Power Tariff Hike: ವಿದ್ಯುತ್‌ ದರ ಏರಿಕೆ ಅನಿವಾರ್ಯ: ಸಚಿವ ಸುನಿಲ್‌ ಕುಮಾರ್‌

By Kannadaprabha NewsFirst Published Jan 22, 2022, 9:02 AM IST
Highlights

*   ಶಾಸ್ತ್ರೀಯ ಕನ್ನಡ ಅನುದಾನಕ್ಕಾಗಿ ಮುಂದಿನ ವಾರ ದೆಹಲಿಗೆ: ಸುನಿಲ್‌
*   8ನೇ ಪರಿಚ್ಛೇದಕ್ಕೆ ತುಳು ಸೇರಿಸಲು ಬೇಡಿಕೆ ಇಡುವೆ
*   ಕೇಂದ್ರ ಇಂಧನ ಸಚಿವರ ಜತೆಗೂ ಸಮಾಲೋಚನೆ
 

ಬೆಂಗಳೂರು(ಜ.22):  ಕನ್ನಡ ಶಾಸ್ತ್ರೀಯ ಸ್ಥಾನಮಾನಕ್ಕೆ(Kannada Classical Status) ನೀಡಬೇಕಾದ ಅನುದಾನ ಬಿಡುಗಡೆ ಹಾಗೂ ತುಳು ಭಾಷೆಯನ್ನು(Tulu Language) ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಸಂಬಂಧ ಮುಂದಿನ ವಾರ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌(Sunil Kumar) ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 26ರ ನಂತರ ದೆಹಲಿಗೆ ತೆರಳಲಿದ್ದು ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ(Department of Kannada & Culture) ಎರಡೂ ಇಲಾಖೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ(Central Government) ಸಚಿವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ ಎಂದರು.

Electricity Bill: ವಿದ್ಯುತ್‌ ಬಿಲ್‌ ಮನ್ನಾ ವಿಚಾರ : ಸಚಿವ ಸುನೀಲ್‌ ಸ್ಪಷ್ಟನೆ

ಇಂಧನ ಇಲಾಖೆಗೆ(Department of Energy) ಸಂಬಂಧಪಟ್ಟಂತೆ, ಆರ್‌ಡಿಎಸ್‌ಎಸ್‌ ಯೋಜನೆಗೆ ಎಲ್ಲ ರಾಜ್ಯಗಳಿಗೂ ಕೇಂದ್ರ ಅನುದಾನ(Grants) ಕೊಡುತ್ತಿದೆ. ಹಾಗಾಗಿ, ರಾಜ್ಯಕ್ಕೂ ಅನುದಾನ ಕೊಡಬೇಕೆಂದು ಮನವಿ ಮಾಡುತ್ತೇನೆ. ಇದೇ ವೇಳೆ, ಕನ್ನಡ ಭಾಷೆಯ ಶಾಸ್ತ್ರೀಯ ಸ್ಥಾನಮಾನಕ್ಕೆ ನೀಡಬೇಕಾದ ಅನುದಾನ ಬಿಡುಗಡೆಗೆ ಮನವಿ ಮಾಡುತ್ತೇನೆ. ಅನುದಾನ ನಿರೀಕ್ಷಿತ ಮಟ್ಟದಲ್ಲಿ ಆಗಬೇಕು. ಅದೇ ರೀತಿ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸಚಿವರಿಗೆ ಮನವಿ ಮಾಡಲಾಗುವುದು ಎಂದರು.

ಬಜೆಟ್‌ನಲ್ಲಿ ಕನ್ನಡಕ್ಕೆ ಹೆಚ್ಚಿನ ಅನುದಾನ:

ಸಂಸ್ಕೃತ ವಿಶ್ವವಿದ್ಯಾಲಯಕ್ಕೆ(University of Sanskrit) ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡ ವಿವಿಗೆ ಹೆಚ್ಚಿನ ಅನುದಾನ ನೀಡಬೇಕು. ಆದರೆ, ಸಂಸ್ಕೃತಕ್ಕೆ ವಿರೋಧ ಮಾಡುವುದು ಸರಿಯಲ್ಲ. ಸಂಸ್ಕೃತ ಎಲ್ಲ ಭಾಷೆಗಳ ತಾಯಿ ಎಂದರು. ಸಂಸ್ಕೃತ ಕನ್ನಡದ ತಾಯಿ ಎಂದು ದಾಖಲೆ ಕೇಳುವ ವಿಚಾರ ಅಲ್ಲ. ಅದಕ್ಕೆ ಆರ್‌ಟಿಸಿ ಕೊಡಿ, ಪಹಣಿ ಕೊಡಿ ಅಂದರೆ ಆಗಲ್ಲ. ಆದರೆ, ಕನ್ನಡಕ್ಕೆ(Kannada) ಹೆಚ್ಚಿನ ಆದ್ಯತೆ ಕೊಡಲೇಬೇಕು. ಮುಂದಿನ ಬಜೆಟ್‌ನಲ್ಲಿ ಕನ್ನಡಕ್ಕೆ ಹೆಚ್ಚಿನ ಅನುದಾನ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.

ವಿದ್ಯುತ್‌ ದರ ಏರಿಕೆ ಅನಿವಾರ್ಯ: ಸುನಿಲ್‌

ಸದ್ಯದ ಪರಿಸ್ಥಿತಿಯಲ್ಲಿ ವಿದ್ಯುತ್‌ ದರ ಏರಿಕೆ ಅನಿವಾರ್ಯ ಎಂದು ಇಂಧನ ಸಚಿವ ವಿ.ಸುನಿಲ್‌ ಕುಮಾರ್‌ ಹೇಳಿದ್ದಾರೆ.

Love Jihad: ಮತಾಂತರ ನಿಷೇಧ ಕಾಯ್ದೆ ಬೆನ್ನಲ್ಲೇ ಲವ್ ಜಿಹಾದ್‌ಗೂ ಕಡಿವಾಣ?ಸಚಿವರ ಸುಳಿವು

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಇವತ್ತಿನ ಸಂದರ್ಭದಲ್ಲಿ ವಿದ್ಯುತ್‌ ದರ(Power Tariff Hike) ಏರಿಕೆ ಅನಿವಾರ್ಯವಾಗಿದೆ. ಇಂಧನ ಇಲಾಖೆಯಿಂದ ಕೆಲವೊಂದಷ್ಟು ಹೊಸ ಯೋಜನೆ ಕೈಗೆತ್ತಿಕೊಳ್ಳುತ್ತಿದ್ದೇವೆ. ಇವಕ್ಕೆ ಸಾಕಷ್ಟು ಅನುದಾನ ಅಗತ್ಯವಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿ ಬೇರೆ ಬೇರೆ ಇಲಾಖೆಗಳಿಂದ ನಮ್ಮ ಇಲಾಖೆಗೆ ಒಟ್ಟು 12 ಸಾವಿರ ಕೋಟಿ ರು. ನಷ್ಟು ಹಣ ಬರುವುದು ಬಾಕಿ ಇದೆ. ಕರ್ನಾಟಕ ವಿದ್ಯುತ್‌ ಶಕ್ತಿ ನಿಯಂತ್ರಣ ಆಯೋಗ ಶಿಫಾರಸು ಮಾಡಿದರೆ ದರ ಏರಿಕೆ ಮಾಡುವುದು ಅನಿವಾರ್ಯ. ಅವರು ಮೊದಲು ವರದಿ ಕೊಡಲಿ. ವರದಿ ಕೊಟ್ಟ ಬಳಿಕ ಎಷ್ಟು ದರ ಏರಿಕೆ ಮಾಡಬೇಕು ಏನು ಎಂಬುದನ್ನು ನಿರ್ಧರಿಸುತ್ತೇವೆ ಎಂದರು.

ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ ಭಾರೀ ಅಕ್ರಮ: ಸುನಿಲ್‌ ಕುಮಾರ್!

ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು  ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದರು. "ಈ ಅಕ್ರಮ, ಭ್ರಷ್ಟಾಚಾರದಲ್ಲಿ (Curruption) ಹಲವಾರು ಅಧಿಕಾರಿಗಳು ಭಾಗಿಯಾಗಿದ್ದೂ  224 ಕೋಟಿ ರೂ. ವೆಚ್ಚದ ಕಾಮಗಾರಿಗಳಲ್ಲಿ ಲೋಪವಾಗಿದೆ. ಟೆಂಡರ್ ಪ್ರಕಾರ ಯಾವುದೇ ಕಾಮಗಾರಿ ನಡೆದಿಲ್ಲ. ಕಾರ್ಮಿಕ ನಿಯಮಾವಳಿ ಪಾಲಿಸಿಲ್ಲ. ಸರ್ಕಾರದ ನಿರ್ದೇಶನದಂತೆ ಈ ಯೋಜನೆ ಅನುಷ್ಠಾನವಾಗಿಲ್ಲ" ಎಂದು ಸುನಿಲ್‌ ಕುಮಾರ್‌ ಮಾಹಿತಿ ನೀಡಿದ್ದರು. 
 

click me!