ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸೂಜಿ ಮೊನೆಯಷ್ಟೂ ಮಧ್ಯೆಪ್ರವೇಶ ಮಾಡೊಲ್ಲ: ಸಿಎಂ

By Ravi Janekal  |  First Published May 6, 2024, 10:53 PM IST

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದೆ. ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರು (ಮೇ.6): ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದೆ. ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

'ಎಸ್ ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್’ ಬಿಜೆಪಿ ನಾಯಕ ದೇವರಾಜೇಗೌಡ ಗಂಭೀರ ಆರೋಪ ಮಾಡಿರುವ ಹಿನ್ನೆಲೆ ಈ ಬಗ್ಗೆ ಟ್ವಿಟರ್ ಎಕ್ಸ್(twitter X) ಮೂಲಕ ಸ್ಪಷ್ಟನೆ ನೀಡಿರುವ ಸಿಎಂ,  ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ  ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ ಎಂದಿದ್ದಾರೆ.

Tap to resize

Latest Videos

ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ ಮೈತ್ರಿ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಕೆ ಶಿವಕುಮಾರ

ಎಸ್ ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್ ಐಟಿ ರಚಿಸಲಾಗಿದೆ. ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು. ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು ಎಂದಿದ್ದಾರೆ.

ಸೋಲುವ ಭೀತಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಂತೆ ಕಂತೆ ಹಣ ಹಂಚಿಕೆ!

ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣ(Prajwal Revanna)ನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಆಗ್ರಹಿಸಿದ್ದಾರೆ.

click me!