
ಬೆಂಗಳೂರು(ಜ.10): ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿ ಹೆಚ್ಚಳಗೊಂಡಿದ್ದು, ಈ ತಿಂಗಳ 12 ಮತ್ತು 19ರಂದು ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸುವ ಸಂಬಂಧ ಪ್ರಧಾನಿ ಮೋದಿ ಅವರು ಜ.12ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದರು.
ವಿಶ್ವದ ಅತೀ ಉದ್ದದ ನದಿ ಹಡಗು ಯಾನಕ್ಕೆ ಜ.13ಕ್ಕೆ ಪ್ರಧಾನಿ ಚಾಲನೆ
ಬಳಿಕ 19ರಂದು ಪ್ರಧಾನಿ ಮೋದಿ ಅವರು ಕಲಬುರಗಿಗೆ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್‌ಎಲ್‌ಬಿಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕಲಬುರಗಿಯಲ್ಲಿ ಬಂಜಾರ ಸಮಾವೇಶ ನಡೆಸುವ ಚಿಂತನೆಯಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ