107 ವರ್ಷಕ್ಕೆ ಕಾಲಿಟ್ಟ ವಿಧ್ವಾಂಸರಾದ ಪ್ರೊ.ಜಿ ವೆಂಕಟಸುಬ್ಬಯ್ಯ

Kannadaprabha News   | Asianet News
Published : Aug 24, 2020, 02:51 PM IST
107 ವರ್ಷಕ್ಕೆ ಕಾಲಿಟ್ಟ ವಿಧ್ವಾಂಸರಾದ ಪ್ರೊ.ಜಿ ವೆಂಕಟಸುಬ್ಬಯ್ಯ

ಸಾರಾಂಶ

ನಿಘಂಟು ತಜ್ಞ ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರು 106 ವಸಂತಗಳನ್ನು ಪೂರೈಸಿ, ಆಗಸ್ಟ್ 23 ರಂದು 107ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಾಡಿನಾದ್ಯಂತ ವಿಧ್ವಾಂಸರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಬೆಂಗಳೂರು (ಆ.24): ಕನ್ನಡದ ವಿದ್ವಾಂಸ, ನಿಘಂಟು ತಜ್ಞ ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರು 106 ವಸಂತಗಳನ್ನು ಪೂರೈಸಿ, ಆಗಸ್ಟ್ 23 ರಂದು 107ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಈ ಸಂದರ್ಭದಲ್ಲಿ ನಾಡಿನ ಅನೇಕರು ತಮ್ಮ ಸಂತಸವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಕನ್ನಡದ ಏಳಿಗೆಗಾಗಿ ದುಡಿದವರು, ದುಡಿಯುತ್ತಿರುವವರು ಪ್ರೊ.ಜಿ. ವೆಂಕಟಸುಬ್ಬಯ್ಯ. ಕನ್ನಡದ ನಿಘಂಟು ಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. 

ಬಾದಾಮಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಫೋಟೋಸ್

ಇವರ ಭಾಷಾ ಸಾಹಿತ್ಯ ಸಾಧನೆಗೆ ಹಂಪಿ ವಿಶ್ವವಿದ್ಯಾಲಯ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನಿತ್ತು ಗೌರವಿಸಿದೆ. ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಭಾಷಾ ಸಮ್ಮಾನ್‌, ಗೋಕಾಕ್‌ ಪ್ರಶಸ್ತಿ, ಅನಕೃ ನಿರ್ಮಾಣ್‌ ಸ್ವರ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಪ್ರೊ. ವೆಂಕಟಸುಬ್ಬಯ್ಯ ಅವರ ಮುಡಿಗೇರಿವೆ. ಬೆಂಗಳೂರಿನಲ್ಲಿ ನಡೆದ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ