ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಕೆ

By Kannadaprabha News  |  First Published Jul 5, 2024, 3:28 PM IST

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. 


ಬೆಂಗಳೂರು (ಜು.05): ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳುಸಲ್ಲಿಕೆಯಾಗಿವೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಸಂಬಂಧ ಪ್ರಜ್ವಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. 

ಈ ಎಫ್‌ಐಆರ್ ಸಂಬಂಧ ಜಾಮೀನು ಕೋರಿ ಅರ್ಜಿ ಸಲ್ಲಿ ಸಿದ್ದಾರೆ. ಪ್ರಕರಣದಲ್ಲಿ ಪ್ರಜ್ವಲ್‌ಗೆ ಜಾಮೀನು ನಿರಾಕರಿಸಿ ಜೂ.26 ರಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಇದರಿಂದ ರೆಗ್ಯೂಲರ್ ಜಾಮೀನು ಕೋರಿ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಸಿಐಡಿ ಪೊಲೀಸರು ದಾಖಲಿಸಿರುವ 2 ಪ್ರತ್ಯೇಕ ಎಫ್‌ಐಆರ್‌ಗಳ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.

Tap to resize

Latest Videos

ಲೈಂಗಿಕ ಕಿರುಕುಳ ಕೇಸ್: ಜು.15ಕ್ಕೆ ಹಾಜರಾಗಲು ಬಿ.ಎಸ್.ಯಡಿಯೂರಪ್ಪಗೆ ಸಮನ್ಸ್‌

ಆರೋಪಗಳಿಂದ ಹೊರಬರ್ತಾನೆ: ಎಂಎಲ್ಸಿ, ಪುತ್ರ ಸೂರಜ್ ಮಹಾನ್ ದೈವ ಭಕ್ತ. ಆತ ಬಹಳ ಬೇಗ ಎಲ್ಲ ಆರೋಪಗಳಿಂದ ಹೊರಬರುತ್ತಾನೆ ಅನ್ನುವ ನಂಬಿಕೆ ಇದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು? ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡುವುದಿಲ್ಲ. ಎಲ್ಲವೂ ನ್ಯಾಯಾಲಯದ ಮುಂದೆ ಇವೆ ಎಂದು ಹೇಳಿದರು.

ಮೊದಲು ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ. ಎಂತೆಂಥವರಿಗೋ ಕಷ್ಟ ಬರುತ್ತದೆ, ಅದರಲ್ಲಿ ನಮ್ಮದು ಏನಿದೆ? ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲ ಉತ್ತರ ಕೊಡುತ್ತದೆ. ನಾನು ಯಾವತ್ತೂ, ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನ್ನೆಲ್ಲ ಬಹಳ ನೋಡಿದ್ದೇನೆ ಎಂದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವ‌ರ್‌ ಬಿಜೆಪಿ ಅಭ್ಯರ್ಥಿಯಾದ್ರೂ ಜೆಡಿಎಸ್ ಬೆಂಬಲ!

ಪ್ರಜ್ವಲ್ ಭೇಟಿಗೆ ಹೋಗಲ್ಲ: ನಾನು ಸದ್ಯಕ್ಕೆ ಪುತ್ರ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತ ಹೇಳುತ್ತಾರೆ. ಹೀಗಾಗಿ ನಾನು ಹೋಗಲ್ಲ. ಸೋಮವಾರ ನನ್ನ ಪತ್ನಿ ಹೋಗಿ ಭೇಟಿ ಮಾಡಿ ಬಂದಿದ್ದಾರೆ. ತಾಯಿ- ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು.

click me!