ಈದ್ ಮಿಲಾದ್ ಮೆರವಣಿಗೆ ವೇಳೆ 'ಪ್ಯಾಲೆಸ್ತೀನ್ ಪ್ರೇಮ': ಮುಸ್ಲಿಂ ಯುವಕರಿಂದ ಧ್ವಜ ಪ್ರದರ್ಶನ

Published : Sep 17, 2024, 07:31 AM IST
ಈದ್ ಮಿಲಾದ್ ಮೆರವಣಿಗೆ ವೇಳೆ 'ಪ್ಯಾಲೆಸ್ತೀನ್ ಪ್ರೇಮ':  ಮುಸ್ಲಿಂ ಯುವಕರಿಂದ ಧ್ವಜ ಪ್ರದರ್ಶನ

ಸಾರಾಂಶ

ಚಿತ್ರದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಆಯೋಜಿಸಿದ್ದ ಮೆರವಣಿಗೆಯಲ್ಲಿ ಗಾಂಧಿ ವೃತ್ತದ ಬಳಿ ಕೆಲ ಮುಸ್ಲಿಂ ಯುವಕರು ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿ ಬಾವುಟ ಪ್ರದರ್ಶಿಸಿದ್ದಾರೆ. ಈ ಕುರಿತ ವಿಡಿಯೋಗಳು ಜಾಲತಾಣದಲ್ಲಿ ಹರಿದಾಡಿದ ತಕ್ಷಣ ಜಾಗೃತರಾದ ನಗರ ಠಾಣೆ ಪೊಲೀಸರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಂದ 2 ಪ್ಯಾಲೆಸ್ತೀನ್ ಧ್ವಜಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.

ಚಿತ್ರದುರ್ಗ/ಕೋಲಾರ(ಸೆ.17):  ಕೊಪ್ಪಳದ ಗಂಗಾವತಿ ಮತ್ತು ಚಿಕ್ಕಮಗಳೂರಿನ ಬಳಿಕ ಇದೀಗ ಚಿತ್ರದುರ್ಗ ಹಾಗೂ ಕೋಲಾರದಲ್ಲಿ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲೇ ಪ್ಯಾಲೇಸ್ತೀನ್ ಪರ ಘೋಷಣೆ, ಬ್ಯಾನರ್‌ ಹಾಗೂ ಧ್ವಜ ಪ್ರದರ್ಶನದಂಥ ಪ್ರಕರಣಗಳು ಬೆಳಕಿಗೆ ಬಂದಿವೆ. 

ಚಿತ್ರದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಆಯೋಜಿಸಿದ್ದ ಮೆರವಣಿಗೆಯಲ್ಲಿ ಗಾಂಧಿ ವೃತ್ತದ ಬಳಿ ಕೆಲ ಮುಸ್ಲಿಂ ಯುವಕರು ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿ ಬಾವುಟ ಪ್ರದರ್ಶಿಸಿದ್ದಾರೆ. ಈ ಕುರಿತ ವಿಡಿಯೋಗಳು ಜಾಲತಾಣದಲ್ಲಿ ಹರಿದಾಡಿದ ತಕ್ಷಣ ಜಾಗೃತರಾದ ನಗರ ಠಾಣೆ ಪೊಲೀಸರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಂದ 2 ಪ್ಯಾಲೆಸ್ತೀನ್ ಧ್ವಜಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.

ಕೋಲಾರ ಭಾಗಕ್ಕೆ ಸಿಎಂ ಸ್ಥಾನ ನೀಡಲಿ: ಶಾಸಕ ಕೊತ್ತೂರು ಮಂಜುನಾಥ್

ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ರಂಜಿತ್ ಕುಮಾರ್‌ ಬಂಡಾರು ತಿಳಿಸಿದ್ದಾರೆ. ಮತ್ತೊಂದು ಘಟನೆಯಲ್ಲಿ ಕೋಲಾರ ನಗರದ ಅಂಜುಮನ್ ಸಂಸ್ಥೆ ಎದುರು ಹಾಕಲಾಗಿದ್ದ 'ಫ್ರೀ ಪ್ಯಾಲೆಸ್ತೀನ್ ' ಎಂಬ ಒಕ್ಕಣೆಯಿರುವ ಬಾವುಟವನ್ನು ಗಮನಿಸಿ ನಗರ ಠಾಣೆ ಸಿಪಿಐ ಸದಾನಂದ ತೆರವುಗೊಳಿಸಿದರು. 

ಇದೇ ರೀತಿ ಕೊಪ್ಪಳದ ಗಂಗಾವತಿಯಲ್ಲೂ ಭಾನುವಾರ ಹಾಕಿದ್ದ ಬ್ಯಾನರ್ ಅನ್ನು ಹಿಂದೂ ಸಂಘನೆಗಳ ವಿರೋಧದ ಹಿನ್ನೆಲೆಯಲ್ಲಿ ತೆರವುಗೊಳಿಸಲಾಗಿದ್ದರೆ, ಚಿಕ್ಕಮಗಳೂರಲ್ಲಿ ಕೆಲ ಯುವಕರು ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸೇವೆಯಲ್ಲಿಯೇ ಸಾರ್ಥಕತೆ ಪಡೆಯುವ ಗೃಹ ರಕ್ಷಕರು
ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ರಾಜ್ಯ ಮೊದಲ ಸ್ಥಾನ: ಗೃಹಸಚಿವ ಪರಮೇಶ್ವರ್