
ಬೆಂಗಳೂರು (ಫೆ.8): ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಕೇಸ್ ದಾಖಲಿಸಲು ನಿರಾಕರಿಸಿದರೆ ದೂರುದಾರರು ಬಿಎನ್‌ಎಸ್ ಕಾಯಿದೆಯಡಿ ನೇರವಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಹೈಕೋರ್ಟ್ ಹೇಳಿದೆ.
ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತನ್ನ ಸಹೋದರನಿಂದ ವಂಚನೆಯಾಗಿದೆ ಎಂದು ನಗರದ ನಿವಾಸಿ ಬಿ.ಎಚ್. ನಾಗರಾಜು ನೀಡಿದ್ದ ದೂರು ಸ್ವೀಕರಿಸಲು ಪೊಲೀಸರು ನಿರಾಕರಿಸಿದ್ದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ.ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಇದನ್ನೂ ಓದಿ: ನ್ಯಾಯಾಂಗದಲ್ಲಿ ಸಾಮಾಜಿಕ ಕ್ರಾಂತಿ: ದೇಶದಲ್ಲಿ ಎಷ್ಟು ಎಸ್‌ಸಿ-ಎಸ್‌ಟಿ ಮತ್ತು ಒಬಿಸಿ ನ್ಯಾಯಾಧೀಶರಿದ್ದಾರೆ?
ಪೊಲೀಸ್ ಠಾಣೆಯಲ್ಲಿ ದೂರು ತಿರಸ್ಕರಿಸಿದರೆ ದೂರುದಾರರು ನೇರವಾಗಿ ಹೈಕೋರ್ಟ್ ಸಂಪರ್ಕಿಸಬಹುದಾಗಿದೆ. ದೂರು ತಿರಸ್ಕರಿಸಿದರ ವಿರುದ್ಧ ಉನ್ನತ ಪೊಲೀಸ್ ಅಧಿಕಾರಿಯನ್ನು ಸಂಪರ್ಕಿಸುವ ಅಗತ್ಯ ಇಲ್ಲ. ಒಂದು ವೇಳೆ ಉನ್ನತ ಅಧಿಕಾರಿಯೂ ಆ ದೂರು ತಿರಸ್ಕರಿಸಿದರೆ, ಆ ವ್ಯಾಪ್ತಿಯ ಮ್ಯಾಜಿಸ್ಪ್ರೇಟ್ ಎದುರು ಖಾಸಗಿ ದೂರು ದಾಖಲಿಸಲು ಕೂಡ ನಿಯಮಗಳಲ್ಲಿ ಅವಕಾಶವಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ಇದೇ ವೇಳೆ ಅರ್ಜಿದಾರ ಬಿ.ಎಚ್.ನಾಗರಾಜು ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ನಗರ ಪೊಲೀಸರಿಗೆ ನಿರ್ದೇಶನ ನೀಡಿದೆ.
ನಾಗರಾಜು ಸಲ್ಲಿಸಿದ್ದ ದೂರು ಸಿವಿಲ್ ಸ್ವರೂಪದ ಪ್ರಕರಣವಾಗಿದೆ. ಇದನ್ನು ಸೂಕ್ತ ನ್ಯಾಯಾಲಯದಲ್ಲಿ ಸಲ್ಲಿಸಿ ಪರಿಹರಿಸಬೇಕಾಗಿದೆ ಎಂದು ಪೊಲೀಸರು ನಾಗರಾಜು ನೀಡಿದ್ದ ದೂರಿಗೆ ಹಿಂಬರಹ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ