋ ಕೂಡ ನಡೆಸಲಿದ್ದಾರೆ.

ಬೆಂಗಳೂರು : ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸುಮಾರು ಅರ್ಧ ಕಿ.ಮೀ.ನಷ್ಟು ರೋಡ್‌ ಶೋ ಕೂಡ ನಡೆಸಲಿದ್ದಾರೆ.

ಜಯನಗರದಲ್ಲಿರುವ ಶಾಲಿನಿ ಆಟದ ಮೈದಾನದಲ್ಲಿ ಮಧ್ಯಾಹ್ನ 12ಗಂಟೆಗೆ ಸಾರ್ವಜನಿಕ ಸಮಾವೇಶ ನಡೆಯಲಿದ್ದು, ಎಲೆಕ್ರ್ಟಾನಿಕ್ಸ್‌ ಮೆಟ್ರೋ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮೋದಿ ಅವರು ಜಯನಗರಕ್ಕೆ ಆಗಮಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಮಾವೇಶದ ಸಿದ್ಧತೆಯನ್ನು ಭರದಿಂದ ಆರಂಭಿಸಿರುವ ಬಿಜೆಪಿ ಮುಖಂಡರು ಸೋಮವಾರ ಜಯನಗರದ ಶಾಲಿನಿ ಆಟದ ಮೈದಾನದಲ್ಲಿ ವೇದಿಕೆಗೆ ಭೂಮಿ ಪೂಜೆ ನೆರವೇರಿಸಿದರು.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್‌, ಸ್ಥಳೀಯ ಶಾಸಕರೂ ಆಗಿರುವ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಸಿ.ಕೆ.ರಾಮಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌, ಹಳದಿ ಮಾರ್ಗದ ಮೆಟ್ರೋ ನಮ್ಮ ಬಹಳ ದಿನದ ಕನಸು. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ ಅವರು ಬೆಂಗಳೂರಿಗೆ ಮೆಟ್ರೋ ತಂದು ಕೊಟ್ಟರು. ಈ ಹಳದಿ ಮಾರ್ಗ ಮೆಟ್ರೋಗೆ ಪ್ರಧಾನಿ ಮೋದಿ ಅವರೇ ಶಂಕು ಸ್ಥಾಪನೆ ಮಾಡಿದ್ದರು. ಇದೀಗ ಅವರೇ ಉದ್ಘಾಟನೆ ಮಾಡುತ್ತಿರುವುದು ಇತಿಹಾಸ. ಇದರಿಂದ ಈ ಭಾಗದ ವಾಹನ ಸಂಚಾರ ದಟ್ಟಣೆ ಸಮಸ್ಯೆ ಸಾಕಷ್ಟು ಕಡಿಮೆ ಆಗಲಿದೆ ಎಂದರು.

ಸಿ.ಕೆ.ರಾಮಮೂರ್ತಿ ಮಾತನಾಡಿ, ಮೋದಿ ಅವರ ಆಗಮನದ ಹಿನ್ನೆಲೆ ಜಯನಗರದ ಶಾಲಿನಿ ಆಟದ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾರ್ಯಕ್ರಮ ಯಶಸ್ವಿ ಅಗಲಿ ಎಂಬ ಉದ್ದೇಶದಿಂದ ಪೂಜೆ ಮಾಡಿದ್ದೇವೆ. ಸುಮಾರು 40 ಸಾವಿರ ಜನ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ರಾಗಿಗುಡ್ಡದ ಮೆಟ್ರೋ ನಿಲ್ದಾಣದಿಂದ ಶಾಲಿನಿ ಮೈದಾನಕ್ಕೆ ವಾಹನದಲ್ಲಿ ರೋಡ್‌ ಶೋ ಮೂಲಕ ಮೋದಿ ಆಗಮಿಸಲಿದ್ದಾರೆ. ಸಾವಿರಾರು ಜನ ಪಾಲ್ಗೊಂಡು ಮೋದಿ ಅವರನ್ನು ಸ್ವಾಗತಿಸಲಿದ್ದಾರೆ ಎಂದು ವಿವರಿಸಿದರು.

10ರಂದು ಮೆಟ್ರೋದಲ್ಲಿ ಮೋದಿ ಪಯಣ

ಆ,10ರಂದು ಬೆಂಗಳೂರು ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆ ನೆರವೇರಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಮೆಟ್ರೋ ರೈಲಿನಲ್ಲೇ ಪ್ರಯಾಣಿಸಲಿರುವುದು ವಿಶೇಷ. ಜತೆಗೆ ಮೆಟ್ರೋ ರೈಲಿನಲ್ಲಿ ಅವರು ಪ್ರಯಾಣಿಕರೊಂದಿಗೆ ಅನೌಪಚಾರಿಕವಾಗಿ ಸಂವಾದವನ್ನೂ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ನಂತರ ಅವರು ಸಮಾವೇಶಕ್ಕೆ ತೆರಳಲಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸೇವೆಯಲ್ಲಿಯೇ ಸಾರ್ಥಕತೆ ಪಡೆಯುವ ಗೃಹ ರಕ್ಷಕರು
ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ರಾಜ್ಯ ಮೊದಲ ಸ್ಥಾನ: ಗೃಹಸಚಿವ ಪರಮೇಶ್ವರ್