ಪಂಚಮಸಾಲಿ ಸ್ವಾಮೀಜಿ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ..!

Published : Nov 06, 2020, 06:33 PM ISTUpdated : Nov 06, 2020, 07:30 PM IST
ಪಂಚಮಸಾಲಿ ಸ್ವಾಮೀಜಿ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ..!

ಸಾರಾಂಶ

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಸಂಬಂಧಿಸಿರುವುದನ್ನ ಖಂಡಿಸಿದ ಸ್ವಾಮೀಜಿ ವಿರುದ್ಧ ಪ್ರಮೋದ್ ಮುತಾಲಿಕ್ ಗಂರ ಆಗಿದ್ದಾರೆ.

ಬೆಳಗಾವಿ, (ನ.6): ಕೊಲೆ ಆರೋಪದಲ್ಲಿ ಜೈಲಿಗೆ ಹೋದರೆ ಅವರು ನಮ್ಮವರು ಎನ್ನುವುದು ಸರಿಯಲ್ಲವೆಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳಿಗೆ ಪ್ರಮೋದ್ ಮುತಾಲಿಕ್ ತಿರುಗೇಟು ಕೊಟ್ಟಿದ್ದಾರೆ.

"

ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ಉತ್ತಮ ಹಿನ್ನಲೆಯುಳ್ಳ ಕುಟುಂಬದಿಂದ ಬಂದ ವ್ಯಕ್ತಿಯನ್ನು ಬೆಳಗಿನ ಜಾವ ಏಕಾಏಕಿ ಬಂದಿಸಿರುವುದು ಸರಿಯಲ್ಲ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದರು.

ನಾಲ್ಕು ವರ್ಷದ ಹಳೇ ಕೇಸು: ಮಾಜಿ ಸಚಿವಗೆ ಬಿಗ್ ಶಾಕ್..! 

ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್,  ಕಾನೂನು ಪ್ರಕಾರ ಅಪರಾಧಿ, ನಿರಪರಾಧಿ ಅನ್ನುವುದು ಸಾಬೀತಾಗಬೇಕು. ಪ್ರಾರಂಭದಲ್ಲಿ ಆರೋಪಿಗಳು ನಮ್ಮವರು ಎನ್ನುವುದು ಅನೈತಿಕತೆ ಎಂದರು.

"

ಕಾವಿ ಬಟ್ಟೆ ಹಾಕಿರುವ ನೀವು ಒಂದು ಜಾತಿಗೆ ಸೀಮಿತವಲ್ಲ. ಬಂಧನವಾದ ಕೂಡಲೇ ಬೆಂಬಲ ಕೊಡುವುದರಿಂದ ತಪ್ಪು ಸಂದೇಶ ರವಾನೆ ಆಗುತ್ತದೆ. ಆಧಾರ ಇರುವ ಕಾರಣ ಸಂಶಯದಿಂದ ವಿನಯ ಕುಲಕರ್ಣಿ ಬಂಧಿಸಿದ್ದಾರೆ. ವಿನಯ್ ಕುಲಕರ್ಣಿ ಅವರ ಪರವಾಗಿ ನಿಂತಿದ್ದು, ನಿಮ್ಮ ಮಠದ ಶೋಭೆ ಅಲ್ಲ ಎಂದು ಸ್ವಾಮೀಜಿ ವಿರುದ್ಧ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!