ದುಷ್ಟ ಶಕ್ತಿಗಳನ್ನ ಮಟ್ಟ ಹಾಕಲು ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ಕೊಲೆಗಾರರನ್ನ ನಿಂತ ಜಾಗದಲ್ಲೆ ಗುಂಡಿಟ್ಟು ಕೊಂದು ಹಾಕಬೇಕು ಅನ್ನೋ ಆಗ್ರಹ ಹೆ್ಚ್ಚಾಗಿದೆ
ಕಲಬುರಗಿ(ಜು. 27) : ಮಂಗಳೂರಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟೂರ ಹತ್ಯೆ ಮಾಡಿದ ಹಂತಕರನ್ನ ಗುಂಡಿಟ್ಟು ಕೊಲ್ಲಿ ಎಂದು ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಹಾಗೂ ಆಂದೋಲ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ. ಹಿಂದೂ ಯುವಕ ಪ್ರವೀಣ್ ಹತ್ಯೆಯಿಂದ ಮಾನವ ಸಮಾಜ ತೆಲೆ ತಗ್ಗಿಸುವಂತಾಗಿದೆ. ಬಿಜೆಪಿ ಸರ್ಕಾರ ಹಿಂದೂ ಕಾರ್ಯಕರ್ತರನ್ನು ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗುತ್ತಿದೆ ಎಂದು ಆಂದೋಲ ಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂಗಳು, ಹಿಂದೂ ಕಾರ್ಯಕರ್ತರು ಬಿಜೆಪಿ ಮೇಲೆ ಇಟ್ಟಿರುವ ನಂಬಿಕೆ ಹುಸಿಯಾಗುತ್ತಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇದು ಹಿಂದೂ ಕಾರ್ಯಕರ್ತರ ನಾಲ್ಕನೆ ಕೊಲೆಯಾಗಿದೆ. ಸರ್ಕಾರ ಏನು ಮಾಡುತ್ತಿದೆ ? ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎನ್ನುವುದೇ ಯಕ್ಷ ಪ್ರಶ್ನೆಯಾಗಿ ಕಾಡುತ್ತಿದೆ ಎಂದು ಸ್ವಾಮಿಜಿ ಟೀಕಿಸಿದ್ದಾರೆ.
ದುಷ್ಟ ಶಕ್ತಿಗಳನ್ನ ಮಟ್ಟ ಹಾಕಲು ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ಕೊಲೆಗಾರರನ್ನ ನಿಂತ ಜಾಗದಲ್ಲೆ ಗುಂಡಿಟ್ಟು ಕೊಂದು ಹಾಕಬೇಕು. ಬಾಯಿ ಮಾತನಿಂದ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳತ್ತೆನೆ ಅಂತಾ ಹೇಳುವ ಉಡಾಫೆ ಹೇಳಿಕೆ ಬಿಡಬೇಕು. ಯಾರ್ಯಾರಿಗೆ ಬೆದರಿಕೆ ಇದೆ ಅವರಿಗೆ ಸರ್ಕಾರ ಭದ್ರತೆ ಕೊಡಬೇಕು ಎಂದು ಅವರು ಸರಕಾರಕ್ಕೆ ಒತ್ತಾಯಿಸಿದ್ದಾರೆ.
'ನನ್ನ ಮಗ ನನಗೆ ಬೇಕು, ತಂದು ಕೊಡಿ ಸ್ವಾಮಿ.... ಪ್ರವೀಣ್ ತಾಯಿ ಕಣ್ಣೀರು
ಸದ್ಯ ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿಗೆ ಎಡಿಜಿಪಿ ಅಲೋಕಕುಮಾರ ಕೂಡಲೇ ಭೇಟಿ ನೀಡಬೇಕು. ರಾಜ್ಯದ ಯಾವ ಭಾಗದಲ್ಲೂ ಹಿಂದೂ ಕಾರ್ಯಕರ್ತರು ಸುರಕ್ಷಿತವಾಗಿಲ್ಲ. ಸರಕಾರದ ಇದಕ್ಕೆ ಕಡಿವಾಣ ಹಾಕಲು ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಂದೋಲಾ ಸ್ವಾಮಿಜಿ ಆಗ್ರಹಿಸಿದ್ದಾರೆ.
ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟೂರ್ ಮೇಲೆ ಕಣ್ಣಿಟ್ಟಿದ್ದ ಹಂತಕರು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದರು. ಜುಲೈ 26ರ ರಾತ್ರಿ ಈ ಘಟನೆ ನಡೆದಿತ್ತು. ಮೂವರು ಅಪರಿಚತರಿಂದ ಈ ಕೃತ್ಯ ನಡೆದಿತ್ತು. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಶಾಂತಿ ಕದಡಿದೆ. ಕೊಲೆಯಾದ ಬೆನ್ನಲ್ಲೇ ಪುತ್ತೂರಿನಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿತ್ತು. ಪ್ರತಿಭಟನೆ ತೀವ್ರಗೊಂಡಿತ್ತು. ಇಂದು ಬೆಳಗ್ಗೆಯಿಂದಲೇ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಚೀಲ್, ಸಚಿವ ಸುನಿಲ್ ಕುಮಾರ್, ಶಾಸಕ ಅಂಗಾರ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಮಾಡಲಾಗಿತ್ತು. ನಾಯಕರ ಕಾರು ಪಲ್ಟಿ ಮಾಡಲು ಯತ್ನಿ,ಲಾಗಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಲಾಠಿ ಚಾರ್ಜ್ ಕೂಡ ಮಾಡಲಾಗಿದೆ.
ಪ್ರವೀಣ್ ಹತ್ಯೆ ಖಂಡಿಸಿ ಸಾಮೂಹಿಕ ರಾಜಿನಾಮೆಗೆ ಮುಂದಾದ ಚಿಕ್ಕಮಗಳೂರು ಯುವ ಮೋರ್ಚಾ ಸದಸ್ಯರು