ಹೊಸ ಸಿದ್ಧತೆ ಬಗ್ಗೆ ತಿಳಿಸಿದ ಸಚಿವ ರಮೇಶ್‌ ಜಾರಕಿಹೊಳಿ

Kannadaprabha News   | Asianet News
Published : Feb 14, 2021, 07:45 AM IST
ಹೊಸ  ಸಿದ್ಧತೆ ಬಗ್ಗೆ ತಿಳಿಸಿದ ಸಚಿವ ರಮೇಶ್‌ ಜಾರಕಿಹೊಳಿ

ಸಾರಾಂಶ

ಹೊಸ ಯೋಜನೆಯೊಂದರ ಸಿದ್ಧತೆ ಬಗ್ಗೆ ಜಲಸಂಪನ್ಮೂಲ  ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. 

 ಬೆಳಗಾವಿ (ಫೆ.14):  ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅದರಂತೆ ಆಲಮಟ್ಟಿ, ಕೃಷ್ಣಾ ರಾಷ್ಟ್ರೀಯ ಯೋಜನೆಯನ್ನು ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಲು ಫೆ.21 ಹಾಗೂ ಫೆ.22ರಂದು ದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡುತ್ತೇನೆ. ರಾಷ್ಟ್ರೀಯ ಯೋಜನೆಯಾದ್ರೆ ಶೇ.90ರಷ್ಟುಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ.10ರಷ್ಟುಅನುದಾನ ನೀಡಲಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನೂ ರಾಷ್ಟ್ರೀಯ ಯೋಜನೆ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ. ಹೊಸ ಯೋಜನೆಗಳಿಗೆ ಕೇಂದ್ರ ಶೇ.60 ಹಾಗೂ ರಾಜ್ಯ ಸರ್ಕಾರ ಶೇ.40 ರಷ್ಟುಅನುದಾನ ನೀಡಲಿದೆ ಎಂದು ತಿಳಿಸಿದರು.

ಸಾಹುಕಾರ್‌ಗೆ ಟಕ್ಕರ್ ಕೊಟ್ಟ ಲಕ್ಷ್ಮೀ: ರಾಜಕಾರಣದಲ್ಲಿ ಸಂಚಲನ

ಮಹದಾಯಿ ವಿಷಯದಲ್ಲಿ ಗೋವಾ ಕ್ಯಾತೆ ತೆಗೆಯುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದ ಹಿತಾಸಕ್ತಿಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈಗಾಗಲೇ ನ್ಯಾಯಾಧಿಕರಣದಲ್ಲಿ ಇತ್ಯರ್ಥವಾಗಿರುವ ಪ್ರಕರಣಕ್ಕೆ ಪ್ರಧಾನ ಮಂತ್ರಿಗಳು ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸುತ್ತಿದ್ದಾರೆ. ಆದರೆ, ಇದು ಅಂತಾರಾಜ್ಯದ ವಿಷಯವಾಗಿದ್ದರಿಂದ ಯೋಜನೆಗೆ ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಅನುಮತಿ ಬೇಕು. ಕೊರೋನಾ ಹಿನ್ನೆಲೆಯಲ್ಲಿ ಕೆಲಸ ವಿಳಂಬವಾಗಿದೆ. ಯೋಜನೆ ಆರಂಭ ಕುರಿತು ದೆಹಲಿಯಲ್ಲಿ ಸಭೆ ಮಾಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ