ಮಾರ್ಚ್‌ನಲ್ಲಿ 3 ಬಾರಿ ಕರ್ನಾಟಕಕ್ಕೆ ಮೋದಿ ಆಗಮನ

Published : Mar 02, 2023, 09:23 AM IST
ಮಾರ್ಚ್‌ನಲ್ಲಿ 3 ಬಾರಿ ಕರ್ನಾಟಕಕ್ಕೆ ಮೋದಿ ಆಗಮನ

ಸಾರಾಂಶ

ಮಂಡ್ಯ, ದಾವಣಗೆರೆ, ಅಂಜನಾದ್ರಿ ಬೆಟ್ಟಕ್ಕೆ ಭೇಟಿ ಸಂಭವ, ಚುನಾವಣಾ ದಿನಾಂಕ ಘೋಷಣೆ ಮುನ್ನವೇ ಭರ್ಜರಿ ಕರ್ನಾಟಕ ಪ್ರವಾಸ 

ಬೆಂಗಳೂರು(ಮಾ.02):  ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆ ಘೋಷಣೆಯಾಗುವ ಮೊದಲೇ ಈ ತಿಂಗಳಲ್ಲಿ ಮೂರು ಬಾರಿ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಯಿದೆ. ಈ ಪೈಕಿ ಎರಡು ಬಾರಿ ಆಗಮಿಸುವುದು ನಿಶ್ಚಿತವಾಗಿದೆ. ಮೂರನೇ ಬಾರಿ ಆಗಮಿಸುವ ಕಾರ್ಯಕ್ರಮದ ರೂಪುರೇಷೆ ಅಂತಿಮಗೊಳ್ಳಬೇಕಿದೆ ಎಂದು ಮೂಲಗಳು ತಿಳಿಸಿವೆ.

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯನ್ನು ಮಾ.12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ನಿರೀಕ್ಷೆಯಿದೆ. ಈ ಮೊದಲು 11ರಂದು ಮಂಡ್ಯಕ್ಕೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಇದೀಗ ಒಂದು ದಿನ ಮುಂದೂಡಲ್ಪಟ್ಟಿದೆ. ಇದು 16ಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಮೋದಿ, ಶಾ ಬಂದಾಗಲೆಲ್ಲಾ ರಾಜ್ಯದಲ್ಲಿ ಅಭಿವೃದ್ಧಿ ಯೋಜನೆ ಉದ್ಘಾಟನೆ: ಸಿಎಂ ಬೊಮ್ಮಾಯಿ

ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿದೆ. ವಿಶೇಷ ಭದ್ರತಾ ಪಡೆ ಅನುಮತಿ ನೀಡಿದರೆ ಸುಮಾರು 2 ಕಿ.ಮೀ. ದೂರ ರೋಡ್‌ ಶೋ ಮಾಡಲು ಉದ್ದೇಶಿಸಲಾಗಿದೆ. ರೋಡ್‌ ಶೋ ನಂತರ ಸಾರ್ವಜನಿಕ ಸಭೆಯನ್ನು ಮದ್ದೂರ ಬಳಿಯ ಗೆಜ್ಜೆಲಗೆರೆಯಲ್ಲಿ ಆಯೋಜಿಸಲಾಗಿದೆ ಎಂದು ಮೈಸೂರಿನ ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.

ಇನ್ನು ಈ ತಿಂಗಳ 25ರಂದು ದಾವಣಗೆರೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಚುನಾವಣೆಯ ನೀತಿ ಸಂಹಿತೆ ಘೋಷಣೆಯಾಗುವುದು ವಿಳಂಬವಾಗಬಹುದಾದರೆ ಈ ಸಮಾರೋಪ ಸಮಾರಂಭವನ್ನು 28ಕ್ಕೆ ನಡೆಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ.

ಈ ಮಧ್ಯೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾರ್ಯಕ್ರಮ ಆಯೋಜಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಬಗ್ಗೆ ಸಮಾಲೋಚನೆ ನಡೆದಿದೆ. ಈ ಬಗ್ಗೆ ಕೊಪ್ಪಳ ಜಿಲ್ಲಾ ಉಸ್ತುವಾರಿಯೂ ಆಗಿರುವ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಆಸಕ್ತಿ ತೋರಿದ್ದು, ಪ್ರಯತ್ನ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!