ಲೋಕಸಭಾ ಚುನಾವಣಾ ಫಲಿತಾಂಶ: 3 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಸಿದ್ಧತೆ

By Kannadaprabha NewsFirst Published Jun 3, 2024, 9:31 AM IST
Highlights

ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಜೂನ್‌ 4 ರಂದು ನಡೆಯುವುದರಿಂದ ಬೆಂಗಳೂರಿನ ಮೂರು ಮತ ಎಣಿಕಾ ಕೇಂದ್ರದಲ್ಲಿ ಅಗತ್ಯ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬೆಂಗಳೂರು (ಜೂ.3) : ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಜೂನ್‌ 4 ರಂದು ನಡೆಯುವುದರಿಂದ ಬೆಂಗಳೂರಿನ ಮೂರು ಮತ ಎಣಿಕಾ ಕೇಂದ್ರದಲ್ಲಿ ಅಗತ್ಯ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ಸಭೆ ನಡೆಸಿದ ತುಷಾರ್‌ ಗಿರಿನಾಥ್‌, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯ ನಡೆಯುವ ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

Latest Videos

ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತ ಎಣಿಕೆ ಕೇಂದ್ರಗಳ ಬಳಿ ಸಿಸಿಟಿವಿ ಹಾಗೂ ವಿಡಿಯೋ ವ್ಯವ್ಯಸ್ಥೆ ಮಾಡಬೇಕು. ಮತ ಎಣಿಕೆ ಕೇಂದ್ರಗಳಲ್ಲಿ ಸ್ಥಾಪಿಸುವ ಮಾಧ್ಯಮ ಕೇಂದ್ರಗಳಲ್ಲಿ ಮಾಹಿತಿ ಒದಗಿಸುವುದಕ್ಕೆ ವ್ಯವಸ್ಥೆ ಮಾಡಬೇಕು. ಮಾಧ್ಯಮ ಪ್ರತಿನಿಧಿಗಳಿಗೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ನಿರ್ದೇಶಿಸಿದ್ದಾರೆ.

ಇಂದು ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಮತದಾನ

ಮತ ಎಣಿಕೆ ಸಿಬ್ಬಂದಿಯನ್ನು ನಿಯೋಜಿಸಿ ತರಬೇತಿಯನ್ನು ನೀಡಲಾಗಿದೆ. ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಅಂಚೆ ಮತ ಪತ್ರ ಎಣಿಕೆಯನ್ನು ಸರಿಯಾಗಿ ಮಾಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ವಿನೋತ್ ಪ್ರಿಯಾ, ಸ್ನೇಹಲ್, ದಯಾನಂದ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ರವಿಚಂದ್ರ ನಾಯ್ಕ್ ಉಪಸ್ಥಿತರಿದ್ದರು.

MLC Election 2024: ಇಂದು ಮೇಲ್ಮನೆ 6 ಸ್ಥಾನಕ್ಕೆ ಮತದಾನ

ಮತ ಎಣಿಕೆ ನಡೆಯುವ ಸ್ಥಳಗಳು

  • ಲೋಕಸಭಾ ಕ್ಷೇತ್ರ ಮತ ಎಣಿಕಾ ಕೇಂದ್ರ
  • ಬೆಂಗಳೂರು ಕೇಂದ್ರ ಮೌಂಟ್ ಕಾರ್ಮೆಲ್ ಕಾಲೇಜು, ಅರಮನೆ ರಸ್ತೆ, ವಸಂತನಗರ
  • ಬೆಂಗಳೂರು ಉತ್ತರ ಸೇಂಟ್ ಜೋಸೆಫ್ ಕಾಲೇಜು, ಮಲ್ಯ ರಸ್ತೆ
  • ಬೆಂಗಳೂರು ದಕ್ಷಿಣ ಎಸ್.ಎಸ್.ಎಂ.ಆರ್.ವಿ ಕಾಲೇಜು, 9ನೇ ಬ್ಲಾಕ್, ಜಯನಗರ
click me!