ರಾಜಕಾರಣಿಗಳಿಗೆ ನಾಲಿಗೆ-ಮೆದುಳಿಗೆ ಸಂಪರ್ಕ ಇರಬೇಕು: ಹೈಕೋರ್ಟ್

By Kannadaprabha NewsFirst Published Jun 22, 2024, 12:37 PM IST
Highlights

ಸಿಎಂ ಹಾಗೂ ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಪ್ರಕರಣದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆ‌ರ್ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಪ್ರಶಾಂತ್ ಮಾಕನೂರು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು(ಜೂ.22):  'ಚುನಾವಣೆ ಸಂದರ್ಭದಲ್ಲಿ ಮನುಷ್ಯನ ನಾಲಿಗೆ ಮತ್ತು ಮೆದುಳು ನಡುವಿನ ಸೇತುವೆ ಕುಸಿಯಬಾರದು. ದೇಶದ ಪ್ರಧಾನಿ, ರಾಜ್ಯದ ಮುಖ್ಯ ಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ದುರ್ಭಾಷೆ ಬಳಸಬಾರದು.' ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾ‌ರ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಪ್ರಕರಣದ ವಿಚಾರಣೆ ವೇಳೆ ನಾಡಿನ ರಾಜಕಾರಣಿಗಳಿಗೆ ಹೈಕೋರ್ಟ್ ಹೇಳಿದ ಕಿವಿಮಾತು ಇದು.

ಸಿಎಂ ಹಾಗೂ ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಪ್ರಕರಣದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆ‌ರ್ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಪ್ರಶಾಂತ್ ಮಾಕನೂರು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

Latest Videos

ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಗಂಡನನ್ನೇ ಕೊಂದಿದ್ದ ಹೆಂಡ್ತಿ: ಮಹಿಳೆ ಎಂಬ ಕಾರಣಕ್ಕೆ ಬೇಲ್‌ ನೀಡಿದ ಹೈಕೋರ್ಟ್‌

ಅರ್ಜಿ ಕುರಿತು ಕೆಲ ಕಾಲ ಪರ- ವಿರುದ್ಧ ವಾದ ಆಲಿಸಿದ ನ್ಯಾಯ ಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು, ಅರ್ಜಿದಾರರ ವಿರುದ ಠಾಣೆಯಲ್ಲಿ ದಾಖಲಾಗಿರುವ ಎರಡುಪ್ರತ್ಯೇಕ ಎಫ್‌ಐಆರ್ ಳಿಗೆ ತಡೆಯಾಜ್ಞೆ ನೀಡಿದರು. ಜೊತೆಗೆ ಪ್ರತಿವಾದಿಯಾಗಿರುವ ಮಲ್ಲೇಶ್ವರ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದರು.

ಇದಕ್ಕೂ ಮುನ್ನ ಪ್ರಕರಣದಲ್ಲಿ ಬಿಜೆಪಿ ಜಾಲತಾಣದ ಖಾತೆಯಲ್ಲಿ ಸಿಎಂ ಡಿಸಿಎಂ ರಾಹುಲ್ ಗಾಂಧಿ ವಿರುದ್ಧ ಬಳಸಿರುವ ಭಾಷೆ ಕುರಿತು ಅರ್ಜಿದಾರರ ವಿರುದ್ಧ ತೀವ್ರ ಬೇಸರ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ದುರ್ಭಾಷೆ ಬಳಸಬಾರದು. ಗೌರವದ ಹಾಗೂ ಸುಂದರ ಭಾಷೆ ಬಳಸಬೇಕು. ಮಾತಿನಲ್ಲಿ ಪ್ರೀತಿ, ಜವಾಬ್ದಾರಿ, ಸೌಜನ್ಯ ಹಾಗೂ ಸಂಯಮ ಇರಬೇಕು. ಚುನಾವಣೆ ಸಂದರ್ಭದಲ್ಲಿ ಏನೋನೋ ಮಾತನಾಡಿ ಎಚ್ಚರಿಕೆಯಿಂದ ಮಾತನಾಡಬೇಕು. ನಾಲಿಗೆ ಮತ್ತು ಮೆದುಳಿನ ನಡುವಿನ ಸೇತುವೆ ಕುಸಿಯಬಾರದು ಎಂದು ಸಲಹೆ ನೀಡಿದರು.

ರಾಮಾಯಣ, ವಾಜಪೇಯಿ ಸ್ಮರಣೆ: 

ಇದೇ ಜನರನ್ನು ಉದ್ವೇಗಕ್ಕೆ ಗುರಿಪಡಿಸಬಾರದು. ವೇಳೆ ವಾಜಪೇಯಿ ಕಾಲದ ಘಟನೆಯೊಂದನ್ನು ಸ್ಥರಿಸಿದ ಅವರು, ಇಂದಿರಾ ಜವಾಬ್ಬೋ' ಎಂಬ ಪುಸ್ತಕವನ್ನು ಬರೆಯಲಾಗಿತ್ತು. ಅದಕ್ಕೆ ಮುನ್ನುಡಿ ಬರೆಯಲು ವಾಜಪೇಯಿ ಅವರಿಗೆ ಕೋರಲಾಗಿತ್ತು. ಅದಕ್ಕೆ ಒಪ್ಪಿದ್ದ ಅವರು, ಇಂದಿರಾ ಅಲ್ಲ, ಇಂದಿರಾಜೀ ಜವಾಬ್ದೋ ಎಂಬುದಾಗಿ ಬದಲಿಸಬೇಕು ಎಂದು ಷರತ್ತು ವಿಧಿಸಿದ್ದರು. ಹೀಗಾಗಿ, ಮಾತನಾಡುವಾಗ ಗೌರವದ ಭಾಷೆ ಬಳಸಬೇಕು ಎಂದರು.

ಮೆಜೆಸ್ಟಿಕ್ ಟಾಯ್ಲೆಟ್‌ನಲ್ಲಿ ಮಹಿಳೆ ನಂಬರ್ ಬರೆದ ಆರೋಪಿಗೆ ಕೋರ್ಟ್ ತಕ್ಕ ಪಾಠ!

ಅಲ್ಲದೆ, ವಿರೋಧ ಪಕ್ಷದವರು ಎಂದರೆ ಶತ್ರುಗಳಲ್ಲ. ಈಗ ಅವರ ಪಕ್ಷ ಅಧಿಕಾರದಲ್ಲಿ ಇರಬಹುದು. ಮುಂದಿನ ಬಾರಿ ಮತ್ತೊಂದು ಪಕ್ಷದವರು ಅಧಿಕಾರಕ್ಕೆ ಬರಬಹುದು. ಆದರೆ, ಸಾಂವಿಧಾನಿಕ ಹುದ್ದೆಯಲ್ಲಿರುವ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು. ವಿಶೇಷವಾಗಿ ಟ್ವಿಟ್‌ಗಳು ಸ್ವೀಟ್ ಆಗಿರಬೇಕು ಹೊರತು ಅಸಿಡಿಟಿಯಿಂದ ಕೂಡಿರಬಾರದು. ದುರ್ಭಾಷೆ ಬಳಸಿದರೆ ನಾಗರಿಕತೆಯ ಮೌಲ್ಯಗಳು ಏನಾಗಬೇಕು? ಶತೃಗಳನ್ನೂ ಗೌರವದಿಂದ ಕಾಣುವ ದೇಶ ನಮ್ಮದು ಎನ್ನುವುದನ್ನು ಯಾರೂ ಮರೆಯಬಾರದು ಎಂದರು. 

ಎಲ್ಲರನ್ನೂ ಜೈಲಿನಲ್ಲಿ ಕೂರಿಸುತ್ತೀರಾ?

ಚುನಾವಣೆ ವೇಳೆ ಕೆಲವೊಂದು ಅಹಿತಕರ ಘಟನೆ ನಡೆದಿರುವುದು ನಿಜ. ಅವುಗಳನ್ನು ಸರ್ಕಾರ ಸಹ ಖಂಡಿಸುತ್ತದೆ. ಆದರೆ, ಸಾರ್ವಜನಿಕವಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ನಿಂದಿಸುವುದು ಸರಿಯಲ್ಲ. ಹೀಗಾಗಿ, ವಿಚಾರಣೆಗೆ ಹಾಜರಾಗಲು ಅರ್ಜಿದಾರರಿಗೆ ಸೂಚಿಸುವುದಿಲ್ಲ. ಆದರೆ, ತನಿಖೆ ಮುಂದುವರಿಯಲು ಅನುಮತಿ ನೀಡಬೇಕು ಎಂದು ಸರ್ಕಾರದ ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಕೋರಿದರು. ಅದಕ್ಕೆ ಒಪ್ಪದ ನ್ಯಾಯಪೀಠ, ಚುನಾವಣೆ ಈಗಾಗಲೇ ಮುಗಿದಿದೆ. ಎಲ್ಲರ ಮೇಲೆ ತನಿಖೆ ನಡೆಸಬೇಕು ಎಂದಾದರೆ ಹೇಗೆ? ಎಲ್ಲರನ್ನೂ ಜೈಲಿನಲ್ಲಿ ಕೂರಿಸೋದು ಹಾಗೂ ಎಲ್ಲರನ್ನೂ ಕಸ್ಟಡಿಗೆ ಕೇಳುವುದು ಸರಿಯಾದ ದಾರಿಯಲ್ಲ. ಹೀಗೆ ಮಾಡುತ್ತಾ ಹೋದರೆ ನಾಳೆ ಹೊರಗಡೆ ಇರುವವರಿಗಿಂತ ಜೈಲು ಹಾಗೂ ಕಸ್ಟಡಿಯಲ್ಲಿ ಇರುವವರ ಸಂಖ್ಯೆಯೇ ಹೆಚ್ಚಿ ರುತ್ತದೆ. ಅವರನ್ನು ಪೋಷಿಸಲು ಖರ್ಚು ಯಾರು ಕೊಡುತ್ತಾರೆ? ಹೀನ ಅಪರಾಧ ಕೃತ್ಯಗಳನ್ನು ಎಸಗಿದ್ದವರನ್ನು ಕಸ್ಟಡಿಗೆ ಕೇಳುವುದು ಸಮಂಜಸ ಎಂದು ನ್ಯಾಯಪೀಠ ಹೇಳಿತು.

click me!