
ಬೆಂಗಳೂರು (ಮಾ.5): ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಮೂವರು ಬೆಂಬಲಿಗರ ಬಂಧನ ವಿಚಾರದಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಇದರಲ್ಲಿ ನಾವು ಮಧ್ಯ ಪ್ರವೇಶಿಸಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಎಫ್ ಎಸ್ ಎಲ್ ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ದೃಢಪಟ್ಟ ನಂತರ ಪೊಲೀಸರು ಮೂವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಧ್ವನಿ ಸ್ಯಾಂಪಲ್ ಮತ್ತು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಇದೊಂದು ಗಂಭೀರ ವಿವಾದವಾಗಿದ್ದು, ರಾಜ್ಯದ ವರ್ಚಸ್ಸನ್ನು ಹಾಳು ಮಾಡಲು ನಾವು ಬಯಸುವುದಿಲ್ಲ. ಪೊಲೀಸರು ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಉಗ್ರಾಣ ನಿಗಮ ಅಧ್ಯಕ್ಷ ನೇಮಕ ಆದೇಶ; ಸಿಎಂ ಸಿದ್ದರಾಮಯ್ಯರ ಹೆಸರನ್ನೇ ನಕಲಿ ಮಾಡಿದ ಕಿರಾತಕರು!
ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ತುಂಬಾ ಗಂಭೀರವಾಗಿ ಈ ವಿಷಯನ್ನು ಪರಿಗಣಿಸಿದ್ದೇನೆ. ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಎಲ್ಲಿ ನೀರು ದೊರೆಯುತ್ತದೆ ಎಂಬುದನ್ನು ಗುರುತಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ಸುಮಾರು 3,000 ಕ್ಕೂ ಹೆಚ್ಚು ಬೋರ್ ವೆಲ್ ಗಳು ಬತ್ತಿಹೋಗಿವೆ. ಅತಿ ಕಡಿಮೆ ದರದಲ್ಲಿ ಎಲ್ಲಾ ಜನರಿಗೆ ನೀರು ಪೂರೈಸಲು ನೋಡುತ್ತಿದ್ದೇವೆ. ನನ್ನ ಮನೆಯ ಬಳಿ ಬೋರ್ ವೆಲ್ ಸೇರಿದಂತೆ ಎಲ್ಲಾ ಬೋರ್ ವೆಲ್ ಗಳು ಬತ್ತಿಹೋಗಿರುವುದರಿಂದ ನಾವು ಆತಂಕಕ್ಕೀಡಾಗಿದ್ದೇವೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ