Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!

Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!

Published : Jun 17, 2026, 05:20 PM IST

ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಮುಖ್ಯಸ್ಥರಿಗೆ ಪತ್ರ ಬರೆದು ಏಳು ಕಠಿಣ ಪ್ರಶ್ನೆಗಳನ್ನು ಕೇಳುವ ಮೂಲಕ ರಾಜ್ಯ ಸರ್ಕಾರ ಮತ್ತು ಸಂಘದ ನಡುವೆ ಹೊಸ ರಾಜಕೀಯ ಸಮರಕ್ಕೆ ನಾಂದಿ ಹಾಡಿದ್ದಾರೆ. 

ಬೆಂಗಳೂರು (ಜೂ.17): ನೂರು ವರ್ಷಗಳ ಇತಿಹಾಸವಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ರಾಜಕೀಯ ಯುದ್ಧ ಶುರುವಾಗಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಮುಖ್ಯಸ್ಥರಿಗೆ ಪತ್ರ ಬರೆದು ಏಳು ಕಠಿಣ ಪ್ರಶ್ನೆಗಳನ್ನಿಟ್ಟು ಲೆಕ್ಕ ಕೇಳಿರುವುದು ಸಂಚಲನ ಮೂಡಿಸಿದೆ.

RSS ಗೆ ಪ್ರಶ್ನೆ ಕೇಳಿದ್ದು ನಾನಲ್ಲ, ಸರ್ಕಾರ, ನನ್ನ ಪ್ರಶ್ನೆಗೆ ಉತ್ತರ ಕೊಡೋದಾದ್ರೆ ನಾನು ಆರೆಸ್ಸೆಸ್ ಕಚೇರಿಗೆ ಹೋಗಲು ಸಿದ್ಧ: ಪ್ರಿಯಾಂಕ್ ಖರ್ಗೆ

ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ಆರ್​ಎಸ್ಎಸ್ ವಿರುದ್ಧ ಮತ್ತೊಂದು ಸುತ್ತಿನ ಸಮರ ಸಾರಿದ್ದಾರೆ. ಸಂಘದ ಮುಂದೆ ಏಳು ಪ್ರಶ್ನೆಗಳನ್ನಿಟ್ಟು ಇದು ನಾನ್ ಕೇಳ್ತಿರೋ ಪ್ರಶ್ನೆಯಲ್ಲ. ಸರ್ಕಾರ ಕೇಳ್ತಿರೋ ಪ್ರಶ್ನೆಯಂತ ಪಟ್ಟು ಹಾಕಿದ್ದಾರೆ.

ಪ್ರಿಯಾಂಕ್ ಖರ್ಗೆ ಆರ್​ಎಸ್​ಎಸ್​ ಮುಖ್ಯಸ್ಥರಿಗೆ ಪತ್ರ ಬರೆಯುತ್ತಾ ಇದ್ದ ಹಾಗೆ ಬಿಜೆಪಿ ಖರ್ಗೆ ವಿರುದ್ಧ ಮುಗಿಬಿದ್ದಿದೆ. ಸಂಘದಲ್ಲಿ ಏನೂ ಮುಚ್ಚಿಡುವಂತಿಲ್ಲ, ಎಲ್ಲವೂ ಪಾರದರ್ಶಕವಾಗಿರಲಿ ಎಂದು ಖರ್ಗೆ ಬಿಗಿಪಟ್ಟು ಹಿಡಿದಿದ್ದಾರೆ. ತಾವು ಕೇಳಿರುವ ಪ್ರಶ್ನೆಗಳಿಗೆ ಆರ್​ಎಸ್ಎಸ್​ ಉತ್ತರಿಸಬೇಕು ಅಂತ ಗೃಹಸಚಿವ ಪ್ರಿಯಾಂಕ್ ಖರ್ಗೆ ಬಿಗಿಪಟ್ಟು ಹಾಕಿದ್ದಾರೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more