ವಿದ್ಯುತ್‌ ದರ ಏರಿಕೆ ವಿರುದ್ಧ ರಾಜ್ಯದ ಹಲವೆಡೆ ಪ್ರತಿಭಟನೆ

Published : Jun 13, 2023, 07:00 AM IST
ವಿದ್ಯುತ್‌ ದರ ಏರಿಕೆ ವಿರುದ್ಧ ರಾಜ್ಯದ ಹಲವೆಡೆ ಪ್ರತಿಭಟನೆ

ಸಾರಾಂಶ

ಬೆಳಗಾವಿಯ ರಾಮದುರ್ಗದಲ್ಲಿ ತಾಲೂಕು ನೇಕಾರರ ವೇದಿಕೆಯಿಂದ ತಮಟೆ ಬಾರಿಸುವ ಮೂಲಕ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ. ಬಳ್ಳಾರಿ ನಗರದ ಕಾಳಮ್ಮ ಬೀದಿಯ ಅಂಗಡಿ ಮಾಲೀಕರು ದಿನದ ವಹಿವಾಟು ಬಂದ್‌ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಅವೈಜ್ಞಾನಿಕವಾಗಿರುವ ವಿದ್ಯುತ್‌ ದರ ಏರಿಕೆ ನೀತಿಯಿಂದ ವ್ಯಾಪಾರಿಗಳು ಕಂಗಾಲಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬೆಳಗಾವಿ/ಬಳ್ಳಾರಿ(ಜೂ.13):  ವಿದ್ಯುತ್‌ ದರ ದಿಢೀರ್‌ ಏರಿಕೆಗೆ ಜನಸಾಮಾನ್ಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿ ಪ್ರತಿಭಟನೆಗಳು ನಡೆದ ಬೆನ್ನಲ್ಲೇ ಇದೀಗ ವರ್ತಕರು, ನೇಕಾರರು ಮತ್ತು ಕೈಗಾರಿಕೋದ್ಯಮಿಗಳಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿದ್ಯುತ್‌ ದರ ಹೆಚ್ಚಳ ಖಂಡಿಸಿ ಬೆಳಗಾವಿಯಲ್ಲಿ ನೇಕಾರರು ಪ್ರತಿಭಟನೆ ನಡೆಸಿದರೆ, ಬಳ್ಳಾರಿಯಲ್ಲಿ ವರ್ತಕರು ಸೋಮವಾರ ಅಂಗಡಿ ಬಂದ್‌ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಈ ಮಧ್ಯೆ, ಬೆಳಗಾವಿಯಲ್ಲಿ ವಾಣಿಜ್ಯೋದ್ಯಮ ಸಂಸ್ಥೆಯಿಂದ ಮಂಗಳವಾರ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಬೆಳಗಾವಿಯ ರಾಮದುರ್ಗದಲ್ಲಿ ತಾಲೂಕು ನೇಕಾರರ ವೇದಿಕೆಯಿಂದ ತಮಟೆ ಬಾರಿಸುವ ಮೂಲಕ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ. ಬಾನಕಾರ ಪೇಟೆಯ ಬನಶಂಕರಿ ದೇವಸ್ಥಾನದಿಂದ ಹೊರಟ ಪ್ರತಿಭಟನಾಕಾರರು ನೇಕಾರ ಪೇಟೆಯ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಹೊಸ ಬಾಡಿಗೆದಾರರು, ಹೊಸ ಮನೆಗೆ 58 ಯುನಿಟ್‌ ಉಚಿತ: ಸಚಿವ ಜಾರ್ಜ್‌

ಇನ್ನು ಬಳ್ಳಾರಿ ನಗರದ ಕಾಳಮ್ಮ ಬೀದಿಯ ಅಂಗಡಿ ಮಾಲೀಕರು ದಿನದ ವಹಿವಾಟು ಬಂದ್‌ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಅವೈಜ್ಞಾನಿಕವಾಗಿರುವ ವಿದ್ಯುತ್‌ ದರ ಏರಿಕೆ ನೀತಿಯಿಂದ ವ್ಯಾಪಾರಿಗಳು ಕಂಗಾಲಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇಂದು ಪ್ರತಿಭಟನೆ:

ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆ ಕೂಡ ವಿದ್ಯುತ್‌ ದರ ಏರಿಕೆಗೆ ಅಸಮಾಧಾನ ಹೊರಹಾಕಿದ್ದು, ಮಂಗಳವಾರ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ವಿದ್ಯುತ್‌ ದರ ಈ ರೀತಿ ಏರಿಸಿದರೆ ಉದ್ಯಮಗಳು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೋಗಬೇಕಾಗುತ್ತದೆ ಎಂದು ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಹೇಮಂತ್‌ ಪೋರವಾಲ್‌ ಹೇಳಿದ್ದಾರೆ. ಜತೆಗೆ, ವಿದ್ಯುತ್‌ ದರ ಏರಿಕೆ ಸಂಬಂಧಿಸಿ ನಮ್ಮ ಬೇಡಿಕೆ ಈಡೇರದಿದ್ದರೆ ಕರ್ನಾಟಕ ಬಂದ್‌ ನಡೆಸಲಾಗುವುದು ಎಂದೂ ಎಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

20000 ರೈತರ ಜತೆ ಸೇರಿ ಡಿ. 9ಕ್ಕೆ ಸುವರ್ಣಸೌಧಕ್ಕೆ ಮುತ್ತಿಗೆ : ಬಿವೈವಿ
ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ