
ಬಾಗಲಕೋಟೆ (ಜ.8): ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮ್ಯೂಸಿಕ್ ಮೈಲಾರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಮೈಲಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ಪೊಕ್ಸೊ (POCSO) ಫಾಸ್ಟ್ ಟ್ರ್ಯಾಕ್ ಕೋರ್ಟ್ ಇಂದು ವಜಾಗೊಳಿಸಿದೆ.
ಮ್ಯೂಸಿಕ್ ಮೈಲಾರಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯು ಜನೆವರಿ 5 ರಂದೇ ಪೂರ್ಣಗೊಂಡಿತ್ತು. ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದ ನ್ಯಾಯಾಧೀಶರು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಇಂದು ಆದೇಶ ಪ್ರಕಟಿಸಿದ್ದಾರೆ. ಆರೋಪಿಗೆ ಜಾಮೀನು ನೀಡಲು ನಿರಾಕರಿಸಿರುವ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿದೆ.
15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಮ್ಯೂಸಿಕ್ ಮೈಲಾರಿ ಮೇಲಿದೆ. ಈ ಕುರಿತು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಬಂಧನದ ನಂತರ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಮೈಲಾರಿ, ಜಾಮೀನು ಪಡೆದು ಹೊರಬರಲು ಪ್ರಯತ್ನ ನಡೆಸಿದ್ದರು. ಆದರೆ ಇದೀಗ ನ್ಯಾಯಾಲಯವು ಜಾಮೀನು ನೀಡದ ಕಾರಣ, ಆರೋಪಿಯು ಜೈಲೇ ಗತಿ. ಸಂತ್ರಸ್ತ ಬಾಲಕಿಗೆ ನ್ಯಾಯ ಸಿಗುವ ನಿಟ್ಟಿನಲ್ಲಿ ನ್ಯಾಯಾಲಯದ ಈ ನಿರ್ಧಾರ ಮಹತ್ವದ್ದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ