
ಬೆಂಗಳೂರು, (ನ.29): ಕರ್ನಾಟಕ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಮುಂದೂಡಲಾಗಿದ್ದ ಪರೀಕ್ಷೆ ಇದೇ ಡಿಸೆಂಬರ್ 23ಕ್ಕೆ ನಡೆಯಲಿದೆ.
ರಾಜ್ಯದ 24 ಜಿಲ್ಲೆಗಳಲ್ಲಿ ಡಿಸೆಂಬರ್ 23ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ: ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಮುಂದೂಡಿಕೆ
ಖಾಲಿ ಇದ್ದ 2,113 ಪೇದೆಗಳ ಹುದ್ದೆಗೆ ನವೆಂಬರ್ 25ರರಂದು ರಾಜ್ಯವ್ಯಾಪಿ ಲಿಖಿತ ಪರೀಕ್ಷೆ ನಿಗದಿ ಮಾಡಲಾಗಿತ್ತು. ಆದ್ರೆ ಅದಕ್ಕೂ ಮುನ್ನ ನವೆಂಬರ್ 24ರಂದು ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಬೆಳಕಿಗೆ ಬಂದಿತ್ತು. ಇದ್ರಿಂದ ಪರೀಕ್ಷೆಯನ್ನ ಮುಂದೂಡಲಾಗಿತ್ತು.
ಶಿವಕುಮಾರ್ ಹಾಗೂ ಬಸವರಾಜ್ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳಿವು ಸಿಕ್ಕಿದ್ದು, ಈ ಪ್ರಕರಣದಲ್ಲಿ 116 ಅಭ್ಯರ್ಥಿಗಳು ಸೇರಿ 120 ಮಂದಿಯನ್ನು ಬಂಧಿಸಲಾಗಿದೆ. ಆದ್ರೆ ಇದರ ಕಿಂಗ್ ಪಿನ್ ಬಸವರಾಜ್ ತಲೆಮರೆಸಿಕೊಂಡಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ