ಪೊಲೀಸ್‌ ನೇಮಕಾತಿ ವಯಸ್ಸು ಹೆಚ್ಚಳ ಮನವಿಗೆ ಸಿಎಂ ಸ್ಪಂದನೆ

Published : Nov 01, 2019, 08:55 AM IST
ಪೊಲೀಸ್‌ ನೇಮಕಾತಿ ವಯಸ್ಸು ಹೆಚ್ಚಳ ಮನವಿಗೆ ಸಿಎಂ ಸ್ಪಂದನೆ

ಸಾರಾಂಶ

ಕರ್ನಾಟಕದಲ್ಲಿ ಪೊಲೀಸ್ ಇಲಾಖೆಯಲ್ಲಿ ನೇಮಕಾತಿಗೆ ಸಾಮಾನ್ಯ ವರ್ಗಕ್ಕೆ 25 ವರ್ಷ, ಹಿಂದುಳಿದ, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟವರ್ಗಕ್ಕೆ 27ರ ವಯೋಮಿತಿ ಇದೆ. ಪ್ರಸ್ತುತ ಇರುವ ವಯೋಮಿತಿಯನ್ನು ಹೆಚ್ಚಳ ಮಾಡುವಂತೆ ಪಕ್ಷದ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ವಯೋಮಿತಿ ನಿಗದಿ ಹೆಚ್ಚಾಗಲಿದೆಯಾ, ಕಡಿಮೆಯಾಗಲಿದೆಯಾ.. ಸಿಎಂ ಏನ್ ಹೇಳಿದ್ದಾರೆ ಎಂಬ ಮಾಹಿತಿ ಇಲ್ಲಿದೆ

ಬೆಂಗಳೂರು(ನ.01): ಪೊಲೀಸ್‌ ಸಿಬ್ಬಂದಿ ನೇಮಕಾತಿಯ ವಯೋಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದ್ದು, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆದ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಹೇಳಿದ್ದಾರೆ.

ಗುರುವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸದ್ಯದಲ್ಲೇ ಸಬ್‌ ಇನ್‌ಸ್ಪೆಕ್ಟರ್‌ ಸೇರಿದಂತೆ 16 ಸಾವಿರ ಪೊಲೀಸ್‌ ಸಿಬ್ಬಂದಿ ನೇಮಕಕ್ಕೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ ಎಂದಿದ್ದಾರೆ.

ಪ್ರತ್ಯೇಕ ಬಸ್‌ ಪಥ ಕಾಮಗಾರಿ ವಿಳಂಬ: ಪ್ರಾಯೋಗಿಕ ಬಸ್‌ ಸಂಚಾರ ಯಾವಾಗಿಂದ..?

ಇತರ ರಾಜ್ಯಗಳಲ್ಲಿ ಪೊಲೀಸ್‌ ಇಲಾಖೆ ಸೇರ್ಪಡೆಗೆ ಬೇರೆ-ಬೇರೆ ವಯೋಮಿತಿ ನಿಗದಿಪಡಿಸಲಾಗಿದೆ. ಕರ್ನಾಟಕದಲ್ಲಿ ಸಾಮಾನ್ಯ ವರ್ಗಕ್ಕೆ 25 ವರ್ಷ, ಹಿಂದುಳಿದ, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟವರ್ಗಕ್ಕೆ 27ರ ವಯೋಮಿತಿ ಇದೆ. ಪ್ರಸ್ತುತ ಇರುವ ವಯೋಮಿತಿಯನ್ನು ಹೆಚ್ಚಳ ಮಾಡುವಂತೆ ಪಕ್ಷದ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ನಿಯೋಗದ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಸಿದ್ದುಗೆ ಟಿಪ್ಪು ಕುರಿತ ಪುಸ್ತಕ ರವಾನೆ

ಟಿಪ್ಪು ಸುಲ್ತಾನ್‌ ಹಿಂದೂ ವಿರೋಧಿಯಷ್ಟೇ ಅಲ್ಲದೆ, ಕನ್ನಡ ವಿರೋಧಿಯೂ ಆಗಿದ್ದ. ಹಿಂದೂ ದೇವರ ವಿಗ್ರಹಗಳನ್ನು ಧ್ವಂಸಗೊಳಿಸುವ ದೊಡ್ಡ ಆಂದೋಲನ ನಡೆಸಿದ್ದ. ಕೊಡಗಿನಲ್ಲಿ ಕೊಡವ ಸಮುದಾಯದವರನ್ನು ಬಲಿ ಪಡೆದಿದ್ದಾನೆ ಎಂದು ಇದೇ ವೇಳೆ ರವಿಕುಮಾರ್‌ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಪಕ್ಷ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನೂ ಅವಮಾನಿಸಿತ್ತು. ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರನ್ನೂ ಗೌರವಿಸಿಲ್ಲ. ವೀರ ಸಾವರ್ಕರ್‌ ಅವರ ತ್ಯಾಗ, ಹೋರಾಟ ಕುರಿತ ‘ಆತ್ಮಾಹುತಿ’ ಪುಸ್ತಕ ಹಾಗೂ ಟಿಪ್ಪು ನೈಜ ಇತಿಹಾಸ ಕುರಿತ ಪುಸ್ತಕಗಳನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಚೆ ಮೂಲಕ ಕಳುಹಿಸಿದ್ದೇವೆ. ಆ ಪುಸ್ತಕಗಳನ್ನು ಓದಿ ಸರಿಯಾದ ಇತಿಹಾಸ ತಿಳಿದುಕೊಳ್ಳಲಿ ಎಂದು ಕುಟುಕಿದ್ದಾರೆ.

ಇಂದಿನಿಂದ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಇರಲೇ ಬೇಕು..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ