ಖಾಸಗಿ ಜಮೀನಲ್ಲಿ ನೆಲೆಸಿರುವವರಿಗೆ ಹಕ್ಕುಪತ್ರ

Published : Nov 09, 2022, 07:10 AM IST
ಖಾಸಗಿ ಜಮೀನಲ್ಲಿ ನೆಲೆಸಿರುವವರಿಗೆ ಹಕ್ಕುಪತ್ರ

ಸಾರಾಂಶ

ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು (ನ.09): ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಹಲವು ವರ್ಷಗಳಿಂದ ಲಂಬಾಣಿ ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ನಾಯಕರ ಹಟ್ಟಿ, ಕುರುಬರಹಟ್ಟಿ, ಹಾಡಿ, ಮಜರೆ, ದೊಡ್ಡಿ, ಪಾಳ್ಯ, ಕ್ಯಾಂಪ್‌, ಕಾಲೋನಿ ಇತ್ಯಾದಿ ಹೆಸರುಗಳಿಂದ ಗುರುತಿಸಲ್ಪಟ್ಟ ಜನವಸತಿಗಳು ದಾಖಲೆರಹಿತವಾಗಿಯೇ ಸಮಾಜದ ಮುಖ್ಯ ವಾಹಿನಿಗೆ ಬಾರದೆ ಉಳಿದುಕೊಂಡಿವೆ. ಇಂತಹ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಅಥವಾ ಅಸ್ತಿತ್ವದಲ್ಲಿರುವ ಕಂದಾಯ ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿನ ನಿವಾಸಿಗಳಿಗೆ ವಾಸ್ತವ್ಯದ ಹಕ್ಕು ದಾಖಲೆಗಳನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ತೀರ್ಮಾನಿಸಿದೆ.

ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಸಂಬಂಧ ಇರುವ ಮಾನದಂಡದನ್ವಯ ಖಾಸಗಿ ಜಮೀನಿನಲ್ಲಿ ಜನವಸತಿಗಳು ಇದ್ದಲ್ಲಿ ಅಂತಹ ಸರ್ವೆ ನಂಬರ್‌ ಮತ್ತು ವಿಸ್ತೀರ್ಣವನ್ನು ಗುರುತಿಸಬೇಕು. ಖಾಸಗಿ ಜಮೀನುಗಳಲ್ಲಿ ನೆಲೆಗೊಂಡಿರುವ ಜನವಸತಿಗಳನ್ನು ಕಂದಾಯ ಗ್ರಾಮ/ಗ್ರಾಮದ ಭಾಗ ಬಡಾವಣೆ/ಉಪ ಗ್ರಾಮ ಆಗಿ ಪರಿವರ್ತಿಸಲು ಪ್ರಸ್ತಾವನೆ ಸಲ್ಲಿಸುವ ಮುನ್ನ ಜಿಲ್ಲಾಧಿಕಾರಿಗಳು ಕರ್ನಾಟಕ ಭೂಸುಧಾರಣಾ ಕಾಯ್ದೆಯಂತೆ ಅಧಿಸೂಚನೆಯನ್ನು ಹೊರಡಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಬಿಡದಿಯ ಮಿಟ್ಸು​ಬಿಷಿ ಘಟಕ ಸ್ಥಗಿತ: ಕಾರ್ಮಿಕರು ಬೀದಿಗೆ

ಅಧಿಸೂಚನೆಗೆ ಸಾರ್ವಜನಿಕರ ಸಲಹೆ/ಅಕ್ಷೇಪಣೆಗಳನ್ನು ಆಹ್ವಾನಿಸಬೇಕು. ದಾಖಲೆರಹಿತ ಜನವಸತಿಯು ನೆಲೆಸಿರುವ ಖಾಸಗಿ ಜಮೀನಿನ ವಿಸ್ತೀರ್ಣಕ್ಕೆ ಮಾತ್ರ 2-ಇ ಅಧಿಸೂಚನೆಯಲ್ಲಿ ಹೊರಡಿಸಬೇಕು. ಖಾಸಗಿ ಹೆಸರಿನ ಜಾಗದಲ್ಲಿ ಭೂ ಮಾಲೀಕರೇ ಸ್ವತಃ ಮನೆಗಳನ್ನು ನಿರ್ಮಿಸಿಕೊಂಡಿದ್ದರೆ ಅದರ ವಿಸ್ತೀರ್ಣವನ್ನು 2-ಇ ಅಧಿಸೂಚನೆಯಲ್ಲಿ ತರಬಾರದು. ಆದರೆ, ಗ್ರಾಮಠಾಣಾ ವಿಸ್ತೀರ್ಣಕ್ಕೆ ಒಳಪಡಿಸಬೇಕು. ತಹಶೀಲ್ದಾರ್‌ ಅವರು ಅರ್ಜಿಯಲ್ಲಿ ಉಲ್ಲೇಖಿಸಿರುವ ವಿವರಗಳನ್ನು ಸ್ಥಳ ಪರಿಶೀಲನೆ ನಡೆಸಿ, ಸರ್ವೇ ನಂಬರ್‌, ವಿಸ್ತೀರ್ಣ ಮತ್ತು ಗಡಿಗಳನ್ನು ನಿರ್ದಿಷ್ಟಪಡಿಸಿ ಪಟ್ಟಿಮಾಡಬೇಕು ಎಂದು ತಿಳಿಸಲಾಗಿದೆ.

ಕುರಿಗಾರರಿಗೆ ತಲಾ 20 ಕುರಿ, 1 ಮೇಕೆ: ಸಿಎಂ ಬೊಮ್ಮಾಯಿ

ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ ಬಳಿಕ ತಹಶೀಲ್ದಾರ್‌ ಮತ್ತು ಸಹಾಯಕ ಆಯುಕ್ತರು ಅರ್ಜಿ ಆಹ್ವಾನ, ಅರ್ಜಿ ಪರಿಶೀಲನೆ, ನೋಟಿಸ್‌ ಜಾರಿ ಮಾಡುವುದು, ವಿಚಾರಣೆ ಮಾಡುವುದು ಮತ್ತು ನೋಂದಣಿ ಪತ್ರ ವಿತರಣೆಗೆ ಅಗತ್ಯ ಇರುವ ಕ್ರಮಗಳನ್ನು ಕೈಗೊಳ್ಳಬೇಕು. ಹಕ್ಕು ಪತ್ರ ವಿತರಣೆಯ ಕುರಿತು ಮತ್ತು ಹೊಸ ಕಂದಾಯ ಗ್ರಾಮ ಘೋಷಣೆ ಪ್ರಕ್ರಿಯೆಯನ್ನು ಜತೆ ಜತೆಯಾಗಿ ನಿಯಮಾನುಸಾರ ಕ್ರಮ ವಹಿಸಬೇಕು. ಹೊಸ ಕಂದಾಯ ಗ್ರಾಮ ಘೋಷಣೆ ಮಾಡುವವರೆಗೆ ಕಾಯುವ ಅವಶ್ಯಕತೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ