ವಿಶ್ವವಿಖ್ಯಾತ Mysuru Dasaraಗೆ ರಾಷ್ಟ್ರಪತಿ Draupadi Murmu ವಿಧ್ಯುಕ್ತ ಚಾಲನೆ

By BK AshwinFirst Published Sep 26, 2022, 10:27 AM IST
Highlights

ಇಂದಿನಿಂದ 10 ದಿನಗಳ ಕಾಲ ಮೈಸೂರಿನಲ್ಲಿ ದಸರಾ ಉತ್ಸವ ನಡೆಯಲಿದೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ದಸರಾಗೆ ಚಾಲನೆ ನೀಡಿದ್ದಾರೆ. 

ಐತಿಹಾಸಿಕ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ಕೊಟ್ಟಿದ್ದಾರೆ. ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಷನೆ ಸಲ್ಲಿಸುವ ಮೂಲಕ 413ನೇ ದಸರಾಗೆ ವಿಧ್ಯುಕ್ತ ಚಾಲನೆ ನೀಡಲಾಯ್ತು. ನಂತರ ನಾಡಗೀತೆ ನುಡಿಸಲಾಗಿದೆ. ಈ ವೇಳೆ ವೇದಿಕೆ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭಾಗಿಯಾಗಿದ್ದರು. ಅಲ್ಲದೆ, ಉಸ್ತುವರಿ ಸಚಿವ ಎಸ್‌ಟಿ.ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆಗೆ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ. ಇಂದಿನಿಂದ 10 ದಿನಗಳ ಕಾಲ ದಸರಾ ಸಮಾರಂಭ ನಡೆಯಲಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ದಸರಾ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ಇನ್ನು, ರಾಷ್ಟ್ರಪತಿಯಾದ ಬಳಿಕ ದ್ರೌಪದಿ ಮುರ್ಮು ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. 

ಇನ್ನು, ಚಾಮುಂಡಿದೇವಿಗೆ ನಮ್ಮ ದೇಶದ ಪ್ರಥಮ ಪ್ರಜೆ ಅಂದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ನಮನ ಸಲ್ಲಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ ಅದಿದೇವತೆ ಶ್ರೀ ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸಿದ್ದಾರೆ. ಗರ್ಭಗುಡಿಯಲ್ಲಿ ರಾಷ್ಟ್ರಪತಿ ಕೆಲ ನಿಮಿಷ ಪ್ರಾರ್ಥನೆ ಸಲ್ಲಿಸಿದ್ದಾರೆ. 

ಇದನ್ನು ಓದಿ: ಮೈಸೂರು ದಸರಾ: ಮರದ ಅಂಬಾರಿ ಹೊತ್ತು ಸಾಗಿದ ಮಹೇಂದ್ರ ಆನೆ..!

ಬಳಿಕ ಮೈಸೂರು ದಸರಾಗೆ ಚಾಲನೆ ನೀಡಲು ರಾಷ್ಟ್ರಪತಿ ವೇದಿಕೆಗೆ ಬರುತ್ತಿದ್ದಂತೆ ಸಭಿಕರಿಂದ ಜೋರಾದ ಕರತಾಂಡವದಿಂದ ಸ್ವಾಗತ ದೊರೆತಿದೆ. ನಂತರ, ದೀಪ ಬೆಳಗಿಸಿ, ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು. ಬಳಿಕ ವೇದಿಕೆ ಮುಂಭಾಗ ಬಂದು ಬಂದು ಎಲ್ಲರಿಗೂ ಕೈ ಮುಗಿದು ರಾಷ್ಟ್ರಪತಿ ನಮಸ್ಕರಿಸಿದ್ದಾರೆ. 

ನಂತರ, ರೇಷ್ಮೆ ಪೇಟ ತೊಡಿಸಿ, ಹಾರ ಹಾಕಿ, ಬೆಳ್ಳಿಯ ಚಾಮುಂಡೇಶ್ವರಿ ವಿಗ್ರಹ ನೀಡಿ ರಾಷ್ಟ್ರಪತಿಗೆ ಸನ್ಮಾನ ಮಾಡಲಾಗಿದೆ. ಅಲ್ಲದೆ, ಮಹಿಷ ಮರ್ದಿನಿ ಅವತಾರದ ಬೆಳ್ಳಿಯ ವಿಗ್ರಹವನ್ನು ದ್ರೌಪದಿ ಮುರ್ಮು ಅವರಿಗೆ ಉಡುಗೊರೆ ನೀಡಲಾಗಿದೆ. ಇನ್ನೊಂದೆಡೆ, ಕರ್ನಾಟಕ ರಾಜ್ಯಪಾಳ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಬೆಳ್ಳಿಯ ಆನೆಯನ್ನು ಉಡುಗೊರೆಯಾಗಿ ನೀಡಲಾಗಿದೆ. 

ಇದನ್ನೂ ಓದಿ: Dasara Flower Show 2022: ಗಾಜಿನ ಮನೆಯಲ್ಲಿ ರಾಷ್ಟ್ರಪತಿ ಭವನ ನಿರ್ಮಾಣ

 ಮೈಸೂರು ದಸರಾಗೆ ಚಾಲನೆ ದೊರೆತ ಬಳಿಕ ಮಾತನಾಡಿದ ಸಚಿವ ಎಸ್‌.ಟಿ. ಸೋಮಶೇಖರ್ , ನಾಡಿನ ಜನತೆಗೆ ದಸರಾ ಶುಭಾಶಯ ಕೋರಿದ್ದಾರೆ. ಕೋವಿಡ್ ಕಾರಣಕ್ಕೆ ಎರಡು ವರ್ಷ ಸರಳವಾಗಿ ಮಾಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ದಸರಾ ಉದ್ಘಾಟಿಸಲು ತೀರ್ಮಾನ ಮಾಡಲಾಗಿದೆ ಎಂದು ಈ ವೇಳೆ ಹೇಳಲಾಯ್ತು. 

ನಂತರ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಷ್ಟ್ರಪತಿಯಾದ ಮೇಲೆ ಭೇಟಿ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ. ದುಷ್ಟರ ಸಂಹಾರ, ಶಿಷ್ಟರ ಪರಿಪಾಲನೆ ಇದೆ. ಮಹಿಷಾಸುರ ಈಗ ಇಲ್ಲ. ನಮ್ಮೊಳಗಿನ ಅವಗುಣಗಳನ್ನು ನಿಗ್ರಹಿಸಿಕೊಳ್ಳಬೇಕು ಎಂದು ಹೇಳಿದರು. 

click me!