ಡಿ.5ರಂದು ಬಂದ್‌ ಆಗಲಿದೆ ಕರ್ನಾಟಕ : ಸಾರ್ವಜನಿಕರೇ ಎಚ್ಚರ

Kannadaprabha News   | Asianet News
Published : Dec 02, 2020, 07:07 AM IST
ಡಿ.5ರಂದು  ಬಂದ್‌ ಆಗಲಿದೆ ಕರ್ನಾಟಕ : ಸಾರ್ವಜನಿಕರೇ ಎಚ್ಚರ

ಸಾರಾಂಶ

ರಾಜ್ಯದಲ್ಲಿ ಕನ್ನಡ ರ ಸಂಘಟನೆಗಳು ಡಿಸೆಂಬರ್ 5 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಸಾರ್ವಜನಿಕರು ಅಂದು ರಸ್ತೆ ಇಳಿಯುವ ಮುನ್ನ ಎಚ್ಚರ ವಹಿಸಿ 

ಬೆಂಗಳೂರು (ಡಿ.02):  ಮರಾಠಾ ಸಮುದಾಯ ನಿಗಮ ರಚನೆ ಮತ್ತು ಕನ್ನಡ ವಿರೋಧಿ ಹೇಳಿಕೆಗಳನ್ನು ನೀಡುವ ಶಾಸಕರ ನಡವಳಿಕೆಗಳನ್ನು ಖಂಡಿಸಿ ಡಿ.5ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ, ತಾಲ್ಲೂಕು ಕೇಂದ್ರಗಳಲ್ಲಿ ಮಿನಿ ವಿಧಾನಸೌಧ, ತಹಸೀಲ್ದಾರ್‌ ಕಚೇರಿಗಳಿಗೆ ಮುತ್ತಿಗೆ ಹಾಕುವ ಮೂಲಕ ‘ಕರ್ನಾಟಕ ಬಂದ್‌’ ಯಶಸ್ವಿಗೊಳಿಸಲು ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

ನಿಗಮ ರಚನೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕನ್ನಡ ಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಬಹುದಿತ್ತು. ಆಳುವ ಪಕ್ಷದ ಶಾಸಕರುಗಳೇ ನಾಲಿಗೆ ಹರಿಬಿಟ್ಟು ಕನ್ನಡಪರ ಸಂಘಟನೆಗಳನ್ನು ದೂಷಿಸುತ್ತಿದ್ದಾರೆ. ಆದ್ದರಿಂದ ರಾಜಧಾನಿ ಬೆಂಗಳೂರು ನಗರದಲ್ಲಿ ಸಾವಿರಾರು ಕರವೇ ಕಾರ್ಯಕರ್ತರು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ಹೇಳಿದ್ದಾರೆ.

ಶೆಟ್ಟಿನೈತಿಕ ಬೆಂಬಲ:  ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಡಿ.5ಕ್ಕೆ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್‌ ಶೆಟ್ಟಿತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಕರೆ ನೀಡಿರುವ ಬಂದ್‌ಗೆ ನಮ್ಮ ಬೆಂಬಲವಿಲ್ಲ. ಆದರೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ನಾವು ಹೋರಾಟ ಮಾಡುತ್ತೇವೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ