ಅಯೋಧ್ಯ ರಾಮಮಂದಿರಕ್ಕೆ ಅಪಸ್ವರ ಬೇಡ: ಪ್ರಮೋದ್‌ ಮುತಾಲಿಕ್‌

By Kannadaprabha News  |  First Published Jan 25, 2024, 1:00 AM IST

ರಾಮ ಮಂದಿರ ನಿರ್ಮಾಣದಿಂದ ದೇಶವೇ ಸಂಭ್ರಮ ಪಡುವ ಹೊತ್ತಿನಲ್ಲಿ ಕೆಲವರು ಅಪಸ್ವರ ಹಾಡುತ್ತಿರುವುದು ಸರಿಯಲ್ಲ ಎಂದು ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಹೇಳಿದರು. 


ಯಮಕನಮರಡಿ (ಜ.25): ರಾಮ ಮಂದಿರ ನಿರ್ಮಾಣದಿಂದ ದೇಶವೇ ಸಂಭ್ರಮ ಪಡುವ ಹೊತ್ತಿನಲ್ಲಿ ಕೆಲವರು ಅಪಸ್ವರ ಹಾಡುತ್ತಿರುವುದು ಸರಿಯಲ್ಲ ಎಂದು ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಹೇಳಿದರು. ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ - ಖಾನಾಪೂರ ಗ್ರಾಮದಲ್ಲಿ ಮಾತನಾಡಿದ ಅವರು, ಲಕ್ಷಾಂತರ ಕರಸೇವಕರ, ಹಿಂದು ಕಾರ್ಯಕರ್ತರ ಶ್ರಮದ ಫಲವಾಗಿ ಇಂದು ಮಂದಿರ ನಿರ್ಮಾಣ ಆಗಿದೆ. ಮಂದಿರ ಉದ್ಘಾಟನೆ ನೋಡುತ್ತಿರುವುದು ನಮ್ಮ ಪುಣ್ಯ. ಆದರೆ, ಕೆಲವರು ಅಪಸ್ವರ ಎತ್ತುತಿರುವುದು ಮೂರ್ಖತನದ್ದು. ಸುನಾಮಿ ಎಂಬ ಶ್ರೀರಾಮನ ಅಲೆಯಲ್ಲಿ ಅಪಸ್ವರಗಳು ಕೊಚ್ಚಿ ಹೋಗುವುದು ಖಚಿತ ಎಂದರು.

ಹಿಂದು ಕಾರ್ಯಕರ್ತರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ: ರಾಜ್ಯ ಸರ್ಕಾರ ಹಿಂದು ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿರುವುದನ್ನು ಖಂಡಿಸಿ ಮಂಗಳವಾರ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ 6 ತಿಂಗಳಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರ ಹಿಂದು ಸಂಘಟನೆ ಹಾಗೂ ಹಿಂದು ಕಾರ್ಯಕರ್ತರ ಮೇಲೆ ಕಿರುಕುಳ, ಸುಳ್ಳು ಪ್ರಕರಣ, ಜೈಲು ವಾಸ ನಿರಂತರ ನಡೆಯುತ್ತಿದೆ. ಅಲ್ಲದೇ ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ದೂರಿದರು.

Tap to resize

Latest Videos

undefined

ರಾಜ್ಯದಲ್ಲಿರುವುದು ಹುಚ್ಚು ಕಾಂಗ್ರೆಸ್‌ ಸರ್ಕಾರ: ಕೆ.ಎಸ್‌.ಈಶ್ವರಪ್ಪ ಕಿಡಿ

ರಾಜ್ಯ ಸರ್ಕಾರ ಹಿಂದು ವಿರೋಧಿಯಾಗಿ ವರ್ತಿಸುತ್ತಿದೆ. ದುರುದ್ದೇಶದಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ಯಪಡಿಸಿದರು. ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದು ಕಾರ್ಯಕರ್ತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿವೆ. ಗೋವು ರಕ್ಷಿಸುವ ಮತ್ತು ಮತಾಂತರ ತಡೆಯುವ ಹಿಂದು ಸಂಘಟನೆಗಳು ಹಾಗೂ ಕಾರ್ಯಕರ್ತರನ್ನು ಹೆದರಿಸುವ ಕೆಲಸ ನಡೆದಿದೆ. ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ, ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸಲಾಯಿತು. 

ಶಾಸಕ ಹರೀಶ್ ನೀತಿಪಾಠದ ಅಗತ್ಯ ನನಗಿಲ್ಲ: ಎಂ.ಪಿ.ರೇಣುಕಾಚಾರ್ಯ ಟಾಂಗ್

ಆದರೆ, ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರ ಮೇಲಿರುವ ಹಳೆಯ ಪ್ರಕರಣಕ್ಕೆ ಸಂಬಂಧಿಸಿ ಯಾವ ಕ್ರಮವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಕೋಟೆ ಕೆರೆ ಉದ್ಯಾನದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಕ್ಕನೊಂದಿಗೆ ಮಾತನಾಡುತ್ತ ಕುಳಿತಿದ್ದ ಹಿಂದು ಸಮುದಾಯದ ತಮ್ಮನನ್ನು ಇತ್ತೀಚೆಗೆ ಥಳಿಸಲಾಗಿದೆ. ಗೋಮಾಂಸ ಸಾಗಾಟ ತಡೆದಿದ್ದರಿಂದ ಹಿಂದು ಕಾರ್ಯಕರ್ತರನ್ನು ಬಂಧಿಸಲಾಗಿದೆ. ದತ್ತಪೀಠಕ್ಕಾಗಿ ಹೋರಾಡಿದ ಕಾರ್ಯಕರ್ತರಿಗೂ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದರು. ಹಿಂದು ವಿರೋಧಿಯಾಗಿ ವರ್ತಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು. ಇಲ್ಲದಿದ್ದರೇ ಕಾಂಗ್ರೆಸ್ ‌ಹಠಾವೊ, ಕರ್ನಾಟಕ ಬಚಾವೊ ಆಂದೋಲನ ನಡೆಸಬೇಕಾಗುತ್ತದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಡೀ ಹಿಂದು ಸಮುದಾಯ ಕಾಂಗ್ರೆಸ್‌ನಿಂದ ದೂರ ಸರಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

click me!