ರಾಜ್ಯದ ಮೇರು ಸಾಹಿತಿ ಹಾಗೂ ಚಲನಚಿತ್ರ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅನಾರೋಗ್ಯದ ಹಿನ್ನೆಲೆಯಲ್ಲಿ ಹರಿಹರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಾವಣಗೆರೆ (ಜ.29): ರಾಜ್ಯದ ಮೇರು ಸಾಹಿತಿ ಹಾಗೂ ಚಲನಚಿತ್ರ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅನಾರೋಗ್ಯದ ಹಿನ್ನೆಲೆಯಲ್ಲಿ ಹರಿಹರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ನಗರದ ಗುರುಭವನದಲ್ಲಿ ಆಯೋಜನೆ ಮಾಡಿದ್ದ ಬಂಡಾಯ ಸಾಹಿತ್ಯ ಕವಿಗೋಷ್ಠಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ಆಗಮಿಸಿದ್ದರು. ಈ ವೇಳೆ ಕಾರ್ಯಕ್ರಮ ಮುಗಿಸಿ ಕಾರನ್ನು ಹತ್ತುವಾಗ ತಲೆ ಚಕ್ರ ಬಂದು ಸುಸ್ತಾಗಿ ಬಿದ್ದಿದ್ದಾರೆ. ಕೂಡಲೇ ಅವರ ವಾಹನ ಚಾಲಕ ಬರಗೂರು ರಾಮಚಂದ್ರಪ್ಪ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಆಸ್ಪತ್ರೆಯಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರಿಗೆಗೆ ಚಿಕಿತ್ಸೆ ನೀಡಿದ ವೈದ್ಯರು ಯಾವುದೇ ಭಯಪಡುವ ಆತಂಕವಿಲ್ಲ ಎಂದು ತಿಳಿಸಿದ್ದಾರೆ.
ಆರೋಗ್ಯದಲ್ಲಿ ಸ್ವಲ್ಪ ಏರುಪೇರು: ಇನ್ನು ಸಾಹಿತಿ ಬರಗೂರು ರಾಮಚಂದ್ರಪ್ಪ ಅವರಿಗೆ ಗಂಭೀರ ಪ್ರಮಾಣದಲ್ಲಿ ಅನಾರೋಗ್ಯ ಏನೂ ಕಾಣಿಸಿಕೊಂಡಿಲ್ಲ. ತುಂಬಾ ಹೊತ್ತು ಒಂದು ಸ್ಥಳದಲ್ಲಿ ಕುಳಿತುಕೊಂಡು ಎದ್ದು ನಡೆಯುವಾಗ ಸ್ವಲ್ಪ ತಲೆ ಸುತ್ತು ಬಂದಂತಾಗಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು ಆಗಿದ್ದಾರೆ. ನಾಡಿನ ಜನತೆ ಆತಂಕ ಪಡುವ ಅಗತ್ಯತೆ ಇಲ್ಲ. ಯಾವುದೇ ಭಯಪಡುವ ವಾತಾವರಣ ಇಲ್ಲವೆಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಕನ್ನಡ ಕೇವಲ ಅಕ್ಷರವಲ್ಲ ಅದು ನಮ್ಮ ಸಂಸ್ಕೃತಿ: ಬರಗೂರು ರಾಮಚಂದ್ರಪ್ಪ