ಪ್ರಜ್ವಲ್ ರೇವಣ್ಣಗೆ ತನ್ನದೇ ವಿಡಿಯೋ, ಫೋಟೋ ನೋಡಲು ಕೋರ್ಟ್ ಅನುಮತಿ!

Published : Jan 17, 2025, 01:00 PM ISTUpdated : Aug 02, 2025, 05:23 PM IST
ಪ್ರಜ್ವಲ್ ರೇವಣ್ಣಗೆ ತನ್ನದೇ ವಿಡಿಯೋ, ಫೋಟೋ ನೋಡಲು ಕೋರ್ಟ್ ಅನುಮತಿ!

ಸಾರಾಂಶ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಮೊಬೈಲ್‌ ಅನ್ನು ವಾಪಸ್ ಕೊಡುವಂತೆ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಆದರೆ, ಕೋರ್ಟ್‌ನಲ್ಲಿಯೇ ವಿಡಿಯೋ ಮತ್ತು ಫೋಟೋಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿದೆ.

ಬೆಂಗಳೂರು (ಜ.17): ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿರುವ ತನ್ನ 2,000 ವಿಡಿಯೋ ಹಾಗೂ 15 ಸಾವಿರ ಫೋಟೊಗಳು ಇರುವ ಮೊಬೈಲ್‌ ಅನ್ನು ವಾಪಸ್ ಕೊಡುವಂತೆ ಹಾಗೂ ಪ್ರಕರಣದಿಂದ ತನ್ನನ್ನು ಖುಲಾಸೆ ಮಾಡುವಂತೆ ಸಲ್ಲಿಸಿದ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯವು, ನಿಮಗೆ ಮೊಬೈಲ್ ಕೊಡಲಾಗುವುದಿಲ್ಲ. ಆದರೆ, ನಿಮ್ಮ ವಿಡಿಯೋ ಹಾಗೂ ಫೋಟೋಗಳನ್ನು ಕೋರ್ಟ್‌ನಲ್ಲಿಯೇ ವೀಕ್ಷಣೆ ಮಾಡುವುದಕ್ಕೆ ಅವಕಾಶ ನೀಡಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣನನ್ನು ಇಂದು ಬೆಳಗ್ಗೆ 11 ಗಂಟೆಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅತ್ಯಾಚಾರ ಪ್ರಕರಣ ಸಂಬಂಧ ಟ್ರಯಲ್ ಆರಂಭ ಮಾಡಿದ ನ್ಯಾಯಾಲಯದ ಮುಂದೆ ಪ್ರಜ್ವಲ್ ಹಾಜರಾದರೂ, ಎಸ್‌ಪಿಪಿ ಹಾಜರಾಗಿರಲಿಲ್ಲ. ಹೀಗಾಗಿ ಕೆಲಕಾಲ ವಿಚಾರಣೆ ಮುಂದೂಡಿದ್ದ ನ್ಯಾಯಾಲಯದ ಮುಂದೆ ತನಗೆ ವಿಡಿಯೋ ಕಾನ್ಫರೆನ್ಸ್ ವಿಚಾರಣೆಗೆ ಹಾಜರಾಗಲು ಅವಕಾಶ ನೀಡುವಂತೆ ಮನವಿ ಮಾಡಿದರು. ಆದರೆ, ಇದನ್ನ ನಿರಾಕರಿಸಿದ ಕೋರ್ಟ್ ಖುದ್ದು ಹಾಜರಾತಿಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಪರಪ್ಪನ ಆಗ್ರಹಾರ ಜೈಲಿಂದ ಪ್ರಜ್ವಲ್‌ನನ್ನು ಪೊಲೀಸರು ಕೋರ್ಟ್‌ಗೆ ಕರೆತಂದಿದ್ದಾರೆ.

ಪ್ರಜ್ವಲ್ ರೇವಣ್ಣ ತನ್ನ ಮೇಲಿನ ಅತ್ಯಾಚಾರ ಪ್ರಕರಣದ 2,000 ವೀಡಿಯೋ, 15000 ಪೋಟೋ ಇರುವ ಮೊಬೈಲ್ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಸಂತೋಷ್ ಗಜಾನನ ಭಟ್ ಅವರು, ನಿಮಗೆ ವಿಡಿಯೋ ಹಾಗೂ ಪೋಟೋ ನೀಡಲು ಸಾಧ್ಯವಿಲ್ಲ. ಈ ಕೇಸಿನ ಬಗ್ಗೆ ಹೈಕೋರ್ಟ್‌ನಲ್ಲಿಯೂ ಕೂಡ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಆದರೆ, ಪ್ರಜ್ವಲ್ ಕೋರಿಕೆ ಮೇರೆಗೆ ಆರೋಪಿಗೆ ವಿಡಿಯೋ ಹಾಗೂ ಪೋಟೋ ತೋರಿಸಲು ಸೂಚನೆ ನೀಡಿದರು. ಇಂದೇ ಕೋರ್ಟ್‌ನಲ್ಲಿಯೇ ನಿಮಗೆ ಏನ್ ಬೇಕೋ ನೋಡಿಕೊಳ್ಳಿ. ಪ್ರಜ್ವಲ್ ಹಾಗೂ ವಕೀಲರಿಗೆ ಬೇಕಾದ ಸಾಕ್ಷಿ ವೀಕ್ಷಣೆಗೆ ಅವಕಾಶ ನೀಡಲಾಯಿತು. ಆದರೆ, ಇಂದು ಬೇಡ ವಿಚಾರಣೆ ಸೋಮವಾರಕ್ಕೆ ಮುಂದೂಡಿ ಎಂದು ಪ್ರಜ್ವಲ್ ಪರ ವಕೀಲರ ಮನವಿ ಮಾಡಿದರು. ಆಗ ಕೋರ್ಟ್‌ನಿಂದ ಪ್ರಜ್ವಲ್ ರೇವಣ್ಣ ಪರ ವಕೀಲರ ಮನವಿ ತಿರಸ್ಕಾರ ಮಾಡಲಾಯಿತು.

ಇದನ್ನೂ ಓದಿ: ಆ.. 2,000 ವಿಡಿಯೋ, 15,000 ಫೋಟೋಗಳಿರುವ ಮೊಬೈಲ್ ವಾಪಸ್ ಕೊಡಿ; ಪ್ರಜ್ವಲ್ ರೇವಣ್ಣ ಮನವಿ!

ಕೋರ್ಟ್‌ನಲ್ಲಿ ತನ್ನದೇ ಕೇಸಿನ ವಿಡಿಯೋ, ಫೋಟೋ ಸೇರಿದಂತೆ ತಾಂತ್ರಿಕ ಸಾಕ್ಷ್ಯಗಳ ವೀಕ್ಷಣೆಗೆ ಅವಕಾಶ ಕೊಟ್ಟ ಕೋರ್ಟ್ ಮುಂದೆ, ಪ್ರಜ್ವಲ್ ಪರ ವಕೀಲರು ಇಂದು ಬೇಡ ನಾಳೆಯಾದರೂ ವೀಕ್ಷಣೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಹೀಗಾಗಿ, ನಾಳೆ ಕೋರ್ಟ್‌ನಲ್ಲಿಯೇ ತನ್ನ ಪೋಟೋ ಹಾಗೂ ವೀಡಿಯೋ ನೋಡಲು ಪ್ರಜ್ವಲ್‌ಗೆ ಕೋರ್ಟ್‌ನಿಂದ ಅವಕಾಶ ನೀಡಲಾಯಿತು. ಟೆಕ್ನಿಕಲ್ ಎಕ್ಸಪರ್ಟ್ ಸಹಾಯದಿಂದ ಪೋಟೋ, ವಿಡಿಯೋ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ಇನ್ನು ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧದ ಅತ್ಯಾಚಾರ ಪ್ರಕರಣದ ಆರೋಪವನ್ನು ಖುಲಾಸೆ ಮಾಡುವಂತೆ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ಮಾಡಿದ ಕೋರ್ಟ್‌ ಮುಂದೆ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ ಎಂದು ಪ್ರಜ್ವಲ್ ಪರ ವಕೀಲರು ವಾದ ಮಂಡಿಸಿದರು. ಇನ್ನು ಅತ್ಯಾಚಾರ ಸಂತ್ರಸ್ತೆ ಕೆಲಸ ಬಿಟ್ಟು ತುಂಬಾ ವರ್ಷಗಳೇ ಆಗಿತ್ತು. ಪೊಲೀಸರ ಮುಂದೆ ನೀಡಿದ ಹೇಳಿಕೆಗೂ, ನ್ಯಾಯಾಧೀಶರ ಮುಂದೆ ಹೇಳಿಕೆಗೂ ವ್ಯತ್ಯಾಸ ಇದೆ ಎಂದು ಪ್ರಜ್ವಲ್ ಪರ ವಕೀಲರು ವಾದ ಮಂಡಿಸಿದರು. ನಂತರ, ಈ ಅರ್ಜಿಯನ್ನೂ ನಾಳೆಗೆ ಮುಂದೂಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್, ಆರೋಪ ನಿಗದಿಗೆ ತಡೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್‌ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್‌ ವಿರುದ್ಧ ರಜತ್‌ ಆರೋಪ