
ಚಾಮರಾಜನಗರ: ಕೇರಳ ವಿಧಾನಸಭಾ ಚುನಾವಣೆಗೆ ಇಂದು ಚುನಾವಣೆ ನಡೆಯುತ್ತಿದ್ದು, 140 ವಿಧಾನಸಭಾ ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ರಾಜ್ಯದಾದ್ಯಂತ 2.7 ಕೋಟಿಗೂ ಹೆಚ್ಚು ಮತದಾರರು ಮತ ಚಲಾಯಿಸಲು ಅರ್ಹರಿದ್ದು, ಎಲ್ಲಾ 140 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, 883 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಇಲ್ಲಿನ ಚುನಾವಣೆಗೆ ಕಾಂಗ್ರೆಸ್ ಪರ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕಿ ವಯನಾಡ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ನೀಡಿದ ಭರವಸೆಯ ಬಗ್ಗೆ ಈಗ ವ್ಯಾಪಕ ಚರ್ಚೆಯಾಗುತ್ತಿದ್ದು, ಸಾರ್ವಜನಿಕರು ಮಾತ್ರವಲ್ಲದೇ ಪರಿಸರ ಪ್ರೇಮಿಗಳು ರೈತರು, ಪ್ರಿಯಾಂಕಾ ವಾದ್ರಾ ನೀಡಿದ ಭರವಸೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಬಂಡೀಪುರ ಹುಲಿ ರಕ್ಷಿತಾರಣ್ಯದ ನಡುವೆ ಹಾದು ಹೋಗುವ ಅಂತಾರಾಜ್ಯ ಹೆದ್ದಾರಿಯಲ್ಲಿ ವನ್ಯಜೀವಿಗಳ ಸುರಕ್ಷತೆಯ ಕಾರಣಕ್ಕೆ ರಾತ್ರಿ ಸಂಚಾರವನ್ನು ನಿಷೇಧಿಸಲಾಗಿದೆ. ಆದರೆ ಕೇರಳದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ತೆರವು ಮಾಡುವುದಾಗಿ ಸಂಸದೆ ಪ್ರಿಯಾಂಕಾ ವಾದ್ರಾ ಭರವಸೆ ನೀಡಿದ್ದಾರೆ. ಕೇರಳದ ಸುಲ್ತಾನ್‌ಬತ್ತೇರಿಯಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಉಪಸ್ಥಿತಿಯಲ್ಲೇ ಪ್ರಿಯಾಂಕಾ ವಾದ್ರಾ ಈ ಭರವಸೆ ನೀಡಿದ್ದು, ಈ ವಿಚಾರ ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಬಂಡೀಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ಇರುವ ನಿರ್ಬಂಧವನ್ನು ತೆರವು ಮಾಡಲು ಪ್ರಯತ್ನಿಸುವುದಾಗಿ ಸಂಸದೆ ಪ್ರಿಯಾಂಕಾ ವಾದ್ರಾ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: 6ನೇ ಕ್ಲಾಸ್‌ನ ಪುಟಾಣಿಗೆ ಸಾಯುವಂತದ್ದೇನಾಗಿತ್ತು? ಕೆಲಸ ಮುಗಿಸಿ ಮನೆಗೆ ಬಂದ ಪೋಷಕರಿಗೆ ಆಘಾತ
ಇದೇ ವೇಳೆ ನಂಜನಗೂಡು ನೀಲಂಬೂರು 1 ರೈಲ್ವೆ ಯೋಜನೆ ಬಗ್ಗೆಯೂ ಸಂಸದೆ ಪ್ರಿಯಾಂಕಾ ವಾದ್ರಾ ಭರವಸೆ ನೀಡಿದ್ದಾರೆ. ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಹಾಗೂ ನಂಜನಗೂಡು ನೀಲಂಬೂರು ರೈಲ್ವೆ ಯೋಜನೆ ಕುರಿತು ಪ್ರಿಯಾಂಕಾ ವಾದ್ರಾ ನೀಡಿದ ಭರವಸೆಗೆ ಪರಿಸರವಾದಿಗಳು ಹಾಗೂ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ರಾಜಕೀಯ ತೆವಲಿಗೆ ಪರಿಸರ ನಾಶವಾಗಬೇಕೆ? ವನ್ಯಪ್ರಾಣಿಗಳು ಬಲಿಯಾಗಬೇಕೆ? ಎಂದು ಪರಿಸರವಾದಿಗಳು ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: ಮದುವೆ ಪತ್ರಿಕೆ ಹಂಚಲು ಹೋದಾಗ ಟ್ರ್ಯಾಕ್ಟರ್ ಡಿಕ್ಕಿಯಾಗಿ ವರ ಸಾವು: ಮದುವೆ ನಡೆಯಬೇಕಾದ ಮನೆಯಲ್ಲಿ ಸೂತಕದ ಛಾಯೆ
ಇಲ್ಲಿ ಹಗಲಿನ ವೇಳೆಯಲ್ಲೇ ಸಾಕಷ್ಟು ಅಕ್ರಮ ಚಟುವಟಿಕೆ ನಡೆಯುತ್ತಿದೆ. ಇನ್ನು ರಾತ್ರಿ ಸಂಚಾರಕ್ಕೆ ಅವಕಾಶ ನೀಡಿದರೆ ಅಕ್ರಮ ಚಟುವಟಿಕೆಗಳಿಗೆ ಇದು ರಹದಾರಿಯಾಗಲಿದೆ. ಮಾನವ ವನ್ಯಜೀವಿ ಸಂಘರ್ಷ ಮತ್ತಷ್ಟು ಹೆಚ್ಚಳ ಆಗುತ್ತೆ, ವನ್ಯಪ್ರಾಣಿಗಳು ಬಲಿಯಾಗುತ್ತವೆ. ನಂಜನಗೂಡು ನೀಲಂಬೂರು ರೈಲು ಯೋಜನೆಗೆ ಕೋಟ್ಯಂತರ ಮರಗಳ ಹನನವಾಗುತ್ತೆ. ಇದರಿಂದ ಪಶ್ಚಿಮ ಘಟ್ಟಗಳ ಜೀವವೈವಿಧ್ಯತೆಗೆ ಧಕ್ಕೆ ಯಾಗುತ್ತೆ. ಕೇವಲ ರಾಜಕೀಯದ ಕಾರಣಕ್ಕೆ ಇಂತಹ ಭರವಸೆಗಳು ನೀಡುವ ಅಗತ್ಯವಿದೆಯೇ ಎಂದು ಪರಿಸರವಾದಿಗಳು ಹಾಗೂ ರೈತರು ಆಕ್ರೋಶ ಹೊರ ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ