ಮೋದಿ ನಿರ್ಧಾರದಿಂದ ರೈತರ ಮೊಗದಲ್ಲಿ ಹರ್ಷ

By Kannadaprabha News  |  First Published Nov 8, 2019, 8:04 AM IST

ಕೇಂದ್ರ ಸರ್ಕಾರ ರಾಷ್ಟ್ರಗಳ ಮುಕ್ತ ವ್ಯಾಪಾರ ಒಪ್ಪಂದದಿಂದ ಹೊರಬಂದಿರುವು ದು ಹೈನುಗಾರಿಕೆಯನ್ನು ಅವಲಂಬಿಸಿದವರ ಮೊಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
 


ಬೆಂಗಳೂರು [ನ.08]:  ದೇಶದಲ್ಲಿ ಹೈನುಗಾರಿಕೆ ಸಹಕಾರಿ ಮಾದರಿಯಲ್ಲಿ ನಡೆಯುತ್ತಿದ್ದು, ರೈತರು ಹಾಗೂ ವ್ಯಾಪಾರಿಗಳ ಹಿತ ರಕ್ಷಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ರಾಷ್ಟ್ರಗಳ ಮುಕ್ತ ವ್ಯಾಪಾರ ಒಪ್ಪಂದದಿಂದ ಹೊರಬಂದಿರುವು ದು ಹೈನುಗಾರಿಕೆಯನ್ನು ಅವಲಂಬಿಸಿದವರ ಮೊಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಮುಕ್ತ ವ್ಯಾಪಾರ ಒಪ್ಪಂದ (ಆರ್ ಸಿಇಪಿ) ಅಡಿಯಲ್ಲಿ ಯಾವುದೇ ಡೇರಿ ಉತ್ಪನ್ನಗಳ ಆಮದನ್ನು ಅನುಮತಿಸುವುದು ಭಾರತೀಯ ಡೇರಿ ಉದ್ಯಮ ಮತ್ತು ದೇಶದ ಇಡೀ ಕೃಷಿ ಸಮುದಾಯಕ್ಕೆ ಸವಾಲಾಗುವ ಸಾಧ್ಯತೆ ಇರುವ ಬಗ್ಗೆ ಕೇಂದ್ರ ವಾಣಿಜ್ಯ ಮತ್ತುಕೈಗಾರಿಕೆ ಸಚಿವ ಪಿಯುಷ್ ಗೋಯಲ್ ಅವರಿಗೆ ಕಳೆದ ತಿಂಗಳು ಪತ್ರದ ಮೂಲಕ ಮನವಿ ಮಾಡಲಾಗಿತ್ತು.

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜತೆಗೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರ ಗಮನಕ್ಕೂ ತಂದು ರಾಜ್ಯ ಸರ್ಕಾರದಿಂದ ಕೂಡ ಕೇಂದ್ರಕ್ಕೆ ಮನವರಿಕೆ ಮಾಡಲು ಯತ್ನಿಸಲಾಗಿತ್ತು ಎಂದು ತಿಳಿಸಿದ್ದಾರೆ. ಕರ್ನಾಟಕ ಹಾಲು ಸಂಗ್ರಹಣೆಯಲ್ಲಿ ದೇಶದಲ್ಲಿ 2 ನೇ ಸ್ಥಾನದಲ್ಲಿದೆ ಮತ್ತು ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ 23569 ಹಳ್ಳಿಗಳಲ್ಲಿ ಹಾಲನ್ನು ಸಂಗ್ರಹಿಸಲಾಗುತ್ತಿದೆ. ಅದರಲ್ಲಿ 16229 ಹಾಲು ಸಹಕಾರ ಸಂಘಗಳು ನೋಂದಣಿ ಯಾಗಿವೆ. ಅದರಲ್ಲಿ 4302 ಮಹಿಳಾ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. 

ಒಟ್ಟು 25 ಲಕ್ಷ ರೈತರು ಕರ್ನಾಟಕ ರಾಜ್ಯದಲ್ಲಿ ಹೈನುಗಾರಿ ಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅದರಲ್ಲಿ 9 ಲಕ್ಷ ಮಹಿಳೆ ಯರಿರುವುದು ವಿಶೇಷ. ಹೈನುಗಾರಿಕೆ ಯನ್ನು ಪರ್ಯಾಯ ಕೃಷಿಯಾಗಿ ಅಳವಡಿಸಿಕೊಂಡು ಜೀವನ ನಡಿಸುತ್ತಿದ್ದ ರೈತರು ಪ್ರಧಾನಿ ನರೇಂದ್ರ ಮೋದಿ ಅವರ ಈ ನಿರ್ಣಯದಿಂದ ನಿರಾಳರಾಗಿದ್ದಾರೆ ಎಂದು ಅವರು ಪ್ರಕಟಣೆ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.

click me!