'ತಂತ್ರಜ್ಞಾನದ ಅವಕಾಶಗಳನ್ನು ಸದುಪಯೋಗಪಡಿಸಿ ಯಶಸ್ವಿ ಮಹಿಳಾ ಉದ್ಯಮಿಗಳಾಗುವ ಆಯ್ಕೆ'

Published : Mar 30, 2022, 05:21 PM ISTUpdated : Mar 30, 2022, 07:29 PM IST
'ತಂತ್ರಜ್ಞಾನದ ಅವಕಾಶಗಳನ್ನು ಸದುಪಯೋಗಪಡಿಸಿ ಯಶಸ್ವಿ ಮಹಿಳಾ ಉದ್ಯಮಿಗಳಾಗುವ ಆಯ್ಕೆ'

ಸಾರಾಂಶ

* ಕರ್ನಾಟಕ ಪತ್ರಕರ್ತೆಯರ ಸಂಘ, ಎಫ್ ಕೆಸಿಸಿಐ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ಕಾರ್ಯಕ್ರಮ * ಪತ್ರಕರ್ತೆಯರಿಗಾಗಿ ಆಯೋಜಿಸಿದ್ದ ಡಿಜಿಟಲ್ ಲಿಟರಸಿ ಕಾರ್ಯಾಗಾರ * ತಂತ್ರಜ್ಞಾನದ ಅವಕಾಶಗಳನ್ನು ಸೂಕ್ತವಾಗಿ ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ

ಬೆಂಗಳೂರು(ಮಾ.30): ತಂತ್ರಜ್ಞಾನದ ಅವಕಾಶಗಳನ್ನು ಸೂಕ್ತವಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಯಶಸ್ವಿ ಮಹಿಳಾ ಉದ್ಯಮಿಗಳಾಗಬಹುದು ಎಂದು ಹೈಟೆಕ್ ಮ್ಯಾಗ್ನಟಿಕ್ ಸಲ್ಯೂಶನ್ಸ್ ವ್ಯವಸ್ಥಾಪಕ ನಿರ್ದೇಶಕಿ ಉಮಾ ರೆಡ್ಡಿ ಅಭಿಪ್ರಾಯಪಟ್ಟರು. ಕರ್ನಾಟಕ ಪತ್ರಕರ್ತೆಯರ ಸಂಘ, ಎಫ್ ಕೆಸಿಸಿಐ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ಬೆಂಗಳೂರಿನಲ್ಲಿಂದು ಪತ್ರಕರ್ತೆಯರಿಗಾಗಿ ಆಯೋಜಿಸಿದ್ದ ಡಿಜಿಟಲ್ ಲಿಟರಸಿ ಕಾರ್ಯಾಗಾರದಲ್ಲಿ ತಂತ್ರಜ್ಞಾನ ಹಾಗೂ ಅವಕಾಶಗಳ ಕುರಿತು ಮಾತನಾಡಿದರು. 

ಪ್ರಸ್ತುತ ಡಿಜಿಟಲ್ ಲಿಟರಸಿ ಮುಖ್ಯವಾಗಿದೆ. ಅದರಲ್ಲೂ ಕೋವಿಡ್ ಸಮಯದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾಯಿತು. ಹೆಚ್ಚು ಜನರನ್ನು ತಲುಪಲು ಸಾಧ್ಯವಾಯಿತು. ಪ್ರತಿ ದಿನ ತಂತ್ರಜ್ಞಾನ ಅಪ್ ಗ್ರೇಡ್ ಆಗುತ್ತಿರುತ್ತದೆ. ಅದನ್ನು ಹೇಗೆ ಬಳಸಿಕೊಳ್ಳಬೇಕು, ಪ್ರಯೋಜನಗಳು ಮತ್ತು ನೆಟ್ ವರ್ಕಿಂಗ್ ಕುರಿತು ಅರಿವು ಇರಲೇಬೇಕು. ಅಗತ್ಯವಿರುವ ಮತ್ತು‌ ಸೂಕ್ತವಾದ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿ ಮಹಿಳಾ ಉದ್ಯಮಿಯಾಗಬಹುದು ಎಂದರು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ರಜಿನಿ ರಮೇಶ್ ಮಾತನಾಡಿ, ಪ್ರತಿಯೊಬ್ಬರು ತಮ್ಮನ್ನು ತಾವು ತೆರೆದುಕೊಳ್ಳಲು ಸಾಮಾಜಿಕ ಜಾಲತಾಣ ಉತ್ತಮ ವೇದಿಕೆ. ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಆದರೂ, ಅವುಗಳನ್ನು ವೈಯಕ್ತಿಕ ಸುರಕ್ಷತೆ ಕಾಪಾಡಿಕೊಳ್ಳುವಂತೆ ಎಚ್ಚರಿಕೆಯಿಂದ ಬಳಸಬೇಕು. ಈ ಅರಿವು ಅತ್ಯಗತ್ಯ ಎಂದು ತಿಳಿಸಿದರು. 
ಪತ್ರಕರ್ತೆಯರಿಗೆ ಅಗತ್ಯವಿರುವ ಸೋಶಿಯಲ್ ಮೀಡಿಯಾ, ಬಳಕೆ, ಉಪಯೋಗ ಕುರಿತು ಪ್ರಾತ್ಯಕ್ಷಿಕೆ ನೀಡುವ ಮೂಲಕ ವಿವರಿಸಿದರು. 

ಸಂಘದ ಅಧ್ಯಕ್ಷೆ ಶಾಂತಲಾ ಧರ್ಮರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಕಾರ್ಯಚಟುವಟಿಕೆ ಹಾಗೂ ಪತ್ರಕರ್ತೆಯರ ಮುಂದಿರುವ ಸವಾಲುಗಳ ಬಗ್ಗೆ ವಿವರಿಸಿದರು.
ಕಾರ್ಯಾಗಾರದಲ್ಲಿ ಸಂಘದ ಕಾರ್ಯದರ್ಶಿ ಮಾಲತಿ ಭಟ್, ಹಿರಿಯ ಪತ್ರಕರ್ತೆ ಕೆ.ಹೆಚ್. ಸಾವಿತ್ರಿ, ಆಕಾಶವಾಣಿ ನಿರ್ದೇಶಕಿ ನಿರ್ಮಲಾ ಎಲಿಗಾರ್, ಪಿಐಬಿ ಅಧಿಕಾರಿ ಜಯಂತಿ ಕೆ.ವೈ ಸೇರಿದಂತೆ ಹಿರಿಯ ಹಾಗೂ ಕಿರಿಯ ಪತ್ರಕರ್ತೆಯರು ಭಾಗವಹಿಸಿದ್ದರು. ಭಾಗ್ಯಲಕ್ಷ್ಮಿ ಪದಕಿ ಪ್ರಾರ್ಥನೆ, ಪದ್ಮಾ ಶಿವಮೊಗ್ಗ ಕಾರ್ಯಕ್ರಮ ನಿರೂಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ