ಕೋಟೆನಾಡು ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮೆರವಣಿಗೆಯಲ್ಲಿ ಗೂಡ್ಸೆ ಚಿತ್ರ ಪ್ರದರ್ಶನ

By Ravi Janekal  |  First Published Oct 8, 2023, 5:14 PM IST

ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ನಡೆದ ಹಿಂದೂ ಮಹಾಗಣಪತಿ ಬೃಹತ್ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆಯಲ್ಲಿ ನಾಥೂರಾಮ್ ಗೋಡ್ಸೆ ಚಿತ್ರ ಪ್ರದರ್ಶನ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.


ಚಿತ್ರದುರ್ಗ (ಅ.8) : ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ನಡೆದ ಹಿಂದೂ ಮಹಾಗಣಪತಿ ಬೃಹತ್ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆಯಲ್ಲಿ ನಾಥೂರಾಮ್ ಗೋಡ್ಸೆ ಚಿತ್ರ ಪ್ರದರ್ಶನ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಶೋಭಾಯಾತ್ರೆ ವೇಳೆ ಸಾವಿರಾರು ಹಿಂದು ಕಾರ್ಯಕರ್ತರು ಭಾಗಿಯಾದರು. ಮೆರವಣಿಗೆ ವೇಳೆ ಶಾಸಕ ಕೆ.ಸಿ.ವಿರೇಂದ್ರ ಇರುವ ಡಿಜೆ ಬಳಿ ಗೋಡ್ಸೆ, ವೀರ ಸಾವರ್ಕರ್ ಚಿತ್ರ ಪ್ರದರ್ಶನ ಮಾಡಲಾಯಿತು. ಇದರ ಜೊತೆಗೆ ಕೋಮು ಘರ್ಷಣೆಯಲ್ಲಿ ಹತ್ಯೆಯಾದ ಶರತ್ ಮಡಿವಾಳ್, ಹರ್ಷ ಸೇರಿ ಇತರರ ಭಾವಚಿತ್ರಗಳನ್ನು ಹಿಡಿದು ಘೋಷಣೆ ಕೂಗಿ ಪ್ರದರ್ಶನ ಮಾಡಿ ಕಾರ್ಯಕರ್ತರು. 

Latest Videos

undefined

 

ಯಾದಗಿರಿ: ಪ್ರಚೋದನಕಾರಿ ಭಾಷಣ, ಆಂದೋಲಾ ಶ್ರೀ ವಿರುದ್ಧ ಪ್ರಕರಣ ದಾಖಲು

ವಿಶ್ವ ಹಿಂದೂ ಪರಿಷತ್, ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ 21 ದಿನಗಳ ಕಾಲ ಪೂಜೆ ಕೈಂಕರ್ಯಗಳನ್ನು ಮಾಡಲಾಗಿತ್ತು. ಇಂದು ಕೊನೆದಿನ ಹಿಂದೂಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ, ಶಾಸಕ ಕೆ.ಸಿ.ವೀರೇಂದ್ರ ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿದ್ದರು. ಶೋಭಾಯಾತ್ರೆ ವೇಳೆ ಗಾಂಧಿ ಹಂತಕ ನಾಥುರಾಮ ಗೂಡ್ಸೆ ಚಿತ್ರ ಪ್ರದರ್ಶನ ಮಾಡಿರುವುದು ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಪರ ವಿರೋಧ ಪ್ರತಿಕ್ರಿಯೆಗಳು ಬಂದಿವೆ.

ಸರ್ಕಾರ ಹಿಂದೂಗಳಿಗೆ ರಕ್ಷಣೆ ಕೊಡೋ ಬದಲು ಮುಸ್ಲಿಮರಿಗೆ ರಕ್ಷಣೆ ಕೊಡುತ್ತಿದೆ: ಯತ್ನಾಳ್‌

click me!