ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ: ಬೋಯಿಂಗ್‌ ಕೇಂದ್ರ ಉದ್ಘಾಟನೆ

By Kannadaprabha NewsFirst Published Jan 19, 2024, 8:24 AM IST
Highlights

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನ ದೇವನಹಳ್ಳಿ ಬಳಿಯ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ (ಬಿಐಇಟಿಸಿ) ಉದ್ಘಾಟನೆ ಹಾಗೂ ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ‘ಬೋಯಿಂಗ್ ಸುಕನ್ಯಾ’ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 
 

ಬೆಂಗಳೂರು (ಜ.19): ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನ ದೇವನಹಳ್ಳಿ ಬಳಿಯ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ (ಬಿಐಇಟಿಸಿ) ಉದ್ಘಾಟನೆ ಹಾಗೂ ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ‘ಬೋಯಿಂಗ್ ಸುಕನ್ಯಾ’ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಶುಕ್ರವಾರ ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿ ಅವರು, ಹೆಲಿಕಾಪ್ಟರ್‌ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಲಿದ್ದಾರೆ. 

ಅಲ್ಲಿಂದ ವಾಪಸಾಗಿ ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 2.10ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ದೇವನಹಳ್ಳಿ ತಾಲೂಕಿನ ಭಟ್ಟರಮಾರನಹಳ್ಳಿಗೆ ತೆರಳಿ ಅಲ್ಲಿ ಬಿಐಇಟಿಸಿ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 3.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ. ಸಂಜೆ 4 ಗಂಟೆಗೆ ಚೆನ್ನೈಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Latest Videos

ಲಾಲ್‌ಬಾಗ್‌ನಲ್ಲಿ ಆಕರ್ಷಿಸುತ್ತಿದೆ ‘ವಿಶ್ವಗುರು ಬಸವಣ್ಣ’ ಫಲಪುಷ್ಪ ಪ್ರದರ್ಶನ: ಶಾಲಾ ಮಕ್ಕಳಿಗೆ ಉಚಿತ ಪ್ರವೇಶ!

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಲಾಭ ಪಡೆಯಿರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಆಯೋಜಿಸಲಾಗಿದೆ. ಎಲ್ಲ ಕಾರ್ಯಕರ್ತರು ಮತ್ತು ಅಭಿಮಾನಿಗಳು ಕೇಂದ್ರದ ಯೋಜನೆಗಳ ಮಾಹಿತಿ ಪಡೆದುಕೊಂಡು, ಅವುಗಳ ಲಾಭ ಪಡೆದುಕೊಳ್ಳಬೇಕೆಂದು ಬ್ಯಾಂಕಿಂಗ್ ಅಧಿಕಾರಿ ಸಿಂಧು ಚಿಂಡಕ ತಿಳಿಸಿದರು.

ಹೊಸೂರ ಹಾಗೂ ಬನಹಟ್ಟಿಯಲ್ಲಿ ಜರುಗಿದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 2047ರ ವೇಳೆಗೆ ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಕಲ್ಪ ಹೊಂದಿದ್ದಾರೆ. ಕೇಂದ್ರದ ವಿವಿಧ ಯೋಜನೆಗಳ ಮಾಹಿತಿ ಎಲ್‌ಇಡಿ ಪರದೆಯ ವಾಹನಗಳ ಮೂಲಕ ಗ್ರಾಪಂ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಲೋಕಸಭೆ ಚುನಾವಣೆಗೆ ಪ್ರಕಾಶ ಹುಕ್ಕೇರಿ ಸ್ಪರ್ಧಿಸಲು ತಿಳಿಸಿರುವೆ: ಸಿಎಂ ಸಿದ್ದರಾಮಯ್ಯ

ಶಿವಾನಂದ ಗಾಯಕವಾಡ ಮಾತನಾಡಿ, ಪಿಎಂಜೆಜೆಬಿವೈ, ಪಿಎಂಎಸ್‌ಬಿವೈ, ಎಪಿವೈ, ಪಿಎಂ ಸ್ವಾನಿಧಿ, ಪಿಎಂ ವಿಶ್ವಕರ್ಮ ಮುದ್ರಾ ಯೋಜನೆ ಅಡಿ ನೋಂದಣಿಯಲ್ಲಿ ಜಿಲ್ಲೆಯ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಿರಿಯ ಧುರೀಣ ಸುರೇಶ ಚಿಂಡಕ ಮಾತನಾಡಿ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳನ್ನು ಸಂಘಟಿಸುವುದು, ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಇದರ ಸೌಲಭ್ಯಗಳು ಸಿಗುವಂತೆ ಮಾಡುವ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಮುಂದಿನ ಬಾರಿಯೂ ದೇಶಕ್ಕೆ ಪ್ರಧಾನಿ ಮೋದಿ ಅನಿವಾರ್ಯ ಎಂಬುದನ್ನು ಬಿಂಬಿಸಬೇಕು ಎಂದು ಮನವಿ ಮಾಡಿದರು.

click me!