ಪ್ರಧಾನಿ ನರೇಂದ್ರ ಮೋದಿ ಅವರು ಜ.12ರಂದು ಹುಬ್ಬಳ್ಳಿ- ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಜ.12ರಂದು ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿ (ಡಿ.25): ಪ್ರಧಾನಿ ನರೇಂದ್ರ ಮೋದಿ ಅವರು ಜ.12ರಂದು ಹುಬ್ಬಳ್ಳಿ- ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಜ.12ರಂದು ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸ್ವಾಮಿ ವಿವೇಕಾನಂದ ಜನ್ಮದಿನದ ನಿಮಿತ್ತ ಜ.12ರಿಂದ 16ರವರೆಗೆ ರಾಷ್ಟ್ರೀಯ ಯುವಜನೋತ್ಸವ ಹಮ್ಮಿಕೊಳ್ಳಲಾಗಿದೆ. ವಿವಿಧ ರಾಜ್ಯಗಳ 8 ಸಾವಿರ ಯುವಕರು ಭಾಗವಹಿಸಲಿದ್ದಾರೆ ಎಂದಿದ್ದಾರೆ.
ಮಹದಾಯಿ ಬಗ್ಗೆ ಮಾತನಾಡೋ ನೈತಿಕತೆ ಕಾಂಗ್ರೆಸ್ಸಿಗಿಲ್ಲ: ಮಹದಾಯಿ ಯೋಜನೆ ಬಗ್ಗೆ ಮಾತನಾಡುವ ನೈತಿಕತೆಯನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ಯುಪಿಎ ಅಧಿಕಾರದಲ್ಲಿದ್ದಾಗ ಕುಡಿಯುವ ನೀರಿಗಾಗಿ ನಾವೆಲ್ಲರೂ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಬೇಡಿಕೊಂಡಿದ್ದೆವು. ಆಗ ಅದಕ್ಕೆ ಸ್ಪಂದಿಸಲಿಲ್ಲ. ನಾವು ಅಧಿಕಾರಕ್ಕೆ ಬಂದ ಬಳಿಕ ಆ ಯೋಜನೆಯನ್ನು ಒಂದು ಹಂತಕ್ಕೆ ತಂದಿದ್ದೇವೆ.
ಫೆಬ್ರವರಿಯಲ್ಲಿ ರಾಜ್ಯ ಬಜೆಟ್: ಸಿಎಂ ಬಸವರಾಜ ಬೊಮ್ಮಾಯಿ
ಯೋಜನೆ ಜಾರಿ ಕುರಿತು ಈಗಾಗಲೇ ಕೇಂದ್ರ ಸರ್ಕಾರ ನೋಟಿಫಿಕೇಷನ್ ಹೊರಡಿಸಿದೆ. ಆದರೆ, ಅವರು ಈಗ ಬಂದು ಪಾದಯಾತ್ರೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಅಡುಗೆ ಸಿದ್ಧ ಮಾಡುವುದು ನಾವು, ಇದರ ಮಧ್ಯೆ ಬಂದು ಒಗ್ಗರಣೆ ಹಾಕಿ ಅಡುಗೆ ಎಲ್ಲ ನಾವೇ ಮಾಡಿದ್ದು ಎನ್ನುವ ರೀತಿ ಕಾಂಗ್ರೆಸ್ ನಾಯಕರು ವರ್ತಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಪಾದಯಾತ್ರೆ ನಡೆದಲ್ಲೆಲ್ಲ ಕಾಂಗ್ರೆಸ್ ಸೋಲು: ಕೋವಿಡ್ ಹೆಸರಿನಲ್ಲಿ ಬಿಜೆಪಿಯವರು ಕಾಂಗ್ರೆಸ್ ಪಾದಯಾತ್ರೆ ತಡೆಯುತ್ತಿದ್ದಾರೆಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರ ಪಾದಯಾತ್ರೆ ಯಶಸ್ವಿಯಾಗಿ ನಡೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಸಂಪುಟ ಸರ್ಕಸ್: ಸೋಮವಾರ ಸಿಎಂ ಬೊಮ್ಮಾಯಿ ದಿಲ್ಲಿಗೆ
ಯಾಕೆಂದರೆ ಅವರು ಪಾದಯಾತ್ರೆ ಮಾಡಿದ ಸ್ಥಳದಲ್ಲಿ ಕಾಂಗ್ರೆಸ್ ಸೋಲುತ್ತದೆ. ಹೀಗಾಗಿ ಕೋವಿಡ್ ಕಾಂಗ್ರೆಸ್ಸಿಗೆ ವರವಾಗಿ ಪರಿಣಮಿಸುತ್ತಿದೆ ಎಂದು ಕಟುಕಿದರು. ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಯಲಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ, ಅವಧಿ ಪೂರ್ವ ಚುನಾವಣೆಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಭಾರೀ ಬಹುಮತ ಗಳಿಸುವ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.