ಬೆಂಗಳೂರಿನ ಹುಳಿಮಾವಿನಲ್ಲಿರುವ ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರವು ಅಕ್ಟೋಬರ್ 5, 2024 ರಂದು 'ಅಣಬೆ ಬೇಸಾಯ'ದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
ಬೆಂಗಳೂರು (ಸೆ.30): ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ ದಿನಾಂಕ ಅಕ್ಟೋಬರ್ 05, 2024 ರಂದು 'ಅಣಬೆ ಬೇಸಾಯ' (Production Technology of Mushroom) ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ರೂ. 250ಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ ತರಬೇತಿಯ ದಿನ ಪಾವತಿಸಿ ನೊಂದಣಿಯನ್ನು ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9449833153, 9066764248, 7892618755 ಅಥವಾ ಇ-ಮೇಲ್ sadh.co23@gmail.com, jaivikakendra.hulimavu@gmail.com ಮೂಲಕ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
undefined
ಬೆಂಗಳೂರಿನಲ್ಲಿ ಬುಧವಾರ ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ!
ಬೆಂಗಳೂರಿನ ನಾಗಮಂಗಲ, ದೊಡ್ಡ ಬಳ್ಳಾಪುರ, ಹೊಸಕೋಟೆ ಸೇರಿದಂತೆ ವಿವಿಧೆಡೆ ಅಣಬೆ ಬೇಸಾಯ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದೀಗ ಸುಲಭವಾಗಿ ಒಂದು ಕೋಣೆಯಲ್ಲಿ ಅಣಬೆ ಬೆಳಯಲು ಬೇಕಾದ ವಾತಾವರಣ ನಿರ್ಮಿಸಿ ಸುಲಭವಾಗಿ ಅಣಬೆಗಳನ್ನು ಬೆಳೆದು ಮಾರಾಟ ಮಾಡಬಹುದು, ಮಾರುಕಟ್ಟೆಯಲ್ಲಿ ಒಂದು 500 ಗ್ರಾಂ ಅಣಬೆಗೆ 40 ರೂ.ಗಳಿಂದ 80 ರೂವರೆಗೆ ಮಾರಾಟ ಮಾಡಲಾಗುತ್ತದೆ. ಮಾರುಕಟ್ಟೆಯಲ್ಲಿ ಅಣಬೆಗೆ ಉತ್ತಮ ಬೇಡಿಕೆಯಿದೆ. ಸಂಪೂರ್ಣವಾಗಿ ಬೆಳೆದ ಅಣಬೆಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಟ್ಟರೆ ಸುಮಾರು 7ರಿಂದ 10 ದಿನಗಳವರೆಗೆ ಸಂಗ್ರಹಿಸಿಟ್ಟು ಮಾರಾಟ ಮಾಡಬಹುದು. ಇನ್ನು ಮನೆಗೆ ಸೀಮಿತವಾಗಿ ಸಾವಯವ ಮಾದರಿಯಲ್ಲಿ ಅಣಬೆ ಬೆಳೆಯುತ್ತೇವೆ ಎನ್ನುವವರಿಗೂ ಈ ತರಬೇತಿ ಉತ್ತಮ ಸಹಕಾರಿ ಆಗಲಿದೆ.