‘ಹಿಂದಿ ದಿವಸ್‌’ ಅಚರಣೆ ಖಂಡಿಸಿ ನಾಳೆ ಕರವೇಯಿಂದ ಪ್ರತಿಭಟನೆ!

By Kannadaprabha NewsFirst Published Sep 13, 2024, 8:41 AM IST
Highlights

ಕೇಂದ್ರ ಸರ್ಕಾರ ಸೆ.14ರಂದು ‘ಹಿಂದಿ ದಿವಸ್‌’ ಆಚರಣೆಯ ಹೆಸರಿನಲ್ಲಿ ಅನ್ಯಭಾಷಿಕರ ಮೇಲೆ ಹಿಂದಿ ಹೇರಿಕೆ ಮಾಡುವ ಹುನ್ನಾರ ನಡೆಸುತ್ತಿದೆ. ಇದನ್ನು ಖಂಡಿಸಿ ಅಂದು ಬೆಳಗ್ಗೆ 11ಕ್ಕೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಂಗಳೂರು (ಸೆ.13): ಕೇಂದ್ರ ಸರ್ಕಾರ ಸೆ.14ರಂದು ‘ಹಿಂದಿ ದಿವಸ್‌’ ಆಚರಣೆಯ ಹೆಸರಿನಲ್ಲಿ ಅನ್ಯಭಾಷಿಕರ ಮೇಲೆ ಹಿಂದಿ ಹೇರಿಕೆ ಮಾಡುವ ಹುನ್ನಾರ ನಡೆಸುತ್ತಿದೆ. ಇದನ್ನು ಖಂಡಿಸಿ ಅಂದು ಬೆಳಗ್ಗೆ 11ಕ್ಕೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಪ್ರತಿಭಟನೆ ಹಮ್ಮಿಕೊಂಡಿದೆ.

ಗುರುವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು, ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ. ಈ ಮೂಲಕ ದೇಶವನ್ನು ಒಡೆಯುವ ಹುನ್ನಾರ ನಡೆಸುತ್ತಿದೆ. ಭಾರತದ ಭೌಗೋಳಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಭಾಷಿಕ ವೈವಿಧ್ಯತೆಯನ್ನು ಹಾಳು ಮಾಡಲು ಹಿಂದಿ ಸಾಮ್ರಾಜ್ಯಶಾಹಿಗಳು ನಿರಂತರವಾಗಿ ಪ್ರಯತ್ನಿಸುತ್ತಿರುವುದು ಖಂಡನೀಯ ಎಂದಿದ್ದಾರೆ.

Latest Videos

ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರಕ್ಕೆ ಒಂದು ತಿಂಗಳ ಗಡುವು ಕೊಟ್ಟ ಕರ್ನಾಟಕ ರಕ್ಷಣಾ ವೇದಿಕೆ

ಕೇಂದ್ರ ಸರ್ಕಾರ ಈ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವ ಎಲ್ಲ 22 ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ಈ ದೇಶದ ಬಹುತ್ವ, ಸಾರ್ವಭೌಮತೆಯನ್ನು ಕಾಪಾಡಬೇಕು. ಹಿಂದಿಗೆ ಅನೈತಿಕವಾಗಿ ಮನ್ನಣೆ ನೀಡುವ ಸಂವಿಧಾನದ 343ರಿಂದ 351ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲ ಭಾಷೆಗಳೂ ಒಕ್ಕೂಟದ ದೃಷ್ಟಿಯಲ್ಲಿ ಸಮಾನ ಎಂದು ಸಾರಬೇಕು ಎಂದು ಆಗ್ರಹಿಸಿದ್ದಾರೆ.

ವಾಹನ ಸವಾರರೇ HSRP ಇನ್ನೂ ಅಳವಡಿಸಿಲ್ವ? ನಾಡಿದ್ದು ಕೊನೆ ದಿನ ಇಂದೇ ಅಳವಡಿಸಿ ಇಲ್ಲಿದೆ ಲಿಂಕ್

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಕೇಂದ್ರ ಸರ್ಕಾರಿ ಇಲಾಖೆಗಳು, ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಎಲ್ಲ ಬಗೆಯ ಪತ್ರ ವ್ಯವಹಾರಗಳೂ ಕನ್ನಡದಲ್ಲೇ ನಡೆಯಬೇಕು. ಅಂತಾರಾಜ್ಯ ವ್ಯವಹಾರಗಳು ಮತ್ತು ಕೇಂದ್ರ ಸರ್ಕಾರದೊಂದಿಗಿನ ವ್ಯವಹಾರಗಳೂ ಸಹ ಕನ್ನಡ ನುಡಿಯಲ್ಲೇ ಆಗಬೇಕು. ರಾಜ್ಯದಲ್ಲಿ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ ಜಾರಿಗೆ ಬರಬೇಕು. ನಮ್ಮ ಶಾಲಾ ಪಠ್ಯಕ್ರಮಗಳಿಂದ ಹಿಂದಿ ಕಡ್ಡಾಯ ಕಲಿಕೆ ಕೊನೆಗೊಳ್ಳಬೇಕು ಎಂದು ಸೆ.14ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಆಗ್ರಹಿಸಲಾಗುವುದು ಎಂದು ನಾರಾಯಣಗೌಡ ತಿಳಿಸಿದ್ದಾರೆ.

click me!