* 2 ದಿನ ಬೆಂಗಳೂರು, ಮೈಸೂರಿಗೆ ಪಿಎಂ ಭೇಟಿ
* ಜೂ. 20ರಂದು ಬೆಂಗಳೂರಲ್ಲಿ ಐಐಎಸ್ಸಿಗೆ ಭೇಟಿ, ಸಬರ್ಬನ್ ರೈಲು ಯೋಜನೆಗೆ ಶಂಕು
* ದಾಬಸ್‌ಪೇಟೆ ರಿಂಗ್ ರಸ್ತೆ, ಜ್ಞಾನಭಾರತಿ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಉದ್ಘಾಟನೆ
ಬೆಂಗಳೂರು(ಜೂ.15): ಕರ್ನಾಟಕದಲ್ಲಿ ಚುನಾವಣಾ ವರ್ಷ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ರಾಷ್ಟ್ರೀಯ ನಾಯಕರ ರಾಜ್ಯ ಭೇಟಿ ಕ್ರಮೇಣವಾಗಿ ಹೆಚ್ಚುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳ 20 ಮತ್ತು 21ರಂದು ಎರಡು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ದಿನಗಳ ಕಾಲ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಬುಧವಾರ ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಅವರ ರಾಜ್ಯ ಪ್ರವಾಸ ಕುರಿತು ಮಾಹಿತಿ ನೀಡಿದರು. ಜೂ.20ರ ಬೆಳಗ್ಗೆ 11.55ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ರಸ್ತೆಯ ಮೂಲಕ 12.10ಕ್ಕೆ ಭಾರತೀಯ ವಿಜ್ಞಾನ ಸಂಸ್ಥೆಗೆ (ಐಐಎಸ್‌ಸಿ) ಭೇಟಿ ನೀಡಿ ಅಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 12.40ಕ್ಕೆ ಕಾರ್ಯಕ್ರಮ ಮುಗಿಯಲಿದ್ದು, ಹೆಲಿಕಾಪ್ಟರ್ ಮೂಲಕ ಕೊಮ್ಮಘಟ್ಟಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ಮೋದಿ ನಾಯಿ ರೀತಿ ಸಾಯ್ತಾರೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ ಶೇಖ್ ಹುಸೇನ್!
ಕೊಮ್ಮಘಟ್ಟದಲ್ಲಿ ಆಯೋಜಿಸಿರುವ ಸಬ್‌ಅರ್ಬನ್ ರೈಲು ಯೋಜನೆಗೆ ಮತ್ತು ಲಾಜಿಸ್ಟಿಕ್ ಪಾರ್ಕ್ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ದಾಬಸ್‌ಪೇಟೆಯಿಂದ ಹಳೆ ಮದ್ರಾಸ್ ರಸ್ತೆಯವರೆಗಿನ ಸ್ಯಾಟಲೆಟ್ ಟೌನ್ ರಿಂಗ್ ರಸ್ತೆ ಯೋಜನೆಗೆ ಚಾಲನೆ ನೀಡಲಿದ್ದಾರೆ. ನಂತರ ಮಧ್ಯಾಹ್ನ 2.30ರ ಸುಮಾರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ನಡೆಯುವ ಅಂಬೇಡ್ಕರ್ ಸ್ಕೂಲ್ ಅಫ್ ಎಕಾಮಿಕ್ಸ್ ಸಂಸ್ಥೆಗೆ ಬರಲಿದ್ದಾರೆ. ಅಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ ಮತ್ತು ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮ ಮುಗಿಸಿಕೊಂಡು ಸಂಜೆ 3.50ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದಾರೆ ಎಂದು ಹೇಳಿದರು.
18 ತಿಂಗಳಲ್ಲಿ 10 ಲಕ್ಷ ಉದ್ಯೋಗ ನೇಮಕಾತಿ, ಸಂಚಲನ ಸೃಷ್ಟಿಸಿದ ಪ್ರಧಾನಿ ಮೋದಿ ಘೋಷಣೆ!
ಮರುದಿನ ಜೂ.21ರಂದು ವಿÜಶ್ವ ಯೋಗ ದಿನ ಪ್ರಯುಕ್ತ ಮೈಸೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತಿ ವರ್ಷ ಯೋಗ ದಿನಾಚರಣೆಯಂದು ದೇಶದ ವಿವಿಧೆಡೆ ಭಾಗಿಯಾಗುತ್ತಾರೆ. ಪ್ರತಿ ಬಾರಿಯೂ ಒಂದೊಂದು ಕಡೆ ಭಾಗಿಯಾಗುತ್ತಾರೆ. ಈ ಬಾರಿ ಮೈಸೂರಿನಲ್ಲಿ ಭಾಗಿಯಾಗುತ್ತಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಭರ್ಜರಿ ಸ್ವಾಗತ:
ಇದೇ ವೇಳೆ ಪ್ರಧಾನಿ ಮೋದಿ ಅವರು ಯಲಹಂಕ ವಾಯುನೆಲೆಯಿಂದ ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆಗೆ ಆಗಮಿಸುವ ಮಾರ್ಗ ಮಧ್ಯೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಹಾಜರಿದ್ದು ಭರ್ಜರಿ ಸ್ವಾಗತ ನೀಡಬೇಕು ಎಂದು ಹೇಳಿದರು.