
ಮಂಗಳೂರು(ಏ.18); ಮಂಗಳೂರು ಹೊರವಲಯದ ಎಸ್ ಇ ಝೆಡ್ ವ್ಯಾಪ್ತಿಯ ಮೀನಿನ ಫ್ಯಾಕ್ಟರಿಯೊಂದರಲ್ಲಿ ಭಾನುವಾರ ರಾತ್ರಿ ತ್ಯಾಜ್ಯ ಟ್ಯಾಂಕರ್ ಶುಚಿಗೊಳಿಸುವ ಸಂದರ್ಭದಲ್ಲಿ ವಿಷಾನಿಲ ದುರಂತವೊಂದು ನಡೆದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ ಐದಕ್ಕೇರಿದೆ. ಇನ್ನೂ ಮೂವರಿಗೆ ಚಿಕಿತ್ಸೆ ಮುಂದುವರೆದಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಘಟನೆ ಹಿನ್ನೆಲೆ
ಮೂಲಗಳ ಪ್ರಕಾರ ಎಸ್ ಇ ಝಡ್ ವ್ಯಾಪ್ತಿಯಲ್ಲಿರುವಂತ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ಸಂದರ್ಭದಲ್ಲಿ, ಏಕಾಏಕಿ ಅಸ್ವಸ್ಥಗೊಂಡಿದ್ದಾನೆ. ಆತನನ್ನು ರಕ್ಷಿಸಲು ಹೋದ ಉಳಿದ ಎಂಟು ಮಂದಿಯೂ ಕೂಡ ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಐವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಷಾನಿಲ ದುರಂತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದವರನ್ನು ಪಶ್ಚಿಮ ಬಂಗಾಳದ ಮೂಲಕ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್ ಎಂದು ಗುರುತಿಸಲಾಗಿದೆ.
"
ಮೀನಿನ ಫ್ಯಾಕ್ಟರಿಯಲ್ಲಿ ಈ ದುರಂತ ಸಂಭವಿಸಿದ್ದು, ಗಂಭೀರವಾಗಿ ಅಸ್ವಸ್ಥಗೊಂಡಂತ ಮಿರಾಜುಲ್ ಇಸ್ಲಾಂ, ಸರಾಫತ್ ಆಲಿ, ಅಝಾನ್ ಅಲಿ, ಕಲೀಮುಲ್ಲಾ ಮತ್ತು ಅಫ್ತರ್ ಮಲಿಕ್ ಎಂಬುವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ