Corona Update ಕರ್ನಾಟಕದಲ್ಲಿ ಕೊರೋನಾ ಸ್ಫೋಟ, 24ಗಂಟೆಗಳಲ್ಲಿ ದ್ವಿಗುಣ

By Suvarna NewsFirst Published Jan 4, 2022, 6:34 PM IST
Highlights

* ಕರ್ನಾಟಕದಲ್ಲಿ ಕೊರೋನಾ ಸ್ಫೋಟ
* ಕೊರೋನಾ ಹಾಟ್‌ಸ್ಫಾಟ್ ಆದ ಸಿಲಿಕಾನ್ ಸಿಟಿ
* ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡಾ 2.59ಕ್ಕೆ ಏರಿಕೆ

ಬೆಂಗಳೂರು, (ಜ.04): ಕರ್ನಾಟಕ ರಾಜ್ಯದಲ್ಲಿ ಇಂದು(ಡಿ.04) ಕೊರೋನಾ ಮಹಾ ಸ್ಫೋಟವೇ ಆಗಿದೆ. 200ರಿಂದ 300 ಪಾಸುಪಾಸಿನಲ್ಲಿದ್ದ, ಕೊರೋನಾ ಕೇಸ್ ಮಂಗಳವಾರ ಬರೋಬ್ಬರಿ  2,479 ಜನರಿಗೆ ದೃಢಪಟ್ಟಿದೆ. ಇದು ಭಾರೀ ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ಟ್ವಿಟರ್​​ನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್(Dr K Sudhakar)​ ಮಾಹಿತಿ ನೀಡಿದ್ದು, ಮಂಗಳವಾರ  2,479 ಜನರಿಗೆ ಕೊರೊನಾ ಸೋಂಕು (Coronavirus) ದೃಢವಾಗಿದ್ದು ಕೊರೋನಾ ಸೋಂಕಿಗೆ ನಾಲ್ವರು ಬಲಿ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡಾ 2.59ಕ್ಕೆ ಏರಿಕೆಯಾಗಿದೆ.

Coronavirus: ಕೊರೋನಾ ಏರಿಕೆ, ಜ. 31ರವರೆಗೆ ಶಾಲೆಗಳು ಬಂದ್

Data shows us that cases are doubling every 2-3 days in Karnataka!
While the Government is working on containment measures for the new wave, appeal to everyone to strictly follow 3Ms:
🔹Mask up
🔹Maintain social distance
🔹Maintain hand hygiene pic.twitter.com/uaMEYQH9wz

— Dr Sudhakar K (@mla_sudhakar)

ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲೇ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 2,053 ಕೊರೋನಾ ಪ್ರಕರಣಗಳು ಪತ್ತೆ ಆಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಮತ್ತೆ ಕೊರೋನಾ ಹಾಟ್‌ಸ್ಪಾಟ್ ಆಗುತ್ತಿದೆ.

ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

Positivity rate shoots up to 2.59% in Karnataka with 2,479 new cases reported today:
◾New cases in State:2,479
◾New cases in B'lore: 2,053
◾Positivity rate: 2.59%
◾New Omicron cases today: 00
◾Total Omicron cases: 77
◾Deaths:04
◾Tests: 95,391

— Dr Sudhakar K (@mla_sudhakar)

ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗುತ್ತಿದೆ. ಹೀಗಾಗಿ ಸೋಂಕು ನಿಯಂತ್ರಿಸಲು ಲಾಕ್ ಡೌನ್ ಮಾಡುವಂತೆ ತಜ್ಞರು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದೇ ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಇದ್ದು, ಆ ಸಭೆಯಲ್ಲಿ ಮಹತ್ವ ತೀರ್ಮಾನ ಕಯಗೊಳ್ಳವ ಸಾಧ್ಯತೆಗಲು ಹೆಚ್ಚಿವೆ.

ಶಾಲೆ ಬಂದ್‌ ಬಗ್ಗೆ ಸಿಎಂ ಹೇಳಿದ್ದಿಷ್ಟು?
ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ದೇಶದ ಹಲವು ರಾಜ್ಯಗಳಲ್ಲಿ ಶಾಲೆಗಳನ್ನ ಬಂದ್ ಮಾಡಲಾಗಿದೆ. ಇನ್ನು ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಹೆಚ್ಚಳವಾಗುತ್ತಿರುವುದರಿಂದ ಶಾಲೆ ಬಂದ್ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಮಿ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಶಾಲೆ, ಕಾಲೇಜುಗಳನ್ನು ಮತ್ತೆ ಬಂದ್ ಮಾಡಬೇಕೆ ಎಂಬ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

 ತೆಲಂಗಾಣದಲ್ಲಿ ಈಗಾಗಲೇ ಶಾಲೆಗಳನ್ನು ಬಂದ್ ಮಾಡಲಾಗಿದೆ. ಸದ್ಯಕ್ಕೆ ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಂಗಳವಾರ ಸಂಜೆ ತಜ್ಞರ ಸಭೆ ಕರೆದು ಚರ್ಚಿಸಲಾಗುವುದು. ಲಾಕ್‌ಡೌನ್, ಸೆಮಿಲಾಕ್‌ಡೌನ್‌; ಏನು ಮಾಡಿದರೆ ಉತ್ತಮ ಎಂಬುದನ್ನು ನಿರ್ಧರಿಸಲಾಗುವುದು ಎಂದರು.

ಕೊರೊನಾ ಮತ್ತೆ ಹೆಚ್ಚಳವಾದ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಅನೇಕ ಮಾರ್ಗದರ್ಶನ ನೀಡಿದೆ. ಈಗ ಕೇಂದ್ರ ಸರ್ಕಾರದ ಮಾರ್ಗಸೂಚಿಯೇ ರಾಜ್ಯದಲ್ಲಿಯೂ ಜಾರಿಯಲ್ಲಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಪ್ರಕರಣಗಳು ಹೆಚ್ಚುತ್ತಿವೆ. ಹೀಗೆ ಪಕ್ಕದ ರಾಜ್ಯದಲ್ಲಿ ಹೆಚ್ಚಾದಾಗ ನಮ್ಮ ರಾಜ್ಯದಲ್ಲಿಯೂ ಹೆಚ್ಚಾಗುವುದು ಸಹಜ. ಇದರ ಬಗ್ಗೆ ಕಟ್ಟೆಚ್ಚರ‌ ವಹಿಸಿ, ಗಡಿಗಳನ್ನು ಬಿಗಿ ಮಾಡಲಾಗಿದೆ ಎಂದರು.

ಇಷ್ಟು ಮಾಡಿದರೆ ಸಾಲದು; ಜನರೇ ಇನ್ನಷ್ಟು ಕಟ್ಟೆಚ್ಚರ ವಹಿಸಬೇಕು ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.

click me!