Tejasvi Surya metro protest case: ಅನುಮತಿ ಇಲ್ಲದೆ ಪ್ರತಿಭಟನೆ; ಸಂಸದ ತೇಜಸ್ವಿ ಸೂರ್ಯ ಸೇರಿ 9 ಮಂದಿಗೆ ನೋಟಿಸ್‌!

Kannadaprabha News, Ravi Janekal |   | Kannada Prabha
Published : Feb 19, 2026, 07:20 AM IST
Protest Without Permission Notice Issued to MP Tejasvi Surya and 8 Others

ಸಾರಾಂಶ

Namma Metro fare hike protest ಜಯನಗರದ ಆರ್‌.ವಿ.ಮೆಟ್ರೋ ನಿಲ್ದಾಣದ ಬಳಿ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ.ರಾಮಮೂರ್ತಿ ಸೇರಿದಂತೆ 9 ಮಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. 

ಬೆಂಗಳೂರು (ಫೆ.19) ಅನುಮತಿ ಪಡೆಯದೆ ಜಯನಗರದ ಆರ್‌.ವಿ.ಮೆಟ್ರೋ ರೈಲು ನಿಲ್ದಾಣದ ಬಳಿ ಪ್ರತಿಭಟನೆ ಮಾಡಿದ ಆರೋಪದ ಪ್ರಕರಣ ಸಂಬಂಧ ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ.ರಾಮಮೂರ್ತಿ ಸೇರಿ 9 ಮಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್‌ ಜಾರಿಗೊಳಿಸಿದೆ.

ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ಆರ್‌.ದೀಪಕ್‌ ಸಲ್ಲಿಸಿದ ಖಾಸಗಿ ದೂರು(ಪಿಸಿಆರ್‌) ಕುರಿತು ಬುಧವಾರ ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪಿಗಳಿಗೆ ನೋಟಿಸ್‌ ಜಾರಿಗೊಳಿಸಿತು. ಬಳಿಕ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಮುಂದಿನ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿತು.

ಇದನ್ನೂ ಓದಿ: Namma Metro fare hike: 'ಸುಳ್ಳು ಹೇಳೋಕೆ ನಾಚಿಕೆ ಆಗೋಲ್ವಾ? ಏನು ತಿಂತೀರಿ?' ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಕಿಡಿ

ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿರೋಧಿಸಿ ಫೆ.9ರಂದು ಸಂಸದ ತೇಜಸ್ವಿಸೂರ್ಯ, ಶಾಸಕ ಸಿ.ಕೆ.ರಾಮಮೂರ್ತಿ ಸೇರಿದಂತೆ ಕೆಲವರು ಜಯನಗರದ ಆರ್‌.ವಿ. ಮೆಟ್ರೋ ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ್ದರು. ಅನುಮತಿ ಪಡೆಯದೇ ಪ್ರತಿಭಟನೆ ಮಾಡಲಾಗಿದೆ ಎಂದು ಆರೋಪಿಸಿ ಜಯನಗರ ಠಾಣೆ ಇನ್ಸ್‌ಪೆಕ್ಟರ್ ಆರ್‌.ದೀಪಕ್‌ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು.

ಇದನ್ನೂ ಓದಿ: HD kumaraswamy: ಬೇರೆ ರಾಜ್ಯಗಳಲ್ಲಿ ಯಾಕೆ ಮೆಟ್ರೋ ದರ ಹೆಚ್ಚಳವಾಗಿಲ್ಲ? ಕೇಂದ್ರದ ಮೇಲೆ ಗೂಬೆ ಕೂರಿಸೋದು ಕಾಂಗ್ರೆಸ್ ಚಾಳಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Apollo Robotic knee replacement for teens: 17ರ ಬಾಲಕನಿಗೆ ಯಶಸ್ವಿಯಾಗಿ ರೋಬೊಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಮಾಡಿದ ಅಪೋಲೋ!
ಬೆಂಗಳೂರಿಗೆ ಮತ್ತೆ ಕಸಬಿಸಿ! ನಗರದಲ್ಲಿ ಪ್ರತಿದಿನ 6,000 ಟನ್‌ ಕಸ ಉತ್ಪತ್ತಿ!