Chitradurga: ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್. ವಸ್ತ್ರದ್‌ ನೇಮಕ

By Sathish Kumar KH  |  First Published Dec 13, 2022, 5:13 PM IST

ಚಿತ್ರದುರ್ಗದ ಮುರುಘ ರಾಜೇಂದ್ರ ಮಠದ ಆಡಳಿತ, ಹಣಕಾಸು ವ್ಯವಹಾರ ಮತ್ತು ಸ್ಥಿರಾಸ್ತಿಯನ್ನು ರಕ್ಷಣೆ ಮಾಡುವ ಹಿತದೃಷ್ಟಿಯಿಂದ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್. ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


ಬೆಂಗಳೂರು (ಡಿ.13): ಬಾಲಕಿಯರ ಮೇಲೆ ಅತ್ಯಾಚಾರ ಮಾಡಿರುವ ಆರೋಪದಡಿ ಪೋಕ್ಸೋ ಪ್ರಕರಣದಡಿ ಚಿತ್ರದುರ್ಗದ ಮುರುಘ ರಾಜೇಂದ್ರ ಮಠದ ಪೀಠಾಧ್ಯಕ್ಷ ಶ್ರೀ ಶಿವಮೂರ್ತಿ ಶರಣರು ಜೈಲು ಸೇರಿದ್ದಾರೆ, ಈ ಹಿನ್ನೆಲೆಯಲ್ಲಿ ಮಠದ ಆಡಳಿತ, ಹಣಕಾಸು ವ್ಯವಹಾರ ಮತ್ತು ಸ್ಥಿರಾಸ್ತಿಯನ್ನು ರಕ್ಷಣೆ ಮಾಡುವ ಹಿತದೃಷ್ಟಿಯಿಂದ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್. ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹತ್ಯಠದ ಪೀಠಾಧಿಪತಿ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ಸೆ.1 ರಿಂದ ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ ಸದರಿ ಸಂಸ್ಥೆಯ ನಿರ್ವಹಣೆಯಲ್ಲಿ ಈ ಸಂಸ್ಥೆಯ ದಿನನಿತ್ಯದ ಕಾರ್ಯಚಟುವಟಣೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಸಾರ್ವಜನಿಕ ಹಿತದೃಷ್ಟಿಯಿಂದ ಮಠದ ಚರ ಸ್ಥಿರ ಆಸ್ತಿಗಳನ್ನು ಸಂರಕ್ಷಣೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮಠದ ಆಡಳಿತ ಆಸ್ತಿ ಸಂರಕ್ಷಣೆ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸುವ ಹಿತದೃಷ್ಟಿಯಿಂದ ಪಿ.ಎಸ್.ವಸ್ತ್ರದ್ ಐ.ಎ.ಎಸ್ (ನಿವೃತ್ತರು) ಇವರನ್ನು ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ 'ಆಡಳಿತಾಧಿಕಾರಿ'ಯನ್ನಾಗಿ ನೇಮಿಸಿ ಆದೇಶಿಸಿದೆ.

Tap to resize

Latest Videos

ಇನ್ನು ಆಡಳಿತಾಧಿಕಾರಿಯಾಗಿ ನೇಮಕ ಆಗಿರುವ ವಸ್ತ್ರದ್‌ ಅವರು ಲೆಕ್ಕಪತ್ರ ನಿರ್ವಹಣೆ, ಮಠದ ಚರ ಸ್ಥಿರಾಸ್ತಿ ಹಿತದೃಷ್ಟಿ ಹಾಗೂ ಮುರುಘಾಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಜವಾಬ್ದಾರಿ ನೋಡಿಕೊಳ್ಳಬೇಕಿದೆ. ಮುಂದಿನ ಆದೇಶದವರೆಗೆ ಮಠದ ಎಲ್ಲ ನಿರ್ವಹಣೆ ಕಾರ್ಯಗಳನ್ನು ನೋಡಿಕೊಳ್ಳಬೇಕಿದೆ.

ಮುರುಘಾ ಮಠಕ್ಕೆ ಹೊಸ ಪೀಠಾಧಿಪತಿ ನೇಮಕಕ್ಕೆ ವೀರಶೈವ ಮಹಾಸಭಾ ಆಗ್ರಹ: 30 ಜಿಲ್ಲೆಗಳಿಂದ ಪಾದಯಾತ್ರೆ ನಿರ್ಣಯ 

ಜಿಲ್ಲಾಧಿಕಾರಿ ಮೊದಲ ವರದಿ: ರಾಜ್ಯ ಸರ್ಕಾರಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾಪ್ರಭು ಅವರು ಸಲ್ಲಿಕೆ ಮಾಡಿದ ವರದಿಯಲ್ಲಿ ಚಿತ್ರದುರ್ಗ ಜಿಲ್ಲೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಆ.26 ಮತ್ತು ಅ.13ರಂದು ಮೈಸೂರು ನಗರದ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿ ಕೇಸು ದಾಖಲಾಗಿದ್ದು, ಸದರಿ ಪ್ರಕರಣವು ಚಿತ್ರದುರ್ಗ ಜಿಲ್ಲೆಗೆ ವರ್ಗಾವಣೆಯಾಗಿ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಜೊತೆಗೆ ಈ ಕೇಸ್ ಸಂಬಂಧ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿ ಇರುವುದಾಗಿ ವರದಿ ನೀಡಿದ್ದರು. 

ಅಡ್ವೊಕೇಟ್ ಜನರ್‌ ಅಭಿಪ್ರಾಯ:  ಜಿಲ್ಲಾಧಿಕಾಇ ವರದಿ ನಂತರ ರಾಜ್ಯದ ಅಡ್ವಕೇಟ್ ಜನರಲ್, ಅಭಿಪ್ರಾಯವನ್ನು ಕೋರಲಾಗಿದ್ದು, ಮಠದ ಟ್ರಸ್ಟಿಯಾಗಿರುವ ಶ್ರೀ ಶಿವಮೂರ್ತಿ ಮುರು ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಟ್ರಸ್ಟಿನ ಸ್ವತ್ತನ್ನು ರಕ್ಷಿಸುವ ದೃಷ್ಟಿಯಿಂದ ಭಾರತ ಸಂವಿಧಾನದ ಅನುಚ್ಛೇದ 82ರನ್ವಯ ಸರ್ಕಾರವು ಸದರಿ ಸಂಸ್ಥೆಗೆ ಆಡಳಿತಾಧಿಕಾರಿ ನೇಮಿಸುವುದು ಸೂಕ್ತವೆಂದು ಸರ್ಕಾರಕ್ಕೆ ಅಭಿಪ್ರಾಯ ತಿಳಿಸಿದ್ದರು. ಈ ಅಭಿಪ್ರಾಯವನ್ನು ಪರಿಶೀಲಿಸಿ ನ.4ರಂದು ಜಿಲ್ಲಾಧಿಕಾರಿಗೆ ಮಠದ ವಾಸ್ತವ ಸ್ಥಿತಿ ವರದಿಯನ್ನು ಸ್ಪಷ್ಟ ಅಭಿಪ್ರಾಯದೊಂದಿಗೆ ಸಲ್ಲಿಸುವಂತೆ ಸರ್ಕಾರ ಸೂಚಿಸಲಾಗಿತ್ತು. 

ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌ ಕಳವಳ

ಜಿಲ್ಲಾಧಿಕಾರಿ 2ನೇ ವರದಿ: ಮಠಕ್ಕೆ ಆಡಳಿತಾಧಿಕಾರಿ ನೇಮಕ ಕುರಿತು ಜಿಲ್ಲಾಧಿಕಾರಿ ದಿವ್ಯಾಪ್ರಭು ಅವರು ಎರಡನೇ ಬಾರಿಗೆ  ನ.10ರಂದು ಸಲ್ಲಿಸಿದ ವರದಿಯಲ್ಲಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಮಠದ ಟ್ರಸ್ಟಿಯಾಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ಸೆ.1ರಿಂದ ನ್ಯಾಯಾಂಗ ಬಂಧನದಲ್ಲರುವುದರಿಂದ ಮಠದ ಒಟ್ಟು ಸ್ಥಿರಾಸ್ತಿಗೆ ಮತ್ತು ಮಠದ ಹಣಕಾಸು ನಿರ್ವಹಣೆಯನ್ನು ನೋಡಿಕೊಳ್ಳುವುದು ಕಷ್ಟಕರವಾಗಿರುತ್ತದೆ. ಈ ಟ್ರಸ್ಟ್ ಸಾರ್ವಜನಿಕ ಟ್ರಸ್ಟ್ ಆಗಿರುವುದರಿಂದ ಆಸ್ತಿಗಳ ನಿರ್ವಹಣೆಗಳ ತೊಡಕುಂಟಾಗುತ್ತಿದೆ. ದುರಾಡಳಿತ ಹಾಗೂ ಹಣಕಾಸು ದುರುಪಯೋಗ ಆದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆಯಾಗುವ ಸಂಭವ ಇರುತ್ತದೆ. ಆದ ಕಾರಣ ಟ್ರಸ್ಟ್ ಮತ್ತು ವಿದ್ಯಾಸಂಸ್ಥೆಯ ನಿರ್ವಹಣೆಗೂ ಸಹ ತೊಂದರೆ ಉಂಟಾಗುತ್ತದೆ. ಸದರಿ ಸಂಸ್ಥೆಗೆ ಶ್ರೀ ಶಿವಮೂರ್ತಿ ಮುರುಘಾ ಶರಣರು ಮಠದ ಅಜೀವ ಪೀಠಾಧಿಪತಿ ಹಾಗೂ ವಿದ್ಯಾ ಸಂಸ್ಥೆಗೆ ಅಜೀವ ಅಧ್ಯಕ್ಷರು ಆಗಿರುವುದರಿಂದ ಮಠದ ಹಾಗೂ ವಿದ್ಯಾ ಸಂಸ್ಥೆಗಳ ಅನಾನುಕೂಲಗಳನ್ನು ತಪ್ಪಿಸಲು ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವುದು ಅವಶ್ಯಕತೆ ಇದೆ ಎಂದು ವರದಿಯಲ್ಲಿ ತಿಳಿಸಿದ್ದರು.

ಸಾರ್ವಜನಿಕ ಆಸ್ತಿ ರಕ್ಷಣೆಗಾಗಿ ಆಡಳಿತಾಧಿಕಾರಿ ನೇಮಕ: ರಾಜ್ಯದ ಅಡ್ವಕೇಟ್ ಜನರಲ್ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ವರದಿ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ, ಸಾರ್ವಜನಿಕ ಹಿತಾಸಕ್ತಿಗೆ ದಕ್ಕೆಯಾಗುವ ಸಂಭವವಿರುವುದರಿಂದ ಮಠದ ಆಡಳಿತದಲ್ಲಿ ಅವ್ಯವಹಾರ ಹಾಗೂ ಹಣಕಾಸಿನ ದುರುಪಯೋಗ ಹಾಗೂ ಆಸ್ತಿಗಳ ಪರಬಾರೆ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಯನ್ನು ನೇಮಿಸುವುದು ಅವಶ್ಯಕವೆಂದು ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್. ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

click me!