
ಹಾವೇರಿ(ನ.29): ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದ ಶರಣಬಸವೇಶ್ವರ ಮಠದ ಪ್ರಣವಾನಂದ ಸ್ವಾಮೀಜಿಗೆ ಗಂಡು ಮಗು ಜನನವಾಗಿದೆ.
ಕೇರಳ ಮೂಲದ ಮೀರಾ ಎಂಬುವರನ್ನು ಎರಡು ವರ್ಷದ ಹಿಂದೆ ಪ್ರಣವಾನಂದ ಸ್ವಾಮೀಜಿ ಮದುವೆ ಆಗಿದ್ದರು. ಈಗ ಗಂಡು ಮಗು ಜನಿಸಿದ್ದಕ್ಕೆ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಗುವನ್ನು ನೋಡಲು ಸ್ವಾಮೀಜಿ ಕೇರಳಕ್ಕೆ ತೆರಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸ್ವಾಮೀಜಿ, ಮಗು ಜನನದಿಂದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರದ ಶರಣಬಸವೇಶ್ವರ ಮಠಕ್ಕೆ ಉತ್ತರಾಧಿಕಾರಿ ಸಿಕ್ಕಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ತಮ್ಮ ಧರ್ಮಪತ್ನಿ ಮೀರಾ ದೇವರ ಆಶೀರ್ವಾದದಿಂದ ಗಂಡು ಮಗುವಿಗೆ ಜನ್ಮನೀಡಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಈ ಮಧ್ಯೆ ಸ್ವಾಮೀಜಿಗೆ ಗಂಡುಮಗು ಜನಿಸಿರುವ ವಿಷಯ ತಿಳಿದ ಅರೇಮಲ್ಲಾಪುರ ಗ್ರಾಮದ ಭಕ್ತರು ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆಯ ನಂತರದಲ್ಲಿ ಕೆಲವು ವಿವಾದಾತ್ಮಕ ಹೇಳಿಕೆಗಳಿಂದ ಪ್ರಚಾರ ಪಡೆದುಕೊಂಡಿದ್ದ ಸ್ವಾಮೀಜಿ, ಶ್ರೀರಾಮಸೇನೆ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದರು. ಪ್ರಣವಾನಂದ ಸ್ವಾಮೀಜಿ ಕಟ್ಟಾ ಹಿಂದುತ್ವದ ಪ್ರತಿಪಾದಕರು ಎಂಬುದು ವಿಶೇಷ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ