* ಕರ್ನಾಟಕದಲ್ಲಿ 33 ಲಕ್ಷ ರೈತರಿಗೆ ಸಾಲ ನೀಡಲು ತೀರ್ಮಾನ
* ರಾಜ್ಯದಲ್ಲಿ 24 ಸಾವಿರ ಕೋಟಿ ರೂಪಾಯಿ ಸಾಲ
* ಇದರಲ್ಲಿ ಮೂರು ಲಕ್ಷ ಹೊಸ ರೈತರಿಗೆ ಸಾಲ ನೀಡಲು ನಿರ್ಧರಿಸಲಾಗಿದೆ
* ದಾವಣಗೆರೆ ಯಲ್ಲಿ ಸಹಹಾರ ಇಲಾಖೆ ಸಚಿವ ಎಸ್ ಟಿ ಸೋಮಶೇಖರ್ ಹೇಳಿಕೆ
ದಾವಣಗೆರೆ, (ಜೂನ್.28): ರಾಜ್ಯದಲ್ಲಿ 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ನೀಡಲು ನಿರ್ಧರಿಸಲಾಗಿದೆ. ಇದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡಲು ತೀರ್ಮಾನಿಸಲಾಗಿದೆ ಎಂದು ಸಹಹಾರ ಇಲಾಖೆ ಸಚಿವ ಎಸ್ಟಿ ಸೋಮಶೇಖರ್ (ST Somashekar) ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ನೀಡುವಲ್ಲಿ ಯಾವುದೇ ರೀತಿ ಗೊಂದಲಕ್ಕೆ ಆಸ್ಪದವಿಲ್ಲ. ಅಕ್ಟೋಬರ್ 2ರಿಂದ ಯಶಸ್ವಿನಿ ಯೋಜನೆ ಜಾರಿಯಾಗುವ ಸಾಧ್ಯತೆಯಿದೆ. ಮಹತ್ವಾಕಾಂಕ್ಷೆ ಯಶಸ್ವಿನಿ ಯೋಜನೆ ಮತ್ತೆ ಆರಂಭವಾಗಲಿದೆ. ಈಗಾಗಲೇ ಇಲಾಖೆ ಕಡೆಯಿಂದ ಎಲ್ಲ ತಯಾರಿ ಆಗಿದೆ ಎಂದು ಮಾಹಿತಿ ನೀಡಿದರು.
ಈಗಾಗಲೇ ಹಾಲು ಉತ್ಪಾಕರಿಗೆ ಅನುಕೂಲ ಆಗುವಂತೆ ಕ್ಷೀರ ಸಹಕಾರ ಬ್ಯಾಂಕ್ ಆರಂಭಿಸುವ ಯೋಜನೆ ಇದೆ. 9 ಲಕ್ಷ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುವ ಉದ್ದೇಶವಿದೆ ಎಂದು ಹೇಳಿದರು.
Raichur ಬಾರೋ...ಬಾರೋ ಮಳೆರಾಯ...ನಿತ್ಯ ಮಳೆಗಾಗಿ ಜಪಿಸುತ್ತಿರುವ ಅನ್ನದಾತರು!
ಎಚ್‌ಡಿಕೆಗೆ ಸೋಮಶೇಖರ್ ಎಚ್ಚರಿಕೆ:
ಇದೇ ವೇಳೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಸೋಮಶೇಖರ್, ಮಾತನಾಡುವಾಗ ಹೆಚ್ಡಿಕೆ ಸ್ವಲ್ಪ ಘನತೆಯಿಂದ ಮಾತಾಡಲಿ. ಆರ್ಎಸ್ಎಸ್ನವರಿಗೆ 40% ಕಮಿಷನ್ ಕೊಡುತ್ತಾರೆ ಅಂದರೆ ಏನು ಅರ್ಥ. ದೇಶಭಕ್ತ ಸಂಘಟನೆ ಆರ್ಎಸ್ಎಸ್ ಬಗ್ಗೆ ಮಾತನಾಡುವುದು ಸರಿಯಲ್ಲ ಕುಮಾರಸ್ವಾಮಿಗೆ ಏನು ಮಾತಾಡಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಸಂಪೂರ್ಣ ಹತಾಶರಾಗಿದ್ದಾರೆ. ಇದೇ ಕಾರಣಕ್ಕೆ ಈ ರೀತಿಯಾದ ಆರೋಪಗಳನ್ನ ಮಾಡುತ್ತಿದ್ದಾರೆ. ಇಂತಹ ಹೇಳಿಕೆ ನೀಡುವಾಗ ಸ್ವಲ್ಪ ವಿಚಾರಿಸಿ ಮಾತನಾಡಬೇಕು ಎಚ್ಚರಿಕೆ ನೀಡಿದರು.
ಸಚಿವ ಬೈರತಿ ಬಸವರಾಜ್ ಹೇಳಿಕೆ
ಇನ್ನು ಇದೇ ವೇಳೆ ಮತ್ತೋರ್ವ ಸಚಿವ ಬೈರತಿ ಬಸವರಾಜ್ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಪರಮ ಪೂಜ್ಯರ ಜೊತೆ ಸಿಎಂ ಬಳಿ ನಾನು ಹೋಗಿದ್ದೇ. ಅದಕ್ಕೆ ಬೇರೆ ಆರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ. ಹಿಂದಿನ ಅವಧಿಯಲ್ಲಿ ಕೂಡ ಅನೇಕ ತಪ್ಪು ಆಗಿವೆ. ಅದನ್ನು ಸರಿಪಡಿಸಿಸುತ್ತೇವೆ. ಸಿಎಂ ಸಕಾರಾತ್ಮಕವಾಗಿ ಒಪ್ಪಿ ಮಾಡಿಕೊಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.
ಪರಮ ಪೂಜ್ಯರು ಕೂಡ ಸಂತೋಷದಿಂದ ಒಪ್ಪಿದ್ದಾರೆ. ಕಾಂಗ್ರೇಸ್ ನವರು ಪಠ್ಯ ಪುಸ್ತಕ ವಿಚಾರದಲ್ಲಿ ವೈಭವೀಕರಣ ಮಾಡ್ತಾ ಇದಾರೆ. ಅವರ ಅವಧಿಯಲ್ಲಿ ತಪ್ಪು ಆಗಿದೆ, ಅವರ ಬೆನ್ನನ್ನು ಕೂಡ ಅವರು ನೋಡಿಕೊಳ್ಳಬೇಕು. ಏನಾದ್ರು ತಪ್ಪು ಇದ್ದರೆ ಅದನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಸ್ಪಷ್ಟಪಡಿಸಿದರು.
ಬೇರೆ ಪಕ್ಷಗಳ ಪ್ರಮುಖ ನಾಯಕರು ಬಿಜೆಪಿಗೆ ಬರಲಿದ್ದಾರೆ. ಮುಂದಿನ ದಿನಗಳಲ್ಲಿ ಸಾಕಷ್ಟು ನಾಯಕರು ಪಕ್ಷಕ್ಕೆ ಬರಲಿದ್ದಾರೆ. ಯಾರೆಲ್ಲ ಬರುತ್ತಾರೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ಹೊಸ ಬಾಂಬ್ ಹಾಕಿದರು.
ಪಠ್ಯ ಪರಿಷ್ಕರಣೆ ವಿಚಾರವನ್ನು ಕಾಂಗ್ರೆಸ್ ದೊಡ್ಡದು ಮಾಡುತ್ತಿದೆ. ಕಾಂಗ್ರೆಸ್ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಕೈ ಬಿಡಲಿ. ಪಠ್ಯ ಪರಿಷ್ಕರಣೆ ವಿಚಾರವಾಗಿ ಎಲ್ಲರ ಮನವಿಗಳಿಗೂ ಸಿಎಂ ಬೊಮ್ಮಾಯಿ ಸ್ಪಂದಿಸಿದ್ದಾರೆ ಎಂದರು.