ಧರ್ಮವನ್ನು ರಕ್ಷಿಸುವುದು ಪ್ರತಿಯೊಬ್ಬರ ಕೆಲಸ: ಜಯಪ್ರಕಾಶ್ ಹೆಗ್ಡೆ

By Kannadaprabha News  |  First Published Sep 7, 2023, 4:37 AM IST

ದಯೆಯೇ ಧರ್ಮದ ಮೂಲ. ಧರ್ಮವನ್ನು ರಕ್ಷಿಸುವ ಕೆಲಸ ಪ್ರತಿಯೊಬ್ಬರದ್ದಾಗಬೇಕು, ಕನಕದಾಸರು ಸಾರಿದಂತೆ ಕುಲಕುಲವೆಂದು ಹೊಡೆದಾಡದೇ, ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.


ಉಡುಪಿ (ಸೆ.7) : ದಯೆಯೇ ಧರ್ಮದ ಮೂಲ. ಧರ್ಮವನ್ನು ರಕ್ಷಿಸುವ ಕೆಲಸ ಪ್ರತಿಯೊಬ್ಬರದ್ದಾಗಬೇಕು, ಕನಕದಾಸರು ಸಾರಿದಂತೆ ಕುಲಕುಲವೆಂದು ಹೊಡೆದಾಡದೇ, ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಅವರು ಬುಧವಾರ ನಗರದ ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ, ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ಶ್ರೀ ಕೃಷ್ಣ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

Latest Videos

undefined

'ಅಖಂಡ ಭಾರತದ ಕನಸು ಶೀಘ್ರ ನನಸು' ಯುವ ಸಮೂಹಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್‌ ಭರವಸೆ

ಶಾಸಕ ಯಶ್ಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಗರಸಭೆ ಸದಸ್ಯೆ ರಜನಿ ಹೆಬ್ಬಾರ್, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘ ಅಧ್ಯಕ್ಷ ದಯಾನಂದ ಬಿ.ಆರ್., ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಉಪಸ್ಥಿತರಿದ್ದರು. ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪನ್ಯಾಸ ನೀಡಿದರು.

ಪಾಡಿಗಾರ್ ಲಕ್ಷ್ಮೀ ನಾರಾಯಣ ಉಪಾಧ್ಯ ಮತ್ತು ಬಳಗದ ವತಿಯಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಮುದ್ದುಕೃಷ್ಣ ವೇಷದ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಅಭಿನಂದನಾ ಪತ್ರವನ್ನು ವಿತರಿಸಲಾಯಿತು. ದರ್ಪಣ ಮಹಿಳಾ ಹುಲಿ ತಂಡದವರು ಹುಲಿ ಕುಣಿತ ಪ್ರದರ್ಶಿಸಿದರು.

Kundapra kannada habba: ಕುಂದಾಪುರ ಭಾಷೆ ಅಧ್ಯಯನ ಪೀಠಕ್ಕೆ ಅನುದಾನ ; ಜಯಪ್ರಕಾಶ್‌ ಹೆಗ್ಡೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಉಪನ್ಯಾಸಕ ರಾಮಾಂಜಿ ನಿರೂಪಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ವಂದಿಸಿದರು.

click me!