ಸಫಾರಿ ಡ್ರೆಸ್‌ನಲ್ಲಿ ಮಿಂಚಿದ ಪ್ರಧಾನಿ ಮೋದಿ: ಹೀರೋ ಥರ ಕಾಣುತ್ತಿದ್ದಾರೆ ಎಂದ ನೆಟ್ಟಿಗರು

Published : Apr 09, 2023, 08:39 AM ISTUpdated : Apr 09, 2023, 08:41 AM IST
ಸಫಾರಿ ಡ್ರೆಸ್‌ನಲ್ಲಿ ಮಿಂಚಿದ ಪ್ರಧಾನಿ ಮೋದಿ: ಹೀರೋ ಥರ ಕಾಣುತ್ತಿದ್ದಾರೆ ಎಂದ ನೆಟ್ಟಿಗರು

ಸಾರಾಂಶ

ಮೈಸೂರಲ್ಲಿ ನಡೆಯಲಿರುವ ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲೂ  ಮೋದಿ ಭಾಗಿಯಾಗಲಿದ್ದು, 2022ರ ಹುಲಿ ಸಮೀಕ್ಷಾ ವರದಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ನಡೆಯುವ ಹುಲಿ ಯೋಜನೆಯ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರದಲ್ಲಿ 2022ರ ಹುಲಿ ಸಮೀಕ್ಷಾ ವರದಿ ಹಾಗೂ ಹುಲಿ ಯೋಜನೆಯ 50ನೇ ವರ್ಷಾಚರಣೆ ಅಂಗವಾಗಿ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ. 

ಮೈಸೂರು / ಚಾಮರಾಜನಗರ (ಏಪ್ರಿಲ್ 9, 2023): ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳ ಆವಾಸ ಸ್ಥಾನವಾಗಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಯೋಜನೆಗೆ 50 ವರ್ಷ ತುಂಬಿದ ಸಂದರ್ಭದಲ್ಲಿ ಹಾಗೂ  'ಪ್ರಾಜೆಕ್ಟ್ ಟೈಗರ್' 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಂಡೀಪುರ ಅರಣ್ಯದಲ್ಲಿ ಪ್ರಧಾನಿ ಮೋದಿ ಸಫಾರಿ ಆರಂಭಿಸಿದ್ದಾರೆ. ಹುಲಿ ರಕ್ಷಿತಾರಣ್ಯದಲ್ಲಿ ಸುಮಾರು 15 - 20 ಕಿ.ಮೀ. ವರೆಗೆ ಮೋದಿ 2 ಗಂಟೆಗಳ ಕಾಲ ಸಫಾರಿ ನಡೆಸುತ್ತಿದ್ದಾರೆ. 

ಸಫಾರಿ ಮಾತ್ರವಲ್ಲದೆ, ಸಂರಕ್ಷಣಾ ಚಟುವಟಿಕೆಗಳಲ್ಲಿ ತೊಡಗಿರುವ ಮುಂಚೂಣಿಯ ಕ್ಷೇತ್ರ ಸಿಬ್ಬಂದಿ ಮತ್ತು ಸ್ವಸಹಾಯ ಗುಂಪುಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಅವರು ಚಾಮರಾಜನಗರ ಜಿಲ್ಲೆಯ ನೆರೆಯ ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡುತ್ತಾರೆ ಮತ್ತು ಆನೆ ಶಿಬಿರದ ಮಾವುತರು ಮತ್ತು ಕಾವಾಡಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಅಲ್ಲದೆ, ಅನಾಥ ಆನೆ ಮರಿಗಳ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಆಸ್ಕರ್‌ ಪ್ರಶಸ್ತಿ ವಿಜೇತ ‘ಎಲಿಫೆಂಟ್‌ ವಿಸ್ಪರರ್ಸ್‌’ ಸಿನಿಮಾದ ನಿಜ ಪಾತ್ರಧಾರಿ ಬೊಮ್ಮ ಹಾಗೂ ಬೆಳ್ಳಿ ದಂಪತಿಯನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಿದ್ದಾರೆ. 

ಇದನ್ನು ಓದಿ: 8ನೇ ಬಾರಿ ಪ್ರಧಾನಿ ಮೋದಿ ಮೈಸೂರಿಗೆ: ಬಂಡೀಪುರದಲ್ಲಿಂದು ಟೈಗರ್ ಸಫಾರಿ

ಇನ್ನು, ಪ್ರಧಾನಿ ಮೋದಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿದಾಗ, ವಿವಿಧ ಕಾರ್ಯಕ್ರಮಗಳಿಗೆ ತೆರಳಿದಾಗ ಅವರ ವೇಷಭೂಷಣಗಳೂ ಜನರ ಗಮನ ಸೆಳೆಯುತ್ತಿರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ವೈರಲ್‌ ಆಗುತ್ತಿರುತ್ತದೆ. ಅದೇ ರೀತಿ, ಬಂಡೀಪುರ ಹಾಗೂ ಮುದುಮಲೈ ಅರಣ್ಯ ಪ್ರದೇಶಕ್ಕೆ ಭೇಟಿ ಹಿನ್ನೆಲೆ ಸಫಾರಿ ಡ್ರೆಸ್‌ ಧರಿಸಿ ಭಾನುವಾರ ಪ್ರಧಾನಿ ಮೋದಿ ಮಿಂಚುತ್ತಿದ್ದಾರೆ. ತಲೆಗೆ ಕ್ಯಾಪ್‌ ಅನ್ನೂ ಹಾಕಿಕೊಂಡಿದ್ದಾರೆ. ಪ್ರಧಾನಿ ಮೋದಿ ಕಾರ್ಯಾಲಯ ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಫೋಟೋ ಅನೇಕ ನೆಟ್ಟಿಗರ ಗಮನ ಸೆಳೆದಿದೆ. 

ಪ್ರಧಾನಿ ಮೋದಿ ಈ ಫೋಟೋದಲ್ಲಿ ಸುಂದರವಾಗಿ ಕಾಣುತ್ತಿದ್ದಾರೆ ಎಂದು ಒಬ್ಬರು ಕಾಮೆಂಟ್‌ ಮಾಡಿದರೆ, ಎಲ್ಲ ಕಾಲಗಳ ಹೀರೋ ಎಂದು ಇನ್ನೊಬ್ಬರು ಹಂಚಿಕೊಂಡಿದ್ದಾರೆ. ಪ್ರಧಾನಿ ಧರಿಸಿರುವ ಹ್ಯಾಟ್‌ ಚೆನ್ನಾಗಿದೆ ಎಂದು ಮತ್ತೊಬ್ಬರು ಹೇಳಿದ್ದರೆ, ಇನ್ನೊಬ್ಬರು ಮೋದಿ ಎನರ್ಜೆಟಿಕ್‌ ಆಗಿ ಕಾಣುತ್ತಿದ್ದಾರೆ ಎಂದೂ ನೆಟ್ಟಿಗರೊಬ್ಬರು ಪೋಸ್ಟ್‌ ಮಾಡಿದ್ದಾರೆ. ಇನ್ನು, ಕೆಲವರು ಪ್ರಧಾನಿ ಮೋದಿಯ ಟೀಕೆಯನ್ನೂ ಮಾಡಿದ್ದಾರೆ. 

ಇದನ್ನೂ ಓದಿ: ಪ್ರಧಾನಿ ಮೋದಿ ಇಂದು ಮೈಸೂರಿಗೆ, ಬಂಡೀಪುರದಲ್ಲಿ ಸಫಾರಿ..!

ಬಳಿಕ ಮೈಸೂರಲ್ಲಿ ನಡೆಯಲಿರುವ ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲೂ  ಮೋದಿ ಭಾಗಿಯಾಗಲಿದ್ದು, 2022ರ ಹುಲಿ ಸಮೀಕ್ಷಾ ವರದಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ನಡೆಯುವ ಹುಲಿ ಯೋಜನೆಯ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರದಲ್ಲಿ 2022ರ ಹುಲಿ ಸಮೀಕ್ಷಾ ವರದಿ ಹಾಗೂ ಹುಲಿ ಯೋಜನೆಯ 50ನೇ ವರ್ಷಾಚರಣೆ ಅಂಗವಾಗಿ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ. ಇದರಲ್ಲಿ ದೇಶ ವಿದೇಶಗಳ ಗಣ್ಯರು ಭಾಗಿಯಾಗಲಿದ್ದಾರೆ. 

‘ಪ್ರಾಜೆಕ್ಟ್ ಟೈಗರ್‌ನ 50 ವರ್ಷಗಳ ಸ್ಮರಣಾರ್ಥ’ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ಈ ಸಂದರ್ಭದಲ್ಲಿ ಹುಲಿ ಸಂರಕ್ಷಣೆಗಾಗಿ ಅಮೃತ ಕಾಲದ ಪ್ರಕಟಣೆಗಳು, ಹುಲಿ ಸಂರಕ್ಷಿತ ಪ್ರದೇಶಗಳ ನಿರ್ವಹಣೆಯ ಪರಿಣಾಮಕಾರಿ ಮೌಲ್ಯಮಾಪನದ 5 ನೇ ಚಕ್ರದ ಸಾರಾಂಶ ವರದಿ, ಹುಲಿ ಸಂಖ್ಯೆಗಳನ್ನು ಘೋಷಿಸಿ ಮತ್ತು ಅಖಿಲ ಭಾರತ ಹುಲಿ ಅಂದಾಜಿನ ಸಾರಾಂಶ ವರದಿಯನ್ನು ಬಿಡುಗಡೆ ಮಾಡಲಿದ್ದಾರೆ. 'ಪ್ರಾಜೆಕ್ಟ್ ಟೈಗರ್' 50 ವರ್ಷಗಳನ್ನು ಪೂರೈಸಿದ ಸ್ಮರಣಾರ್ಥ ನಾಣ್ಯವನ್ನು ಸಹ ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು.

ಇದನ್ನೂ ಓದಿ: ಸುಪ್ರೀಂಕೋರ್ಟ್‌ ವಿರೋಧ ಪಕ್ಷಗಳಿಗೆ ಹೊಡೆತ ನೀಡಿದೆ: ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪಕ್ಕೆ ಚಾಟಿ ಬೀಸಿದ ಮೋದಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!