ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಮಧುಸೂಧನ್ ಸಾಯಿ ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಚಿಕ್ಕಬಳ್ಳಾಪುರ (ಮಾ.25): ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಮಧುಸೂಧನ್ ಸಾಯಿ ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಇದೊಂದು ಸೇವಾ ಮನೋಭಾವ ಹೊಂದಿರುವ ಸಂಸ್ಥೆಯಾಗಿದ್ದು, ಈ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು.
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರಕ್ಕೆ ಮುಂದಾಗಿರುವ ಮೋದಿ, 2003ರಲ್ಲಿ ರಾಜ್ಯಕ್ಕೆ ನೀಡುತ್ತಿರುವ 7ನೇ ಭೇಟಿ ಇದಾಗಿದೆ. ಬೆಳಗ್ಗೆ 7.40ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಮೋದಿ, 10.35ಕ್ಕೆ ಹೆಲಿಕಾಪ್ಟರ್ ಮೂಲಕ ಮುದ್ದೇನಹಳ್ಳಿಗೆ ತೆರಳಲಿದ್ದಾರೆ. ಬಳಿಕ, ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳಕ್ಕೆ ತೆರಳಿ, ಸರ್‌ಎಂವಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪುಪ್ಪನಮನ ಸಲ್ಲಿಸಲಿದ್ದಾರೆ. ಬಳಿಕ, ಸದ್ಗುರು ಶ್ರೀ ಮಧುಸೂಧನ್ ಸಾಯಿ ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚೆಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಹಲವು ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಕೆ.ಆರ್.ಪುರ-ವೈಟ್‌ಫೀಲ್ಡ್ 'ನಮ್ಮ ಮೆಟ್ರೋ'ಗೆ ಮೋದಿ ನಿಶಾನೆ
ಉಚಿತ ಸೇವೆ ನೀಡಲಿರುವ ಆಸ್ಪತ್ರೆ: 2022ರ ಏಪ್ರೀಲ್ ತಿಂಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಆಸ್ಪತ್ರೆಯ ಕಾಮಗಾರಿಗೆ ಅಡಿಗಲ್ಲು ಹಾಕಿದ್ದರು. ಕೆಲವೇ ತಿಂಗಳಲ್ಲಿ ಕಟ್ಟಡ ನಿರ್ಮಾಣಗೊಂಡಿದ್ದು, ಈ ಉದ್ಘಾಟನೆಗೆ ಸಜ್ಜಾಗಿದೆ. ಸಾರ್ವಜನಿಕರಿಗೆ ಇಲ್ಲಿ ಉಚಿತವಾಗಿ ವೈದ್ಯಕೀಯ ಸೇವೆ ನೀಡಲಾಗುವುದು. ಸದ್ಯಕ್ಕೆ ಪ್ರತಿ ವರ್ಷ ಇಲ್ಲಿ 100 ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ಗೆ ಪ್ರವೇಶ ನೀಡಲಾಗುವುದು. ಇಲ್ಲಿ 22 ವಿಭಾಗಗಳಿವೆ. ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹೊಂದಿಕೊಂಡ ಆಸ್ಪತ್ರೆಯಲ್ಲಿ 360 ಹಾಸಿಗೆಗಳ ಸಾಮರ್ಥ್ಯವಿದ್ದು 360 ಹಾಸಿಗೆಗಳನ್ನು ಸಾಮಾನ್ಯ ಕಾಯಿಲೆಗಳ ಚಿಕಿತ್ಸೆಗೆ ಮೀಸಲಿಟ್ಟಿರೆ ತಲಾ 30 ಹಾಸಿಗೆಗಳನ್ನು ತುರ್ತು ಚಿಕಿತ್ಸೆ ಮತ್ತು ತೀವ್ರ ನಿಗಾ ಘಟಕದ ಚಿಕಿತ್ಸೆಗೆ ಕಾಯ್ದಿರಿಸಲಾಗಿದೆ.
ಕೋಲಾರ, ವರುಣಾ ಎರಡೂ ಕಡೆ ಸ್ಪರ್ಧೆಗೆ ಸಿದ್ದರಾಮಯ್ಯ ಸಿದ್ಧತೆ: ಹೈಕಮಾಂಡ್‌ನಿಂದಲೂ ಒಪ್ಪಿಗೆ ಸಾಧ್ಯತೆ
ಕಾರ್ಯಕ್ರಮ ವಿವರ
ಬೆಳಗ್ಗೆ 7.40: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಗಮನ.
10.35: ಹೆಲಿಕಾಪ್ಟರ್ ಮೂಲಕ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ಭೇಟಿ.
ಸರ್.ಎಂ.ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳಕ್ಕೆ ತೆರಳಿ, ಸರ್‌ಎಂವಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪುಪ್ಪ ನಮನ ಸಲ್ಲಿಕೆ.
10.40: ರಸ್ತೆ ಮೂಲಕ ಕಾರ್ಯಕ್ರಮದ ವೇದಿಕೆಗೆ ಆಗಮನ.
10.45: ಸದ್ಗುರು ಶ್ರೀ ಮಧುಸೂಧನ್ ಸಾಯಿ ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆ ಲೋಕಾರ್ಪಣೆ.
ಮಧ್ಯಾಹ್ನ 12.15: ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಆಗಮನ.