ರಾಜಕೀಯ ದಾಳವಾದ ಸುಪ್ರೀಂ ಕೋರ್ಟ್‌ ಮುಸ್ಲಿಂ ಮೀಸಲಾತಿ ಆದೇಶ: ಕಾಂಗ್ರೆಸ್‌ನಿಂದ ಭಾರಿ ತಪರಾಕಿ

Published : Apr 25, 2023, 01:46 PM IST
ರಾಜಕೀಯ ದಾಳವಾದ ಸುಪ್ರೀಂ ಕೋರ್ಟ್‌ ಮುಸ್ಲಿಂ ಮೀಸಲಾತಿ ಆದೇಶ: ಕಾಂಗ್ರೆಸ್‌ನಿಂದ ಭಾರಿ ತಪರಾಕಿ

ಸಾರಾಂಶ

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಬೊಮ್ಮಾಯಿ ಸರ್ಕಾರದ 'ಮೀಸಲಾತಿಯ ವಂಚನೆ' ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಬಯಲಾಗಿದೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ. 

ಬೆಂಗಳೂರು (ಏ.25): ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಬೊಮ್ಮಾಯಿ ಸರ್ಕಾರದ 'ಮೀಸಲಾತಿಯ ವಂಚನೆ' ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಬಯಲಾಗಿದೆ. ಕೂಡಲೇ ಸಿಎಂ ಬೊಮ್ಮಾಯಿ ರಾಜಿನಾಮೆ ನೀಡಬೇಕು ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ. 

ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸರಣಿ ಟ್ವೀಟ್‌ಗಳನ್ನು ಮಾಡಿವ ಮೂಲಕ ಮುಸ್ಲಿಂ ಮೀಸಲಾತಿ ರದ್ದುಗೊಳಿಸಿದ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ನೇತೃತ್ವದ ಬೊಮ್ಮಾಯಿ ಸರ್ಕಾರದ 'ಮೀಸಲಾತಿಯ ವಂಚನೆ' ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಬಯಲಾಗಿದೆ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮೀಸಲಾತಿ ಮತ್ತು ಆಂತರಿಕ ಮೀಸಲಾತಿ ಮತ್ತು ಎಸ್‌ಸಿ - ಎಸ್‌ಟಿ ಮೀಸಲಾತಿ ಹೆಚ್ಚಳದ ಕುರಿತು ಬಿಜೆಪಿ ಸರ್ಕಾರದ ಆದೇಶವನ್ನು ಬೊಮ್ಮಾಯಿ ಸರ್ಕಾರವು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಲು ವಿಫಲವಾದ ಕಾರಣ ತಡೆಹಿಡಿದಿದೆ. ಬೊಮ್ಮಾಯಿ ತತ್‌ಕ್ಷಣವೂ ಸಿಎಂ ಆಗುವ ಹಕ್ಕನ್ನು ಕಳೆದುಕೊಂಡಿದ್ದೀರಿ. ಕೂಡಲೇ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ.

ಕರ್ನಾಟಕ ಸರ್ಕಾರದ ಮುಸ್ಲಿಂ ಮೀಸಲಾತಿ ರದ್ದತಿಗೆ ಸುಪ್ರೀಂ ಕೋರ್ಟ್‌ ತಡೆ

ಮುಂದುವರೆದು ಶ್ರೀಯುತ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರೇ ದಯವಿಟ್ಟು ಕೂಡಲೇ ಕರ್ನಾಟಕವನ್ನು ತೊರೆಯಿರಿ. ಕನ್ನಡಿಗರನ್ನು ವಂಚಿಸಿ ವಂಚಿಸಿದ ನಂತರ ಮತ್ತೊಮ್ಮೆ ಇಲ್ಲಿಗೆ ಹಿಂತಿರುಗಬೇಡಿ ಎಂದು ಟೀಕೆ ಮಾಡಿದ್ದಾರೆ. ಜೊತೆಗೆ ಬಿಜೆಪಿಯ ಕೇಂದ್ರದ ಮೋದಿ ಹಾಗೂ ರಾಜ್ಯದ ಬೊಮ್ಮಾಯಿ ಸರ್ಕಾರಗಳು ನಮ್ಮ ಪ್ರಶ್ನೆಗೆ ಉತ್ತರ ನೀಡಲಿ ಎಂದು ಆಗ್ರಹಿಸಿದ್ದಾರೆ.

  • ಬಿಜೆಪಿ ಮತ್ತು ಮೋದಿ-ಬೊಮ್ಮಾಯಿ ಸರ್ಕಾರಗಳು ಉತ್ತರಿಸಲಿ
  • 1. ಲಿಂಗಾಯತರು, ಒಕ್ಕಲಿಗರು, ಎಸ್‌ಸಿ, ಎಸ್‌ಟಿಗಳ ಮೇಲೆ ನೀವು ಏಕೆ "ಮೀಸಲಾತಿಯ ವಂಚನೆ" ಆಟವನ್ನು ಆಡಿದ್ದೀರಿ?
  • 2. ನೀವು ಸುಪ್ರೀಂ ಕೋರ್ಟ್‌ನಲ್ಲಿ ಮೀಸಲಾತಿಯನ್ನು ಏಕೆ ಸಮರ್ಥಿಸಲಿಲ್ಲ?
  • 3. ಮೀಸಲಾತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲು ಬೊಮ್ಮಾಯಿ-ಮೋದಿ ಸರ್ಕಾರ ಏಕೆ ವಿಫಲವಾಯಿತು?
  • 4. ಮಾರ್ಚ್‌ 14 ರಂದು ಸಂಸತ್ತಿನ ನೆಲದ ಮೇಲೆ SC-STಗೆ ಹೆಚ್ಚಳ ಮಾಡಿದ \ಮೀಸಲಾತಿಯನ್ನು ಮೋದಿ ಸರ್ಕಾರ ಏಕೆ ತಿರಸ್ಕರಿಸಿತು?
  • 5. SC-ST ಮೀಸಲಾತಿ ಹೆಚ್ಚಳದ ಕಾನೂನನ್ನು ಕೇಂದ್ರ ಸರ್ಕಾರವು ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಏಕೆ ಹಾಕಲಿಲ್ಲ?
  • 6. ಎಸ್‌ಸಿ, ಎಸ್‌ಟಿ, ಒಬಿಸಿ, ಲಿಂಗಾಯತರು, ಒಕ್ಕಲಿಗರು ಮತ್ತು ಇತರರ ಆಕಾಂಕ್ಷೆಗಳನ್ನು ಪೂರೈಸಲು ನೀವು ಮೀಸಲಾತಿಯ ಶೇ.50 ಮಿತಿಯನ್ನು ಹೆಚ್ಚಿಸಲು ಏಕೆ ನಿರಾಕರಿಸುತ್ತಿದ್ದೀರಿ?
  • 7. ಬೊಮ್ಮಾಯಿ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಹೇಳಿಕೆ ನೀಡುವ ಮೂಲಕ ಮೀಸಲಾತಿ ಕುರಿತಾದ ತನ್ನದೇ ಆದ ಸರ್ಕಾರಿ ಆದೇಶವನ್ನು ಏಕೆ ತಡೆಹಿಡಿದಿದೆ?
  • 8. ಮೀಸಲಾತಿಯ ಹೆಸರಿನಲ್ಲಿ ಬಿಜೆಪಿ ಮಾಡಿದ ದ್ರೋಹಕ್ಕಾಗಿ ಎಸ್‌ಸಿ, ಎಸ್‌ಟಿ, ಲಿಂಗಾಯತರು, ಒಕ್ಕಲಿಗರು ಮತ್ತು ಇತರರಿಗೆ ಪ್ರಧಾನಿಮಂತ್ರಿ ನರೇಂದ್ರ ಮೋದಿ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತಾರೆಯೇ?

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲು ರದ್ದು: ಅಮಿತ್ ಶಾ ಭರವಸೆ

ದೆಹಲಿ (ಏ.25): ರಾಜ್ಯದಲ್ಲಿ ಇತ್ತೀಚೆಗೆ ಇತರೆ (ಸಾಮಾಜಿಕ) ಹಿಂದುಳಿದ ವರ್ಗದ (ಒಬಿಸಿ) ಅಡಿಯಲ್ಲಿ ಮೀಸಲಾತಿಯನ್ನು ಹೊಂದಿದ್ದ ಮುಸ್ಲಿಂ ಸಮುದಾಯದ ಮೀಸಲಾತಿ ತೆಗೆದುಹಾಕಿ ಆರ್ಥಿಕ ಹಿಂದುಳಿದ ವರ್ಗದ ಮೀಸಲಾತಿಗೆ ಸೇರ್ಪಡೆ ಮಾಡಿದ್ದ ಕರ್ನಾಟಕ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ