ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ 19ಕ್ಕೆ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಕಂದಾಯ ಸಚಿವ ಆರ್.ಅಶೋಕ ಅವರು ಕಲಬುರಗಿ ನಗರದ ಐವಾನ್-ಎ-ಶಾಹಿತಿ ಅತಿಥಿಗೃಹದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತೆ ಪರಿಶೀಲನಾ ಸಭೆ ನಡೆಸಿದರು.
ಕಲಬುರಗಿ (ಜ.13): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ 19ಕ್ಕೆ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಕಂದಾಯ ಸಚಿವ ಆರ್.ಅಶೋಕ ಅವರು ಕಲಬುರಗಿ ನಗರದ ಐವಾನ್-ಎ-ಶಾಹಿತಿ ಅತಿಥಿಗೃಹದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತೆ ಪರಿಶೀಲನಾ ಸಭೆ ನಡೆಸಿದರು.
ಪ್ರಧಾನಮಂತ್ರಿಗಳು ಅಂದು ಮಳಖೇಡ್‍ದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಇತಿಹಾಸದಲ್ಲಿಯೇ ಏಕಕಾಲದಲ್ಲಿ ಕಲಬುರಗಿ ಸೇರಿದಂತೆ ರಾಯಚೂರು, ಬೀದರ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಿದ್ದು, ಕಾರ್ಯಕ್ರಮ ಶಿಷ್ಠಾಚಾರದಂತೆ ಅಚ್ಚುಕಟ್ಟಾಗಿ ನೆರವೇರುವಂತೆ ಎಲ್ಲಾ ಪೂರ್ವಸಿದ್ಧತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
undefined
ಸಿದ್ದು ದಿಕ್ಕು ಕಾಣದೆ ಅಲೆಯುತ್ತಿರುವ ನಾಯಕ: ಸಚಿವ ಅಶೋಕ್ ಲೇವಡಿ
ಕಾರ್ಯಕ್ರಮಕ್ಕೆ ವಿವಿಧ ಜಿಲ್ಲೆಗಳ ಫಲಾನುಭವಿಗಳ ಜೊತೆಗೆ ಮೋದಿ ಅಭಿಮಾನಿಗಳ ಸಹ ಆಗಮಿಸುವುದರಿಂದ, ಬೃಹತ್ ಜರ್ಮನ್ ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಊಟ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವು ವ್ಯವಸ್ಥಿತವಾಗಿರಬೇಕು. ಅಂದು ಫಲಾನುಭವಿಗಳನ್ನು ಬೆಳಿಗ್ಗೆ ಊರಿನಿಂದ ಬಿಡುವಾಗಲೆ ಉಪಹಾರ ಮಾಡಿಕೊಂಡೇ ಕರೆತರಬೇಕು. ಮುನ್ನೆಚ್ಚರಿಕೆಯಾಗಿ ಕಾರ್ಯಕ್ರಮ ಸ್ಥಳದಲ್ಲಿ ಅಂಬುಲೆನ್ಸ್, ಅಗ್ನಿಶಾಮಕ ವಾಹನ ತೈನಾತಿಸಬೇಕು.
ಬೇರೆ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರುವ ಅಧಿಕಾರಿಗಳೊಂದಿಗೆ ಹಿರಿಯ ಅಧಿಕಾರಿಗಳನ್ನು ಸಮನ್ವಯ ಅಧಿಕಾರಿಗಳನ್ನಾಗಿ ಸಾಧಿಸಬೇಕು ಎಂದು ಸೂಚಿಸಿದ ಸಚಿವರು, ಯಾವುದೇ ಲೋಪಕ್ಕೆ ಇಲ್ಲಿ ಅವಕಾಶ ನೀಡಕೂಡದು ಎಂದು ಎಚ್ಚರಿಕೆ ನೀಡಿದರು. ರಾಜ್ಯ ಹೆದ್ದಾರಿ-10ರಲ್ಲಿ ಅಂದು 60 ಕಿ.ಮಿ. ಅಂತರದಲ್ಲಿ ಅಂಬುಲೆನ್ಸ್ ಸೇವೆ (108) ಒದಗಿಸಬೇಕು. ವಿವಿಧ ಜಿಲ್ಲೆಗಳಿಂದ ಬಸ್‍ಗಳಲ್ಲಿ ಫಲಾನುಭವಿಗಳು ಬರುವುದರಿಂದ ಬಸ್‍ಗಳು ಕೆಟ್ಟಲ್ಲಿ ಕೂಡಲೆ ದುರಸ್ತಿಗೂ ಏರ್ಪಾಡು ಮಾಡಬೇಕು ಎಂದು ಸಚಿವ ಆರ್.ಅಶೋಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕಬಳ್ಳಾಪುರ ಉತ್ಸವ ಪ್ರತಿ ವರ್ಷ ಅದ್ಧೂರಿಯಾಗಿ ನಡೆಯಲಿ: ಸಚಿವ ಆರ್.ಅಶೋಕ್
ಸಚಿವರಿಂದ ಭೂಮಿ ಪೂಜೆ: ನಂತರ ಸಚಿವ ಆರ್.ಅಶೋಕ ಅವರು ಪ್ರಧಾನಮಂತ್ರಿಗಳ ಕಾರ್ಯಕ್ರಮ ನಿಗದಿಯಾಗಿರುವ ಸೇಡಂ ತಾಲೂಕಿನ ಮಳಖೇಡ್ ರಾಜ್ಯ ಗೆದ್ದಾರಿ-10ಕ್ಕೆ ಹೊಂದಿಕೊಂಡಿರುವ ಸ್ಥಳಕ್ಕೆ ಭೇಟಿ ನೀಡಿ, ವೇದಿಕೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿದರು. ವೇದಿಕೆ ಸ್ಥಳ, ಸಾರ್ವಜನಿಕ ಆಸನದ ಸ್ಥಳ, ಊಟದ ಕೌಂಟರ್ ಸ್ಥಳ ಎಲ್ಲವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನೆಲಸಮಗೊಳಿಸುವ ಕಾರ್ಯದಲ್ಲಿ ನಿರತವಾಗಿದ್ದ ಟ್ರ್ಯಾಕ್ಟರ್ ಹತ್ತಿದ ಸಚಿವರು, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ ಸೇರಿದಂತೆ ಇನ್ನಿತರು ಕೂಡಿಸಿಕೊಂಡು ಒಂದು ಸುತ್ತು ಟ್ರಾಕ್ಟರ್ ಚಲಿಸಿ ಗಮನ ಸೆಳೆದರು. ಶಾಸಕ ಡಾ.ಅವಿನಾಶ ಜಾಧವ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಎಸ್.ಪಿ. ಇಶಾ ಪಂತ್, ಸಹಾಯಕ ಆಯುಕ್ತ ಕಾರ್ತಿಕ ರೆಡ್ಡಿ, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಸೇರಿದಂತೆ ಇನ್ನಿತರರು ಇದ್ದರು.