ಯೋಗ ದಿನಾಚರಣೆ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಮೈಸೂರು ಪ್ರವಾಸ ಕೈಗೊಳ್ಳುತ್ತಿದ್ದಾರೆ. ಸೋಮವಾರ ಸಂಜೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಬಸ್ ಸಂಚಾರ ಹಾಗೂ ನಿಲ್ದಾಣಗಳಲ್ಲಿ ಬದಲಾವಣೆ ಮಾಡಲಾಗಿದೆ.
ಮೈಸೂರು (ಜೂ.19): ಯೋಗ ದಿನಾಚರಣೆ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಮೈಸೂರು ಪ್ರವಾಸ ಕೈಗೊಳ್ಳುತ್ತಿದ್ದಾರೆ. ಸೋಮವಾರ ಸಂಜೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಬಸ್ ಸಂಚಾರ ಹಾಗೂ ನಿಲ್ದಾಣಗಳಲ್ಲಿ ಬದಲಾವಣೆ ಮಾಡಲಾಗಿದೆ. ಹೊರಭಾಗದಿಂದ ಬಸ್‌ಗಳು ಸಿಟಿ ಪ್ರವೇಶ ಮಾಡದಂತೆ ಮಾರ್ಗ ಬದಲಾವಣೆ ಮಾಡಲಾಗಿದ್ದು, ದ್ವಿಚಕ್ರ, ನಾಲ್ಕೂ ಚಕ್ರ ಹಾಗೂ ಬಸ್ ನಿಲುಗಡೆಯಲ್ಲೂ ಬದಲಾವಣೆ ಮಾಡಲಾಗಿದೆ. ನಗರಕ್ಕೆ ನಾಲ್ಕು ದಿಕ್ಕುಗಳಿಂದ ಆಗಮಿಸುವ ಬಸ್, ಕಾರ್ ತಾತ್ಕಾಲಿಕ ಬಸ್ ನಿಲುಗಡೆಗೆ ಸ್ಥಳ ನಿಗದಿಪಡಿಸಲಾಗಿದೆ. ನಗರ ಪೊಲಿಸ್ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ.
ಹುಣಸೂರು ಹಾಸನ ಮಾರ್ಗವಾಗಿ ಬರುವ ಬಸ್‌ಗಳಿಗೆ ವಿಲೇಜ್ ಹಾಸ್ಟೆಲ್ ಮೈದಾನ ಬಳಿ ನಿಲ್ದಾಣ, ಪಿರಿಯಾಪಟ್ಟಣ, ಕೆ ಆರ್ ನಗರ ಮಾರ್ಗದ ಬಸ್‌ಗಳಿಗೆ ಮೈಸೂರು ವಿವಿ ಪಾರ್ಕಿಂಗ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ. ನಂಜನಗೂಡು ಚಾಮರಾಜನಗರ ಮಾರ್ಗದ ಬಸ್‌ಗಳಿಗೆ ಎನ್‌ಎಸ್‌ಎಸ್ ಕಚೇರಿ ಮೈದಾನ ಹಾಗು ಸೊಮಾನಿ ಬಿಎಡ್ ಕಾಲೇಜು ಮೈದಾನದ ಆವರಣದಲ್ಲಿ, ಎಚ್ ಡಿ ಕೋಟೆ ಕಡೆಯಿಂದ ಬರುವ ಬಸ್‌ಗಳಿಗೆ ಮಹಾಬೋದಿ ಹಾಸ್ಟೆಲ್ ಮೈದಾನದ ಬಳಿ, ಟಿ ನರಸೀಪುರ ಕಡೆಯಿಂದ ಬರುವ ಬಸ್ ಗಳು ಸ್ಕೌಟ್ ಅಂಡ್ ಗೈಡ್ ಮೈದಾನದಲ್ಲಿ ಸೇರಿದಂತೆ ಯಾವುದೇ ಬಸ್‌ಗಳು ಮೋದಿ ಸಂಚರಿಸುವ ಮಾರ್ಗದಲ್ಲಿ ಸಂಚಾರ ಮಾಡದಂತೆ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಇನ್ನು ನಿಗದಿತ ಪಾರ್ಕಿಂಗ್ ಸ್ಥಳಕ್ಕೆ ತೆರಳಲು ಮೈಸೂರಿನ ಹೊರ ವಲಯದ ರಿಂಗ್ ರಸ್ತೆ ಮೂಲಕ ಆಗಮಿಸಬಹುದಾಗಿದೆ.
undefined
ಸಾಂಸ್ಕೃತಿಕ ನಗರಿಯಲ್ಲಿ ಪ್ರಧಾನಿ ಮೋದಿ ಯೋಗ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆ
ಇನ್ನು ಸೋಮವಾರ 12 ಗಂಟೆಗೆ ಬೆಂಗಳೂರಿಗೆ ಬರಬೇಕಿದ್ದ ಮೋದಿ, ಒಂದುವರೆ ಗಂಟೆ ತಡವಾಗಿ ಬೆಂಗಳೂರಿಗೆ ಬರುತ್ತಿದ್ದು, ಜೂನ್ 20 ಎಲ್ಲಾ ಕಾರ್ಯಕ್ರಮಗಳಲ್ಲೂ ಸಮಯ ವ್ಯತ್ಯಾಸವಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಫಲಾನುಭವಿಗಳ ಸಭೆ ಸಂಜೆ 5 ಕ್ಕೆ ನಿಗದಿಯಾಗಿದ್ದು, ಇದೀಗ ಆ ಕಾರ್ಯಕ್ರಮಕ್ಕೆ ಮೋದಿ 6.05 ಕ್ಕೆ ಭಾಗಿಯಾಗುತ್ತಾರೆ. ನಂತರ 7.30ಕ್ಕೆ ಚಾಮುಂಡಿ ತಾಯಿ ದರ್ಶನಕ್ಕೆ ತೆರಳಬೇಕಿದ್ದ ಮೋದಿ ಈಗ 8.15ಕ್ಕೆ ಬೆಟ್ಟಕ್ಕೆ ಭೇಟಿ ನೀಡುತ್ತಾರೆ.
ಸಾರ್ವಜನಿಕರು ಗಮನಿಸಬೇಕಾದ ಸೂಚನೆಗಳು: ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಮಾರ್ಗಸೂಚಿಯನ್ನು ಮೈಸೂರು ನಗರ ಪೊಲೀಸರು ಪ್ರಕಟಿಸಿದ್ದಾರೆ. ಸಾರ್ವಜನಿಕರಿಗೆ ನಿಗದಿಪಡಿಸಲಾಗಿರುವ ಆಸನದ ವ್ಯವಸ್ಥೆಯಲ್ಲಿ ಬಂದು ಆಸೀನರಾಗಬೇಕು. ಸಾರ್ವಜನಿಕರು ಆಗಮಿಸುವಾಗ ನಿಗದಿಪಡಿಸಿದ ಪ್ರವೇಶ ದ್ವಾರಗಳಿಂದಲೇ ಆಗಮಿಸತಕ್ಕದ್ದು. ಸಾರ್ವಜನಿಕರು ಪ್ರವೇಶ ದ್ವಾರದಲ್ಲಿ ಭದ್ರತಾ ಸಿಬ್ಬಂದಿಗಳ ತಪಾಸಣೆಗೆ ಸಹಕರಿಸುವುದು. ಲೋಹ ಶೋಧಕ ಯಂತ್ರದ ಮೂಲಕ ತಪಾಸಣಿಗೆ ಒಳಪಟ್ಟು, ನಂತರ ಕಾರ್ಯಕ್ರಮದ ಸ್ಥಳಕ್ಕೆ ನಿಗದಿಪಡಿಸಿದ ಸ್ಥಳಕ್ಕೆ ತೆರಳುವುದು.
ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರು ತಮ್ಮೊಂದಿಗೆ ನೀರಿನ ಬಾಟಲ್, ಗಾಜಿನ ಬಾಟಲ್ ಬ್ಯಾಗ್, ವ್ಯಾನಿಟಿಬ್ಯಾಗ್, ಹರಿತವಾದ ವಸ್ತುಗಳು, ಯಾವದೇ ರೀತಿಯ ಆಯುಧಗಳು, ಲೋಹದ ವಸ್ತುಗಳು ಹಾಗೂ ಇತರೆ ಯಾವುದೇ ರೀತಿಯ ವಸ್ತುಗಳನ್ನು ಹೊಂದಿರಬಾರದು. ಯಾವುದೇ ರೀತಿಯ ಕರಪತ್ರ, ಬ್ಯಾನರ್, ಕಪ್ಪು ಬಟ್ಟೆ/ಪ್ಲಾಗ್, ಪ್ಲಕಾರ್ಡ್‌ಗಳಿಗೆ ಅನುಮತ ಇರುವುದಿಲ್ಲ. ಸಾರ್ವಜನಿಕರು ಮೊಬೈಲ್‌ಗೆ ಮಾತ್ರ ಅವಕಾಶವಿದ್ದು ಉಳಿದ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಹೊಂದಲು ಅವಕಾಶ ಇರುವುದಿಲ್ಲ.
(ಕ್ಯಾಮರಾ, ವೀಡಿಯೋಕ್ಯಾಮರಾ, ಪವರ್ ಬ್ಯಾಂಕ್, ಇಯರ್‌ಫೋನ್, ಹ್ಯಾಂಡ್ಸ್ ಫ್ರೀ ಇತ್ಯಾದಿ) ಮೊಬೈಲ್ ಫೋನ್‌ಗಳನ್ನು Switch off ಮಾಡಿರತಕ್ಕದ್ದು. ಬೆಂಕಿ ಉತ್ಪತ್ತಿ ಮಾಡುವ ಬೆಂಕಿಪೊಟ್ಟಣ, ಲೈಟರ್, ಪಟಾಕಿ ಹಾಗೂ ಇತ್ಯಾದಿ ವಸ್ತುಗಳನ್ನು ತೆಗೆದುಕೊಂಡು ಬರಬಾರದು. ಬೀಡಿ, ಸಿಗರೇಟ್, ಗುಟ್ಕಾ ಇತ್ಯಾದಿ ತಂಬಾಕು ಪದಾರ್ಥಗಳನ್ನು ಕಡ್ಡಾಯವಾಗಿ ನಿಷೇದಿಸಿದೆ. ಕರ್ಕಶ ಶಬ್ಧವನ್ನು ಮಾಡುವ ಪೀಪಿ, ತಮಟೆ, ನಗಾರಿ ಇತ್ಯಾದಿ ವಸ್ತುಗಳನ್ನು ನಿಷೇಧಿಸಿದೆ. ಸಾರ್ವಜನಿಕರು ತಮಗೆ ಮೀಸಲಿರುವ ಆಸನಗಳಲ್ಲಿಯೇ ಕುಳಿತುಕೊಳ್ಳುವುದು. ಸಾರ್ವಜನಿಕರು ಆಸೀನರಾದ ನಂತರ ಕಾರ್ಯಕ್ರಮ ಮುಗಿಯುವ ವರೆಗೆ ಒಂದು ಸೆಕ್ಟರ್‌ನಿಂದ ಇನ್ನೊಂದು ಸೆಕ್ಟರ್‌ಗೆ ಹೋಗಬಾರದು.
ಬೆಂಗಳೂರಿನಲ್ಲಿ ಮೋದಿ ಕಾರ‍್ಯಕ್ರಮ ಯಶಸ್ಸಿಗೆ ಸಿದ್ಧತೆ: ಸಿಎಂ ಬೊಮ್ಮಾಯಿ
ಸಾರ್ವಜನಿಕರು ಆಸೀನರಾದ ಸ್ಥಳದಲ್ಲಿ ನಿಂತುಕೊಳ್ಳುವುದು, ಅನಾವಶ್ಯಕವಾಗಿ ತಿರುಗಾಡುವುದು, ಕುರುವುದು ಇತ್ಯಾದಿ ಮಾಡದೆ ತಮ್ಮ ಅಕ್ಕ ಪಕ್ಕ ಆಸೀನರಾದ ಇತರರಿಗೆ ತೊಂದರೆಯಾಗದಂತೆ ವರ್ತಿಸಬೇಕು. ಯಾವುದೇ ವಾರಸುದಾರರಿಲ್ಲದ ಬ್ಯಾಗುಗಳು, ಪೊಟ್ಟಣ, ಆಟಿಕೆ ಸಾಮಾನುಗಳು ಹಾಗೂ ಇತರೆ ವಸ್ತುಗಳು ಕಂಡು ಬಂದಲ್ಲಿ ಅದನ್ನು ಮುಟ್ಟದೇ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವುದು. ಕಾರ್ಯಕ್ರಮ ವೀಕ್ಷಣೆಗೆ ಬರುವವರು ತಮ್ಮ ವಾಹನಗಳನ್ನು ಸಂಚಾರಿ ಪೊಲೀಸರು ನಿಗದಿಪಡಿಸಿರುವ ಸ್ಥಳದಲ್ಲೇ ನಿಲ್ಲಿಸುವುದು. ಸಾರ್ವಜನಿಕರು ಗಣ್ಯವ್ಯಕ್ತಿಗಳು ಸಾಗುವ ಮಾರ್ಗದಲ್ಲಿ ಗುಂಪು ಸೇರದೆ ಹಾಗು ಮಾರ್ಗಕ್ಕೆ ಬಂದು ಅಡ್ಡಿಯುಂಟು ಮಾಡದಂತೆ ಸಾಕಷ್ಟು ಅಂತರವನ್ನು ಕಾಯ್ದುಕೊಂಡು ದೂರದಿಂದಲೇ ವೀಕ್ಷಿಸತಕ್ಕದ್ದು.