ಕಾಂಗ್ರೆಸ್ ಸರ್ಕಾರದಿಂದ ಯಾವುದೇ ರೈತಪರ ಯೋಜನೆ ಇಲ್ಲ: ಸ್ವಪಕ್ಷದ ವಿರುದ್ಧ ಶಾಸಕ ರಾಜು ಕಾಗೆ ವಾಗ್ದಾಳಿ!

By Ravi Janekal  |  First Published Oct 11, 2024, 4:00 PM IST

ಸರ್ಕಾರ ಯಾವುದೇ ರೈತಪರ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ತಮ್ಮದೇ ಪಕ್ಷದ ವಿರುದ್ಧ ಹರಿಹಾಯ್ದರು.


ಚಿಕ್ಕೋಡಿ (ಅ.11): ಸರ್ಕಾರ ಯಾವುದೇ ರೈತಪರ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ತಮ್ಮದೇ ಪಕ್ಷದ ವಿರುದ್ಧ ಹರಿಹಾಯ್ದರು.

ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ತಾವಂಶಿ ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೆ ನೀವೇನು ತಿಂತೀರಿ? ನಿಮ್ಮ ಬಳಿ ರೊಕ್ಕ, ಬಂಗಾರ ಬೆಳ್ಳಿ ಸಾಕಷ್ಟು ಇರಬಹುದು. ಆದ್ರೆ ಅದನ್ನು ತಿಂದು ಬದುಕೋಗಾಗುತ್ತಾ? ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ. ರೈತರು ಬದುಕಿದ್ರೆ ಮಾತ್ರ ಈ ದೇಶ ಪ್ರಗತಿ ಹೊಂದಲು ಸಾಧ್ಯವಿದೆ ಎಂದರು.

Tap to resize

Latest Videos

undefined

ವಕ್ಫ್‌, ಮುಜರಾಯಿ ಆಸ್ತಿ ದೇವರದ್ದು, ಯಾರಪ್ಪನದ್ದಲ್ಲ: ಸಚಿವ ಜಮೀರ್‌ ಅಹಮದ್

ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆ ಪರಿಸ್ಥಿತಿ ಮುಂದುವರಿದ್ರೆ ವಿಧಾನಸೌಧದಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದೆ. ಆದರೆ ನೀನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತಿಯಾ ನಿನ್ನ ಕೆಲಸ ಮಾಡಿಕೊಡ್ತಿವಿ ಅಂತಾ ಹೇಳಿದ ಮಂತ್ರಿಗಳಿದ್ದಾರೆ. ಅನುದಾನ ನೀಡದ ಸ್ವಪಕ್ಷೀಯ ಸಚಿವರ ವಿರುದ್ಧ ಕಿಡಿಕಾರಿದರು.

ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಂತಿಲ್ಲ, ಚೈನಿ (ಮೋಜು, ಮಸ್ತಿ) ಮಾಡ್ತಿಲ್ಲ. ರೈತರ ಕಷ್ಟ ಸುಖಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡ್ತಿದ್ದೇನೆ. ಆದ್ರೆ ಸರ್ಕಾರದವರು ನಮಗೆ ಸ್ಪಂದನೆ ಮಾಡ್ತಿಲ್ಲ. ಅಭಿವೃದ್ಧಿಗೆ ಅನುದಾನ ಕೊಡದಿದ್ದ ಮೇಲೆ, ನಮ್ಮ ಮಾತಿಗೆ ಸ್ಪಂದಿಸದಿದ್ದರೆ ನಾವು ಯಾಕಾಗಿ ಎಂಎಲ್‌ಎ ಗಳಾಗಿರಬೇಕು? ಅದರಿಂದ ಏನು ಆಗೋದಿದೆ. ಬೇಕಾದ್ರೆ ನಾಳೆನೇ ಹೋಗಿ ರಾಜೀನಾಮೆ ಕೊಡ್ತೇನೆ ಎಂದು ಸಿದ್ದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು

'ವಕ್ಪ್ ಆಸ್ತಿ ಜಮೀರ್ ಅವರಪ್ಪಂದಲ್ಲ..'; ಸಿಟಿ ರವಿ ಹೇಳಿಕೆಗೆ ಜಮೀರ್ ಅಹ್ಮದ್ ಕೌಂಟರ್!

ಆಡಳಿತ ಪಕ್ಷದ ಒಬ್ಬ ಶಾಸಕನಾಗಿ ಅಸಹಾಯಕತೆ ಬಗ್ಗೆ ಹೇಳ್ತಾ ಇದ್ದೀನಿ ಅಂದ್ರೆ ಎಷ್ಟರಮಟ್ಟಿಗೆ ಈ ವ್ಯವಸ್ಥೆಯಲ್ಲಿ ಬದುಕಿದ್ದೇವೆ ಎಂದು ಅರ್ಥ ಮಾಡ್ಕೊಳ್ಳಿ. ಕಾಂಗ್ರೆಸ್ ಸರ್ಕಾರದ ನಡೆಯಿಂದಾಗಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ. ಹೀಗಾಗಿ ಮುಂದಿನ ಸಲ ನನಗೆ ಎಂಎಲ್ಎ ಆಗುವುದು ಬೇಕಾಗಿಲ್ಲ. ಕ್ಷೇತ್ರದ ಜನತೆ ಮುಂದೆ ತಮ್ಮ ಅಸಹಾಯಕತೆ ತೊಡಿಕೊಂಡಕೊಂಡರು.

click me!