
ಬೆಂಗಳೂರು, (ಡಿ.11): ಇಂದು (ಭಾನುವಾರ) ಸಂಜೆ ಮುಷ್ಕರ ಹಿಂಪಡೆಯುತ್ತೇವೆ ಎಂದು ಘೋಷಿಸಿದ್ದ ಸಾರಿಗೆ ನಿಗಮಗಳ ನೌಕರರ ಸಂಘಟನೆ ನಾಯಕರು, ಪ್ರತಿಭಟನಾ ಸ್ಥಳ ಫ್ರೀಡಂ ಪಾರ್ಕ್ನಲ್ಲಿ ವರಸೆ ಬದಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮತ್ತೆ ಮುಷ್ಕರ ಮುಂದುವರಿಸಲು ಸಾರಿಗೆ ನೌಕರರು ತೀರ್ಮಾನಿಸಿದ್ದಾರೆ. ಸೋಮವಾರ ಸರ್ಕಾರಿ ಬಸ್ಗಳಷ್ಟೇ ಅಲ್ಲ, ಖಾಸಗಿ ಬಸ್ಗಳೂ ಇರುವುದಿಲ್ಲ.
ಹೌದು.. ಖಾಸಗಿ ಬಸ್ ಮಾಲೀಕರ ಸಂಘವು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇದರಿಂದ ಸೋಮವಾರ (ಡಿ.14) ಸರ್ಕಾರಿ ಹಾಗೂ ಖಾಸಗಿ ಬಸ್ಗಳ ಸಂಚಾರವಿಲ್ಲ ಇಡೀ ರಾಜ್ಯವೇ ಸ್ತಬ್ಧವಾಗಲಿದೆ.
ಸರ್ಕಾರಕ್ಕೆ ಮತ್ತೆ ಶಾಕ್ ಕೊಟ್ಟ ಸಾರಿಗೆ ನೌಕರರು: ಬಸ್ ಬಂದ್...!
ಈ ಬಗ್ಗೆ ಪ್ರತಿಕ್ರಿಯಿಸಿರುವ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ, ಹೋರಾಟಗಳು ಬ್ರೋಕರ್ಗಳ ಕೈಯಲ್ಲಿ ಇರಬಾರದು. ನಾನು ಬಿಜೆಪಿಯವನಾಗಿ ಈ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಇದು ಸಾರಿಗೆ ಸಚಿವ ಸವದಿಯವರ ವೈಫಲ್ಯ. ನಾವು ಕೊಟ್ಟಿದ್ದ ಹಲವಾರು ಮನವಿಗಳು ಕಸದ ಬುಟ್ಟಿಯಲ್ಲಿವೆ. ಪೊಳ್ಳು ಭರವಸೆಗಳಿಗೆ ಯಾರೂ ಕೂಡ ಬಗ್ಗಬೇಡಿ ಎಂದು ನೌಕರರ ಬಳಿ ಕೋರಿದ್ದಾರೆ.
ಒಟ್ಟಿನಲ್ಲಿ ಸರ್ಕಾರಿ ಬಸ್ಗಳಿಲ್ಲದಿದ್ದರೆ ಖಾಸಗಿ ಬಸ್ನಲ್ಲಿ ಓಡಾಡಬಹುದು ಎಂದು ಅನೇಕರು ಅಂದುಕೊಂಡಿದ್ದರು. ಆದರೆ, ಅವರಿಗೂ ಈಗ ನಟರಾಜ್ ಶಾಕ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ